ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಕಾರ್ಯಕಾರಿಣಿ ಸಭೆ
ಕೊಣಾಜೆ, ಅ.19: ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಜನಮನ್ನಣೆಯನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಬೋಳಿಯಾರ್ ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ಮಂಗಳೂರು ಸ್ಮಾರ್ಟ್‌ಸಿಟಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅದಕ್ಕಾಗಿ ಶ್ರಮಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು.
ಬಿಜೆಪಿ ಮುಖಂಡ ಚಂದ್ರಹಾಸ್ ಉಳ್ಳಾಲ್ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯಕಾರಿಣಿಯ ರಾಮಚಂದ್ರ ರೈ, ಬಿಜೆಪಿ ಮುಖಂಡರಾದ ಬ್ರಿಜೇಶ್ ಚೌಟ, ರವೀಂದ್ರ ಶೆಟ್ಟಿ ಉಳಿದೊಟ್ಟು, ಸತೀಶ್ ಕುಂಪಲ, ನಮಿತಾ ಶ್ಯಾಮ್, ಡಾ.ಮುನೀರ್ ಭಾವ, ಪ್ರಶಾಂತ್ ಗಟ್ಟಿ, ಮನೋಜ್ ಆಚಾರ್ಯ, ದನ್ಯವತಿ ಉಪಸ್ಥಿತರಿದ್ದರು. ಮೋಹನ್ ರಾಜ್ ಸ್ವಾಗತಿಸಿದರು. ರಾಜೇಶ್ ಶೆಟ್ಟಿ ಪಜೀರುಗುತ್ತು ಕಾರ್ಯಕ್ರಮವನ್ನು ನಿರೂಪಿಸಿದರು.





