ಇಂದಿನ ಕಾರ್ಯಕ್ರಮಗಳು
ಉಡುಪಿ ಜಿಲ್ಲೆ
ಸಂಸ್ಥಾಪಕರ ದಿನಾಚರಣೆ: ಸಿಂಡಿಕೇಟ್ ಬ್ಯಾಂಕ್‌ನ 91ನೆ ಸಂಸ್ಥಾಪಕರ ದಿನಾಚರಣೆ ಹಾಗೂ ಗಣ್ಯರಿಗೆ ಸನ್ಮಾನ. ಭಾಗವಹಿಸುವವರು ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್. ಸಮಯ: ಸಂಜೆ 4ಕ್ಕೆ. ಸ್ಥಳ: ಸಿಂಡಿಕೇಟ್ ಬ್ಯಾಂಕ್‌ನ ಗೋಲ್ಡನ್ ಜ್ಯುಬಿಲಿ ಹಾಲ್, ಮಣಿಪಾಲ. ಚಿಟ್ಟಾಣಿ ಸಪ್ತಾಹ: ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ ಬಂಗಾರಮಕ್ಕಿ ಮತ್ತು ಅತಿಥಿ ಕಲಾವಿದರ ಸಹಯೋಗದಲ್ಲಿ ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗ ಆಯೋಜಿಸಿರುವ 9ನೆ ವರ್ಷದ ಚಿಟ್ಟಾಣಿ ಯಕ್ಷಗಾನ ಸಪ್ತಾಹದಲ್ಲಿ ಇಂದಿನ ಯಕ್ಷಗಾನ ‘ಚಕ್ರ ಚಂಡಿಕೆ’. ಸಮಯ: ಸಂಜೆ 6:30ರಿಂದ. ಸ್ಥಳ: ಶ್ರೀಕೃಷ್ಣ ಮಠದ ರಾಜಾಂಗಣ, ಉಡುಪಿ.
ಪೇಜಾವರ ಶ್ರೀಗಳ ಪರ್ಯಾಯದಲ್ಲಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಂಜೆ 5ಕ್ಕೆ ಚಂದ್ರಶಾಲೆ ಪುರಾಣ ಉಡುಪಿಯ ವಿದ್ವಾನ್ ಬ್ರಹ್ಮಣ್ಯತೀರ್ಥಾಚಾರ್ಯರಿಂದ ಪ್ರವಚನ, 5:45ಕ್ಕೆ ರಾಜಾಂಗಣದಲ್ಲಿ ಧಾರ್ಮಿಕ ಉಪನ್ಯಾಸ ವಿದ್ವಾನ್ ಉಮರ್ಜಿ ಶ್ರೀನಿವಾಸ ಆಚಾರ್ಯರಿಂದ. ಬಳಿಕ ಪೇಜಾವರ ಶ್ರೀಗಳಿಂದ ಅನುಗ್ರಹ ಸಂದೇಶ. ಸಂಜೆ 7ರಿಂದ ರಾಜಾಂಗಣದಲ್ಲಿ ಚಿಟ್ಟಾಣಿ ಯಕ್ಷಗಾನ ಸಪ್ತಾಹ.





