ಪಾಕ್ನಿಂದ ಕದನ ವಿರಾಮ ಉಲ್ಲಂಘನೆ : ಗಡಿಯಲ್ಲಿ ಭಾರೀ ಗುಂಡಿನ ಚಕಮಕಿ
ಜಮ್ಮು,ಅ.20: ಪಾಕಿಸ್ತಾನವು ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದೆ. ನಿನ್ನೆ ರಾತ್ರಿಯಿಂದ ರಜೌರಿ ಜಿಲ್ಲೆಯ ಭಿಂಬರ್ ಗಲಿ ವಿಭಾಗದಲ್ಲಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನಿ ಸೈನಿಕರು ಭಾರಿ ಶೆಲ್ ದಾಳಿ ನಡೆಸಿದ್ದು, ಭಾರತೀಯ ಯೋಧರು ತಕ್ಕ ಉತ್ತರ ನೀಡಿದ್ದಾರೆ. ಬೆಳಿಗ್ಗೆಯೂ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ.
ಕಳೆದ 15 ಗಂಟೆಗಳಿಂದಲೂ ಗುಂಡಿನ ಚಕಮಕಿ ನಡೆಯುತ್ತಿದೆ. ಪಾಕ್ ಸೈನಿಕರು ನಿನ್ನೆ ರಾತ್ರಿ ಭಾರತೀಯ ಸೇನಾನೆಲೆಗಳ ಮೇಲೆ ಅಪ್ರಚೋದಿತ ದಾಳಿಯನ್ನು ಆರಂಭಿಸಿದ್ದು,ನಮ್ಮ ಯೋಧರು ತಕ್ಕ ಉತ್ತರ ನೀಡುತ್ತಿದ್ದಾರೆ ಎಂದು ರಕ್ಷಣಾ ವಕ್ತಾರರು ಇಂದಿಲ್ಲಿ ತಿಳಿಸಿದರು
ಪಾಕ್ ಆಕ್ರಮಿತ ಕಾಶ್ಮೀರದಲ್ಲಿಯ ಭಯೋತ್ಪಾದಕರ ಶಿಬಿರಗಳ ಮೇಲೆ ಭಾರತವು ಸರ್ಜಿಕಲ್ ದಾಳಿಗಳನ್ನು ನಡೆಸಿದ ಬಳಿಕ ಪಾಕಿಸ್ತಾನವು 30 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ.
Next Story