Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಉಡುಪಿ ಚಲೋ’ ಜೊತೆ ಕಾಂಗ್ರೆಸ್‌ಗೆ...

‘ಉಡುಪಿ ಚಲೋ’ ಜೊತೆ ಕಾಂಗ್ರೆಸ್‌ಗೆ ಸಂಬಂಧವಿಲ್ಲ, ಸಹಮತವಿದೆ: ಪಿ.ವಿ.ಮೋಹನ್

ವಾರ್ತಾಭಾರತಿವಾರ್ತಾಭಾರತಿ20 Oct 2016 5:18 PM IST
share
‘ಉಡುಪಿ ಚಲೋ’ ಜೊತೆ ಕಾಂಗ್ರೆಸ್‌ಗೆ ಸಂಬಂಧವಿಲ್ಲ, ಸಹಮತವಿದೆ: ಪಿ.ವಿ.ಮೋಹನ್

ಮಂಗಳೂರು, ಅ.20: ಕರಾವಳಿ ಕರ್ನಾಟಕದ ಕೋಮುವಾದಿಗಳನ್ನು ಗುರಿಯಿಟ್ಟು ದಲಿತರು ಸಂಘಟಿಸಿದ ಚಲೋ ಉಡುಪಿ ಜಾಥಕ್ಕೂ, ತದ ನಂತರ ನಡೆದ ದಲಿತ ಸ್ವಾಭಿಮಾನಿ ಸಂಘರ್ಷ ಸಮಾವೇಶಕ್ಕೂ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ ಸಮಾವೇಶದಲ್ಲಿ ದಲಿತರು ಮತ್ತು ಇತರರು ಎತ್ತಿದ ಜಮೀನಿನ ಹಂಚಿಕೆ, ಆಹಾರದ ಹಕ್ಕು, ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಮುಂತಾದ ಪ್ರಶ್ನೆಗಳ ಬಗ್ಗೆ ಸಂಪೂರ್ಣವಾದ ಸಹಮತವಿದೆ. ಅದಕ್ಕಾಗಿ ದಲಿತರ ಪರವಾಗಿ ಶೀಘ್ರವಾಗಿ ಕ್ರಮ ಕೈಗೊಳ್ಳಲು ಸರಕಾರವನ್ನು ಕಾಂಗ್ರೆಸ್ ಪಕ್ಷ ಒತ್ತಾಯಿಸಲಿದೆ. ಆದರೆ ದಲಿತಪರ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿಯು ಸಮಾವೇಶದ ಮೂಲ ಉದ್ದೇಶವನ್ನು ತಿರುಚಿ ಕೆಟ್ಟ ರಾಜಕೀಯ ಲಾಭಕ್ಕೋಸ್ಕರ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ಸಂಘ ಪರಿವಾರದವರು ನೀಡುತ್ತಿರುವ ಅವಹೇಳನಕಾರಿ ಹೇಳಿಕೆಗಳು ತೀರಾ ಬೇಜಾವಾಬ್ದಾರಿಯಿಂದ ಮತ್ತು ದುರುದ್ದೇಶದಿಂದ ಕೂಡಿದೆ. ಇದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಎಐಸಿಸಿ ಸದಸ್ಯ ಪಿ.ವಿ. ಮೋಹನ್ ಹೇಳಿದ್ದಾರೆ.

ಪತ್ರಿಕಾ ಪ್ರಕಟನೆಯ ಮೂಲಕ ಹೇಳಿಕೆ ನೀಡಿದ ಅವರು, ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ದ್ವಾರಕನಾಥರಾಗಲಿ, ದಿನೇಶ್ ಅಮೀನ್ ಮಟ್ಟು ಅವರಾಗಲೀ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದವರಲ್ಲ. ಅವರೆಲ್ಲರೂ ರಾಜ್ಯ ಗುರುತಿಸಿಕೊಂಡಿರುವ ಚಿಂತಕರು ಹಾಗೂ ಸಾಮಾಜಿಕ ಕ್ಷೇತ್ರದ ಧುರೀಣರು. ಅವರ ಹೆಸರನ್ನು ಕಾಂಗ್ರೆಸ್‌ನೊಂದಿಗೆ ಥಳಕು ಹಾಕುವುದು ಕೆಟ್ಟ ರಾಜಕಾರಣ ಮತ್ತು ಅದು ಬಿಜೆಪಿ ಪಕ್ಷದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದರು.

ಒಂದು ಸಮಾಜವನ್ನು ಮತ್ತೊಂದು ಸಮಾಜದ ವಿರುದ್ಧ ಎತ್ತಿಕಟ್ಟುವ ಮೂಲಕ ಸಮಾಜವನ್ನು ವಿಭಜಿಸುವುದು ಯಾರೆಂದು ಜನತೆಗೆ ಗೊತ್ತಿದೆ. ಫ್ಯಾಸಿಸ್ಟ್ ಧೋರಣೆಯ ಹಿಟ್ಲರ್ ಸಂಸ್ಕ್ರತಿಯನ್ನು ಅಳವಡಿಸಿದ ಪಕ್ಷ ಯಾವುದು, ಇಡೀ ದೇಶದಾದ್ಯಂತ ಭೀತಿ ಹುಟ್ಟಿಸಿರುವ ತಥಾಕಥಿತ ಗೋರಕ್ಷಕರು ಇರುವ ಪಕ್ಷ ಯಾವುದು ಎಂಬುದೆಲ್ಲಾ ಇಡೀ ದೇಶಕ್ಕೆ ಗೊತ್ತಿದೆ. ಅಭಿವೃದ್ಧಿ ರಾಜಕಾರಣದ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಅದನ್ನು ಮೊದಲು ಮಾಡಲಿ ಎಂದು ಹೇಳಿದರು.

ಪಂಕ್ತಿ ಭೇದ ಅದು ರಾಜಕೀಯ ಪ್ರಶ್ನೆ ಅಲ್ಲ. ಮಠದ ಮುತ್ತಿಗೆ ವಿಷಯ ಕೂಡ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದ ಧುರೀಣರು ಕೂತು ಚರ್ಚೆ ಮಾಡುವ ವಿಷಯ ಹೊರತು ಬೀದಿಗೆ ತರುವುದು ಸರಿಯಲ್ಲ. ಮುತ್ತಿಗೆ ಹಾಕುವುದು ಒಂದು ಸಂಕೇತವೆಂದು ತಿಳಿದುಕೊಂಡರೆ ಸಮಸ್ಸೆಗೆ ಪರಿಹಾರ ಸಿಗುತ್ತದೆ. ಸಂಕೇತದ ಹಿಂದೆ ದಲಿತ ಸಮುದಾಯದ ಕಾಳಜಿ ಮತ್ತು ಕಳಕಳಿಯನ್ನು ಅರ್ಥಮಾಡಬೇಕಾಗಿದೆ. ಬ್ರಹ್ಮಶ್ರೀ ನಾರಾಯಣಗುರು ವಿಗ್ರಹದ ಬದಲು ಬಿಂಬ ಪ್ರತಿಷ್ಠಾಪಿಸಿದ್ದು ಕೂಡ ಒಂದು ಸಂಕೇತದ ಭಾಗವಾಗಿದೆ.

ಪೇಜಾವರ ಶ್ರೀಗಳು ವಿಶ್ವಹಿಂದು ಪರಿಷತ್ತಿನ ರಾಷ್ಟ್ರಿಯ ಉಪಾಧ್ಯಕ್ಷರು ಆಗಿದ್ದರೂ ಕೂಡ ಕಾಂಗ್ರೆಸ್ಸಿನ ಹಲವು ಹಿರಿಯ ನಾಯಕರು ಅವರ ಜೊತೆ ಅನ್ಯೋನ್ಯ ಸಂಬಂಧವಿಟ್ಟುಕೊಂಡಿದ್ದಾರೆ. ಅವರ ದೀನದಲಿತರ ಕೆಲಸದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಅಪಾರ ಗೌರವ ಇದೆ. ಸ್ವಾಮಿ ವಿವೇಕಾನಂದರು ಹಿಂದೂ ಧರ್ಮವನ್ನು ತಮ್ಮ ಕ್ರಾಂತಿಕಾರಕ ವಿಚಾರದಿಂದ ಹೇಗೆ ಶುದ್ಧೀಕರಣಗೊಳಿಸಲು ಪ್ರಯತ್ನಿಸಿದ್ದಾರೋ ಅದೇ ರೀತಿಯಲ್ಲಿ ಶ್ರೀಗಳು ಮುಂದೆ ಮಾಡಲಿದ್ದಾರೆ ಎಂಬ ಆಶಾಭಾವನೆಯನ್ನು ಕಾಂಗ್ರೆಸ್ ಹೊಂದಿದೆ. ಶ್ರೀಗಳು ಅಪೇಕ್ಷೆ ಪಟ್ಟು ಚರ್ಚೆಗೆ ಆಹ್ವಾನ ನೀಡಿದರೆ ಕಾಂಗ್ರೆಸ್ ಪಕ್ಷವು ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಮೋಹನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X