Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ ದಸರಾದಲ್ಲಿ ರಾಜಕೀಯ: ಜೆಡಿಎಸ್...

ಮಡಿಕೇರಿ ದಸರಾದಲ್ಲಿ ರಾಜಕೀಯ: ಜೆಡಿಎಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ20 Oct 2016 10:20 PM IST
share
ಮಡಿಕೇರಿ ದಸರಾದಲ್ಲಿ  ರಾಜಕೀಯ: ಜೆಡಿಎಸ್ ಆರೋಪ

ಮಡಿಕೇರಿ, ಅ.20: ಜನರಿಂದ ಜನರಿಗಾಗಿ ನಡೆಯಬೇಕಾಗಿದ್ದ ಮಡಿಕೇರಿ ದಸರಾ ಜನೋತ್ಸವ ಇಂದು ರಾಜಕೀಯ ಪ್ರತಿಷ್ಠೆಯ ವೇದಿಕೆಯಾಗಿ ಮಾರ್ಪಟ್ಟಿದೆ ಎಂದು ಜಾತ್ಯತೀತ ಜನತಾದಳದ ಜಿಲ್ಲಾ ಘಟಕ ಆರೋಪಿಸಿದ್ದು, ಈ ಬಾರಿಯ ದಶಮಂಟಪಗಳ ತೀರ್ಪುಗಾರಿಕೆಯನ್ನು ಪಕ್ಷ ಆಕ್ಷೇಪಿಸಿದೆ.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾ ವಕ್ತಾರ ಪಿ.ಎಸ್. ಭರತ್‌ಕುಮಾರ್, ಮಡಿಕೇರಿ ದಸರಾ ಆಚರಣೆಯಲ್ಲಿ ದೂರದೃಷ್ಟಿತ್ವ ಇರಲಿಲ್ಲವೆಂದು ಟೀಕಿಸಿದರು. ಇತ್ತೀಚೆಗೆ ವಿಧಾನ ಪರಿಷತ್‌ನ್ನು ಪ್ರವೇಶಿಸಿರುವ ಸದಸ್ಯರೊಬ್ಬರು ದಸರಾ ಆಚರಣೆಯಲ್ಲಿ ರಾಜಕೀಯ ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿದರು.

ರಾಜಕೀಯ, ಗುಂಪುಗಾರಿಕೆ, ದಬ್ಬಾಳಿಕೆ, ಒತ್ತಡ, ಸ್ವಜನ ಪಕ್ಷಪಾತ ನಡೆದಿದ್ದು, ಇದಕ್ಕೆ ದಶಮಂಟಪಗಳಿಗೆ ಬಹುಮಾನ ನೀಡುವ ಸಂದರ್ಭ ತೋರಿದ ತಾರತಮ್ಯವೇ ಸಾಕ್ಷಿಯಾಗಿದೆ. ದಶಮಂಟಪಗಳ ವೈಭವವನ್ನು ವೀಕ್ಷಿಸಿ ಅಂಕಗಳನ್ನು ನೀಡಲು ನೇಮಕ ಮಾಡಿದ ತೀರ್ಪುಗಾರರ ತಂಡಕ್ಕೆ ತೀರ್ಪುಗಾರಿಕೆ ಮಾಡುವ ಅರ್ಹತೆ ಇರಲಿಲ್ಲ ಎನ್ನುವುದು ತೀರ್ಪು ಪ್ರಕಟವಾದ ನಂತರ ತಿಳಿದು ಬಂದಿದೆ. ಈ ಬಾರಿಯ ತೀರ್ಪುಗಾರರು ಪ್ರಭಾವಿಗಳ ಒತ್ತಡಕ್ಕೆ ಮಣಿದಿರುವುದು ಸ್ಪಷ್ಟವಾಗಿದೆ ಎಂದರು.

ತೀರ್ಪುಗಾರರಾಗಿ ಮಡಿಕೇರಿ ದಸರಾದಲ್ಲಿ ಪಾಲ್ಗೊಳ್ಳಲು ಅರ್ಹತೆ ಇರುವ ರಾಜ್ಯ ಮಟ್ಟದ ಕಲಾವಿದರು ತಯಾರಿದ್ದರೂ ದಸರಾ ಸಮಿತಿ ಅಥವಾ ದಶಮಂಟಪ ಸಮಿತಿ ಇವರನ್ನು ಪರಿಗಣಿಸದೆ ಅರ್ಹತೆ ಇಲ್ಲದವರನ್ನು ನೇಮಕ ಮಾಡುವ ಮೂಲಕ ಪ್ರತಿವರ್ಷ ಗೊಂದಲವನ್ನು ಸೃಷ್ಟಿಸುತ್ತಿದೆ. ಅಲ್ಲದೆ, ದಶಮಂಟಪ ಸಮಿತಿಗಳ ನಡುವೆ ದ್ವೇಷವನ್ನು ಹುಟ್ಟು ಹಾಕುತ್ತಿದೆ ಎಂದು ಭರತ್‌ಕುಮಾರ್ ಆರೋಪಿಸಿದ್ದಾರೆ.

ಕೆಲವರು ದಸರಾ ಜನೋತ್ಸವವನ್ನು ವಿಶಾಲ ಮನೋಭಾವದಲ್ಲಿ, ಭವಿಷ್ಯದ ಪರಿಕಲ್ಪನೆಯೊಂದಿಗೆ ಆಯೋಜಿಸದೆ ಪ್ರವಾಸೋದ್ಯಮದ ಪರಿಕಲ್ಪನೆಗೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ. ಪ್ರವಾಸಿಗರನ್ನು ಆಕರ್ಷಿಸುವ ಮತ್ತು ಪ್ರವಾಸೋದ್ಯಮಕ್ಕೆ ಪೂರಕವಾದ ಯೋಜನೆಗಳನ್ನು ರೂಪಿಸುವುದರೊಂದಿಗೆ ವಿಶ್ವದ ಗಮನ ಸೆಳೆಯುವ ಕಾರ್ಯವಾಗಬೇಕಾಗಿತ್ತು ಎಂದರು. ಯಾವುದೇ ಉದ್ಯಮಗಳಿಲ್ಲದ ಕೊಡಗಿನಲ್ಲಿ ಪ್ರವಾಸೋದ್ಯಮದ ಮೂಲಕವೇ ಇಲ್ಲಿನ ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಯಾಗಬೇಕಾಗಿದೆ. ದಸರಾ ಉತ್ಸವ ಮತ್ತು ಪ್ರವಾಸೋದ್ಯಮಕ್ಕೆ ಪೂರಕವಾದ ಯೋಜನೆಗಳನ್ನು ರೂಪಿಸುವುದಕ್ಕಾಗಿ ಪ್ರತಿವರ್ಷ ಜನೋತ್ಸವದ ಸಂದರ್ಭ ಸರಕಾರ 10 ಕೋಟಿ ರೂ.ನ್ನು ವಿಶೇಷವಾಗಿ ಮತ್ತು ಕಡ್ಡಾಯವಾಗಿ ನೀಡುವಂತೆ ಒತ್ತಡ ಹೇರುವ ಕೆಲಸವನ್ನು ಜಿಲ್ಲೆಯ ಪ್ರಭಾವಿ ಜನಪ್ರತಿನಿಧಿಗಳು ಮಾಡಬೇಕಾಗಿದೆ ಎಂದರು. ದಸರಾ ಪರಿಕಲ್ಪನೆಯನ್ನು ಕೇವಲ ಕರಗೋತ್ಸವ, ದಶಮಂಟಪ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗಷ್ಟೇ ಸೀಮಿತಗೊಳಿಸದೆ ಪ್ರವಾಸಿಗರನ್ನು ಆಕರ್ಷಿಸುವ ಮೂಲಕ ಮಡಿಕೇರಿ ದಸರಾವನ್ನು ವಿಶ್ವ ವಿಖ್ಯಾತವೆಂದು ಪ್ರತಿಬಿಂಬಿಸಬೇಕಾಗಿದೆ ಎಂದು ಭರತ್‌ಕುಮಾರ್ ಒತ್ತಾಯಿಸಿದರು.

ಜೆಡಿಎಸ್‌ನ ಮಡಿಕೇರಿ ತಾಲೂಕು ಅಧ್ಯಕ್ಷ ಡಾ.ಮನೋಜ್ ಬೋಪಯ್ಯ ಮಾತನಾಡಿ, ಮಡಿಕೇರಿ ದಸರಾ ರಾಜಕೀಯ ಪ್ರತಿಷ್ಠೆಯಾಗಿ ಮಾರ್ಪಡುತ್ತಿದ್ದು, ಕೆಲವೇ ಮಂದಿಗೆ ಪ್ರಾಮುಖ್ಯತೆಯನ್ನು ನೀಡಲಾಗುತ್ತಿದೆ. ದಸರಾ ಸಮಿತಿ ಪಾರದರ್ಶಕವಾಗಿರಬೇಕೆಂದ ಅವರು, ಯಾವ ಮಾನದಂಡದ ಆಧಾರದಲ್ಲಿ ದಶಮಂಟಪಗಳ ತೀರ್ಪುಗಾರರನ್ನು ನೇಮಕ ಮಾಡಲಾಗಿತ್ತು ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಹಿಳಾ ಘಟಕದ ಉಪಾಧ್ಯಕ್ಷೆ ರಾಧಾ, ಪರಿಶಿಷ್ಟ ಜಾತಿ, ಪಂಗಡ ಘಟಕದ ಅಧ್ಯಕ್ಷ ಎಚ್.ಎಸ್. ಯೋಗೇಶ್‌ಕುಮಾರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮನ್ಸೂರ್ ಅಲಿ ಹಾಗೂ ಮಡಿಕೇರಿ ನಗರ ಸಹ ಕಾರ್ಯದರ್ಶಿ ಸಿ.ದೀಪಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X