ಕುಸಿದು ಬಿದ್ದ ಶಾಲಾ ಕಟ್ಟಡದ ಮೇಲ್ಛಾವಣಿ
ಶಾಲೆಗೆ ರಜೆ ಇದ್ದ ಕಾರಣ ತಪಿ್ಪದ ಅನಾಹುತ
ಸಾಗರ, ಅ.20: ತಾಲೂಕಿನ ಬರದವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಮೇಲ್ಛಾವಣಿ ಗುರುವಾರ ಕುಸಿದು ಬಿದ್ದಿದ್ದು, ಶಾಲೆ ರಜೆ ಇದ್ದುದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ತಾಳಗುಪ್ಪ ಜಿಪಂ ವ್ಯಾಪ್ತಿಯ ಶಿರವಂತೆ ಗ್ರಾಪಂ ಬರದವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರು ಕೊಠಡಿಗಳ ಮುಂಭಾಗದ ಮೇಲ್ಛಾವಣಿ ದುರಸ್ತಿಯಿಂದಾಗಿ ಕುಸಿದು ಬಿದ್ದಿದೆ. ಈ ಶಾಲೆಯಲ್ಲಿ 80 ವಿದ್ಯಾರ್ಥಿಗಳು 1 ರಿಂದ 7 ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿದ್ದು, 6 ಕೊಠಡಿಗಳ ಪೈಕಿ 3 ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆೆ. ಕುಸಿದು ಬೀಳಲಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಶಿಥಿಲಗೊಂಡಿರುವ ಕೊಠಡಿಯನ್ನು ದುರಸ್ತಿ ಮಾಡಲು ಶಾಲಾಭಿವೃದ್ದಿ ಸಮಿತಿ ಹಾಗೂ ಶಿಕ್ಷಕ ವರ್ಗ ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ನೀಲನಕ್ಷೆಯೊಂದನ್ನು ತಯಾರಿಸಿ, ಅದನ್ನು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಸರ್ವಶಿಕ್ಷಣ ಅಭಿಯಾನದ ಅಧಿಕಾರಿಗಳಿಗೆ ನೀಡಲಾಗಿದೆ. ಆದರೆ ಈ ತನಕ ಕೊಠಡಿ ರಿಪೇರಿ ಮಾಡುವ ಬಗ್ಗೆ ಯಾರೂ ಗಮನ ಹರಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೊಠಡಿ ಸ್ಥಿತಿಯ ಬಗ್ಗೆ ಸಚಿವರಾದ ಕಾಗೋಡು ತಿಮ್ಮಪ್ಪ, ಶಾಸಕ ಮಧು ಬಂಗಾರಪ್ಪ, ಜಿಲ್ಲಾ ಪಂಚಾಯ್ತಿ ಸದಸ್ಯ ರಾಜಶೇಖರ ಗಾಳಿಪುರ, ಸ್ಥಳೀಯ ತಾಲ್ಲೂಕು ಪಂಚಾಯ್ತಿ ಸದಸ್ಯ ಅಶೋಕ ಬರದವಳ್ಳಿ ಸೇರಿದಂತೆ, ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿಗೆ ಹತ್ತಾರುಬಾರಿ ಶಾಲಾಭಿವೃದ್ದಿ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ. ಆದರೆ ಯಾರೊಬ್ಬರಿಗೂ ಶಾಲೆಯ ಬಗ್ಗೆ ಆಸಕ್ತಿ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಲೆ ಕೊಠಡಿ ದುರಸ್ತಿ ಮಾಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.







