ಮೆಟ್ರೊ ರೈಲು ಮಾರ್ಗ ವಿಸ್ತರಣೆಗೆ ನಿರ್ಧಾರ: ಕೆ.ಜೆ.ಜಾರ್ಜ್

ಬೆಂಗಳೂರು, ಅ.20: ನಮ್ಮ ಮೆಟ್ರೊ ರೈಲು ಮಾರ್ಗವನ್ನು ನಗರದ ಇತರ ಭಾಗಗಳಿಗೂ ವಿಸ್ತರಣೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ನಡೆಯುತ್ತಿರುವ ಮೆಟ್ರೊ ಕಾಮಗಾರಿ ಪ್ರಗತಿಯಲ್ಲಿದೆ. ಜೊತೆಗೆ, ರೈಲು ಮಾರ್ಗವನ್ನು ಮತ್ತಷ್ಟು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಉಕ್ಕಿನ ಸೇತುವೆ: ಚಾಲುಕ್ಯ ವೃತ್ತದಿಂದ ಹೆಬ್ಬಾಳದವರೆಗೆ ನಿರ್ಮಿಸಲು ಉದ್ದೇಶಿಸಿರುವ ಉಕ್ಕಿನ ಸೇತುವೆ(ಸ್ಟೀಲ್‌ಬ್ರಿಡ್ಜ್)ವಿಚಾರವು ನ್ಯಾಯಾಲಯದಲ್ಲಿದೆ. ಆದುದರಿಂದ, ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ನ್ಯಾಯಾಲಯ ನೀಡುವ ತೀರ್ಪಿಗೆ ಸರಕಾರ ಬದ್ಧವಾಗಿರುತ್ತದೆ ಎಂದು ಅವರು ಹೇಳಿದರು.
Next Story





