ಅಕ್ಷರ ಪ್ರತಿಷ್ಠಾನ-ಅಕ್ಷಯ ಪಾತ್ರದೊಂದಿಗೆ ಹೊಸ ಒಪ್ಪಂದ: ತನ್ವೀರ್ ಸೇಠ್
ವಿದ್ಯಾರ್ಥಿಗಳ ದೈಹಿಕ-ಮಾನಸಿಕ ಗುಣಮಟ್ಟ ಹೆಚ್ಚಳಕ್ಕೆ

ಬೆಂಗಳೂರು, ಅ.20: ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟ ಹೆಚ್ಚಳ ಹಾಗೂ ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಸಲುವಾಗಿ ಅಕ್ಷರ ಪ್ರತಿಷ್ಠಾನ ಹಾಗೂ ಅಕ್ಷಯ ಪಾತ್ರ ಸಂಸ್ಥೆಗಳ ಜೊತೆ ಹೊಸ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ಷರ ಪ್ರತಿಷ್ಠಾನ ಹಾಗೂ ಅಕ್ಷಯ ಪಾತ್ರ ಅಕಾರಿಗಳೊಂದಿಗೆ ಒಪ್ಪಂದಕ್ಕೆ ಸಹಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿತ, ಇಂಗ್ಲಿಷ್ ಹಾಗೂ ವಿಜ್ಞಾನ ವಿಷಯಗಳನ್ನು ಪರಿಣಾಮಕಾರಿಯಾಗಿ ಬೋಸುವ ಸಲುವಾಗಿ ಅಕ್ಷರ ಪ್ರತಿಷ್ಠಾನದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರತಿ ಶಾಲೆಗೆ ಗಣಿತ ಕಿಟ್ ಪೂರೈಕೆ ಹಾಗೂ ಕಿಟ್ ಬಳಕೆ ಕುರಿತು ಶಿಕ್ಷಕರಿಗೆ ತರಬೇತಿ ನೀಡಲು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಮೊದಲ ಹಂತವಾಗಿ ಹೈದರಾಬಾದ್ ಕರ್ನಾಟಕ ಭಾಗದ ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ಯಾದಗಿರಿಯಲ್ಲಿರುವ 7515 ಶಾಲೆಗಳಲ್ಲಿ 3ಲಕ್ಷ ಮಕ್ಕಳಿಗೆ ಅನುಷ್ಠಾನಗೊಳಿಸಲಾಗಿದೆ ಎಂದು ಅವರು ತಿಳಿಸಿದರು.ರಡನೆ ಹಂತವಾಗಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಗದಗ ಹಾಗೂ ಧಾರವಾಡದ 4149 ಶಾಲೆಗಳ 1.29ಲಕ್ಷ ಮಕ್ಕಳಿಗೆ ಮೂರು ವರ್ಷದ ಅವಗೆ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು.್ಷಯ ಪಾತ್ರ: ರಾಜ್ಯ ಸರಕಾರವು ಅಕ್ಷಯ ಪಾತ್ರ ಪ್ರತಿಷ್ಠಾನದೊಂದಿಗೆ ಮಧ್ಯಾಹ್ನದ ಉಪಾಹಾರ ಯೋಜನೆಯಲ್ಲಿ ಸಾರವರ್ತ ಅಕ್ಕಿ ಬಳಕೆ ಮಾಡುವ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಪ್ರಾರಂಭಿಕ ಹಂತವಾಗಿ ಬೆಂಗಳೂರು, ಹುಬ್ಬಳ್ಳಿ ಹಾಗೂ ಧಾರವಾಡಗಳಲ್ಲಿ 4.5ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಲಾನುಭವಿಗಳಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಜಯ್ ಶೇಠ್, ವಿನಯ್ ಹಾಗೂ ಮಧ್ಯಾಹ್ನ ಉಪಾಹಾರ ಯೋಜನೆಯ ಜಂಟಿ ನಿರ್ದೇಶಕಿ ವಿ.ಸುಮಂಗಲಾ ಮತ್ತಿತರರಿದ್ದರು.





