ವಿಜಯ ಮಲ್ಯಗೆ ಖುದ್ದು ಹಾಜರಾಗಲು ಹೈಕೋರ್ಟ್ ಆದೇಶ

ಬೆಂಗಳೂರು, ಅ.20: ಉದ್ಯಮಿ ವಿಜಯ ಮಲ್ಯ ಅವರಿಗೆ ನವೆಂಬರ್ 24ರಂದು ಹೈಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸೂಚಿಸಿದೆ.
ಈ ಸಂಬಂಧ ಎಸ್‌ಬಿಐ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ವಿಭಾಗಿಯ ನ್ಯಾಯಪೀಠ ಈ ಸೂಚನೆ ನೀಡಿತು. ಮೊದಲು ತಮ್ಮ ಆಸ್ತಿಯನ್ನು ಮಾರಾಟ ಮಾಡುವುದಿಲ್ಲ ಎಂದು ಸಾಲ ವಸೂಲಾತಿ ನ್ಯಾಯಾಕರಣಕ್ಕೆ ಭರವಸೆ ನೀಡಿದ್ದರೂ ಬಳಿಕ ಆಸ್ತಿಯನ್ನು ಮಾರಾಟ ಮಾಡಲು ನಿರ್ಧರಿಸಿದ್ದರು. ಹೀಗಾಗಿ ಸಾಲ ವಸೂಲಾತಿ ನ್ಯಾಯಾಕರಣದವರು ಹಾಗೂ ಬ್ಯಾಂಕ್‌ಗಳು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಉದ್ಯಮಿ ವಿಜಯ ಮಲ್ಯ ಅವರಿಗೆ ನವೆಂಬರ್ 24ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.
Next Story





