ಅಕ್ರಮ ಮರಳು ದಾಸ್ತಾನು ವಶ
ಕೋಟ, ಅ.20: ಹಂಗಾರಕಟ್ಟೆಯ ವಾಟರ್ ವೇಸ್ ಶಿಪ್‌ಯಾರ್ಡ್ ಆವರಣದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಮರಳನ್ನು ಅಧಿಕಾರಿ ಗಳ ತಂಡ ಅ.19ರಂದು ಮಧ್ಯಾಹ್ನ ವೇಳೆ ದಾಳಿ ನಡೆಸಿ ವಶಪಡಿಸಿಕೊಂಡಿದೆ.
ಖಚಿತ ಮಾಹಿತಿಯಂತೆ ಉಡುಪಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ್ ನೇತೃತ್ವದಲ್ಲಿ ಬ್ರಹ್ಮಾವರ ವಿಶೇಷ ತಹಶೀಲ್ದಾರ್, ಗ್ರಾಮ ಲೆಕ್ಕಿಗರು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಸ್ಥಳೀಯರ ಸಮ್ಮುಖದಲ್ಲಿ ದಾಳಿ ನಡೆಸಿ, ಶಿಪ್‌ಯಾರ್ಡ್ ಆವರಣದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಸಂಗ್ರಹಿಸಿದ 5414 ಮೆಟ್ರಿಕ್ ಟನ್ ತೂಕದ 40,00,000ರೂ. ಮೌಲ್ಯದ ಸಾಮಾನ್ಯ ಮರಳನ್ನು ವಶಪಡಿಸಲಾಯಿತು.
ಬಳಿಕ ಈ ಮರಳನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಲಾಯಿತು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





