Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬದಲಾವಣೆಯ ದೂತರಾಗಿ: ಡಾ.ಕೆ. ವಿಜಯ...

ಬದಲಾವಣೆಯ ದೂತರಾಗಿ: ಡಾ.ಕೆ. ವಿಜಯ ರಾಘವನ್

ಯೆನೆಪೊಯ ವಿ.ವಿ.ಯ 6ನೆ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ22 Oct 2016 4:04 PM IST
share
ಬದಲಾವಣೆಯ ದೂತರಾಗಿ: ಡಾ.ಕೆ. ವಿಜಯ ರಾಘವನ್

ಮಂಗಳೂರು, ಅ.22: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ಷಿಪ್ರ ಗತಿಯ ಬೆಳವಣಿಗೆಯ ಈ ಕಾಲಘಟ್ಟದಲ್ಲಿ ಆ ಬದಲಾವಣೆಗೆ ನಮ್ಮನ್ನು ನಾವು ಒಡ್ಡಿಕೊಳ್ಳುವುದಲ್ಲದೆ, ಬದಲಾವಣೆಯ ದೂತರಾಗಿ ಕಾರ್ಯ ನಿರ್ವಹಿಸಬೇಕು ಎಂದು ಭಾರತ ಸರಕಾರದ ಬಯೋ ಟೆಕ್ನಾಲಜಿ ವಿಭಾಗದ ಕಾರ್ಯದರ್ಶಿ ಡಾ.ಕೆ. ವಿಜಯ ರಾಘವನ್ ಯುವ ವೈದ್ಯರಿಗೆ ಕರೆ ನೀಡಿದ್ದಾರೆ.

ಅವರು ಇಂದು ದೇರಳಕಟ್ಟೆಯ ಯೆನೆಪೊಯ ವಿವಿಯ ಆವರಣದ ಯೆನ್‌ಡ್ಯುರೆನ್ ಸಭಾಂಗಣದಲ್ಲಿ ನಡೆದ ಯೆನೆಪೊಯ ವಿಶ್ವವಿದ್ಯಾನಿಲಯದ 6ನೆ ಘಟಿಕೋತ್ಸವ ಭಾಷಣ ಮಾಡಿದರು.

ಹಿಂದೆ ಶಿಕ್ಷಣ ಪಡೆಯಲು ಶಾಲೆಗೆ ಹೋಗುವುದು ಅನಿವಾರ್ಯವಾಗಿತ್ತು. ಆದರೆ ಇಂದು ತಂತ್ರಜ್ಞಾನದ ಬದಲಾವಣೆಯಿಂದ ಸಾಮಾಜಿಕ ಜಾಲತಾಣಗಳ ಮೂಲಕವೇ ಶಿಕ್ಷಣದ ವಿಭಿನ್ನ ಆಯಾಮಗಳು, ವಿಭಿನ್ನತೆಗಳನ್ನು ಪಡೆದುಕೊಳ್ಳಬಹುದಾಗಿದೆ. ಇಂತಹ ಪ್ರಗತಿಯ ನಡುವೆ ನಾವು ಆರೋಗ್ಯ ಕ್ಷೇತ್ರವಲ್ಲದೆ, ಆರ್ಥಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ನಾವಿಂದು ವಿಭಿನ್ನಮಯ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಅದರಲ್ಲೂ ಮುಖ್ಯವಾಗಿ ಹವಾಮಾನ ಬದಲಾವಣೆ, ಜನಸಂಖ್ಯೆಯಲ್ಲಿ ತೀವ್ರತೆರನಾದ ಹೆಚ್ಚಳ ಬಹುಮುಖ್ಯ ಸಮಸ್ಯೆಗಳಲ್ಲಿ ಒಂದಾಗಿದೆ ಎಂದವರು ಹೇಳಿದರು.

ಈ ಎಲ್ಲಾ ಸಮಸ್ಯೆಗಳ ಹೊರತಾಗಿಯೂ ನಾವು ನಮ್ಮ ವೈಯಕ್ತಿಕ ಸಮಸ್ಯೆಗಳ ಬಗ್ಗೆ ಹೆಚ್ಚು ಆತಂಕಿತರಾಗಿರುತ್ತೇವೆ. ಆದರೆ, ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸಬೇಕಾದರೆ ನಾವು ನಮ್ಮ ಸುತ್ತಮುತ್ತಲಿನವರ ಸಮಸ್ಯೆಗಳನ್ನು ಕಣ್ತೆರೆದು ನೋಡಬೇಕಾಗುತ್ತದೆ. ಆಗ ನಮ್ಮ ಸಮಸ್ಯೆಗಳು ಲಘುವಾಗಿ ಕಾಣಸಿಗುತ್ತವೆ. ಯುವ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಎದುರಿಸುವ ಜತೆ ಆಧುನಿಕತೆಯ ಬದಲಾವಣೆಗೆ ಪೂರಕವಾಗಿ ಮುಂದೆ ಸಾಗಬೇಕು ಎಂದು ಅವರು ಸಲಹೆ ನೀಡಿದರು.

ಯೆನೆಪೊಯ ವಿಶ್ವವಿದ್ಯಾನಿಲಯದ ಕಾರ್ಯವೈಖರಿ ಬಗ್ಗೆ ಅವರು ಈ ಸಂದರ್ಭ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಡಾಕ್ಟರಲ್ ಫೆಲೋಶಿಪ್, ಡಾಕ್ಟರೇಟ್, ಸ್ನಾತಕೋತ್ತರ ಡಿಪ್ಲೊಮಾ, ಸ್ನಾತಕೋತ್ತರ ಹಾಗೂ ಪದವಿ ಪಡೆಯಲು ಅರ್ಹರಾದ ಒಟ್ಟು 477ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

2012-13ನೆ ಸಾಲಿನಲ್ಲಿ ಪ್ರಥಮ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ದಿವಂಗತ ಎ. ರೈಝಾ ಹೆಸರಿನಲ್ಲಿ ಸ್ಥಾಪಿಸಲಾದ ದತ್ತಿ ಪುರಸ್ಕಾರವನ್ನು ಎಂಬಿಬಿಎಸ್‌ನ ನೂರ್ ಸೈಫಿಕ್ ಬಿಂಟಿ ಮುಹಮ್ಮದ್ ಹಸನ್ ಅವರಿಗೆ ಪ್ರದಾನ ಮಾಡಲಾಯಿತು.

ಘಟಿಕೋತ್ಸವ ಮೆರವಣಿಗೆಯೊಂದಿಗೆ ಘಟಿಕೋತ್ಸವ ಆರಂಭಗೊಂಡಿತು.ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಪತಿ ವೈ. ಅಬ್ದುಲ್ಲಾ ಕುಂಞಿಯವರು ಅಧ್ಯಕ್ಷತೆ ವಹಿಸಿದ್ದರು. ಯೆನೆಪೋಯ ಫೌಂಡೇಶನ್‌ನ ಅಧ್ಯಕ್ಷ ವೈ. ಮುಹಮ್ಮದ್ ಕುಂಞಿ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ. ಬಿ.ಎಚ್. ಶ್ರೀಪತಿ ರಾವ್, ಡಾ. ಗುಲಾಂ ಜೀಲಾನಿ ಖಾದಿರಿ, ಪ್ರೊ. ಆಶಾ ಪಿ. ಶೆಟ್ಟಿ, ಪ್ರೊ. ಪದ್ಮ ಕುಮಾರ್ ಎಸ್., ಡಾ. ಕಮಲಕಾಂತ್ ಶೆಣೈ, ಡಾ. ಸಂಪತ್ತಿಲ ಪದ್ಮನಾಭ, ಡಾ. ಅಖ್ತರ್ ಹುಸೇನ್, ಡಾ. ಬಿ.ಟಿ. ನಂದೀಶ್, ಡಾ. ಜಿ. ಶ್ರೀಕುಮಾರ್ ಮೆನನ್, ಟ್ರಸ್ಟಿಗಳಾದ ಡಾ. ಸಿ.ಪಿ. ಹಬೀಬ್ ರೆಹಮಾನ್, ಖಾಲಿದ್ ಬಾವಾ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪ ಕುಲಪತಿ ಡಾ.ಎಂ. ವಿಜಯ ಕುಮಾರ್ ಸ್ವಾಗತಿಸಿದರು. ಡಾ. ಮಲ್ಲಿಕಾ ಶೆಟ್ಟಿ ಮತ್ತು ಡಾ. ರೊಚೆಲ್ ಟೆಲ್ಲಿಸ್ ಕಾರ್ಯಕ್ರಮ ನಿರೂಪಿಸಿದರು.

8 ಮಂದಿಗೆ ಚಿನ್ನದ ಪದಕ

ಬಿಡಿಎಸ್ ವಿಭಾಗದಲ್ಲಿ ಫಾತಿಮಾ ಫರ್ಹಾನ, ಝೈನಬಾ ಹಮ್ನಾ ಕೆ.ಎ., ಎಂಬಿಬಿಎಸ್‌ನಲ್ಲಿ ಮವಿಯಾ ಅಬ್ದುಲ್ ಅಝೀಝ್, ಸ್ನಾತಕೋತ್ತರ ಮೂಲ ವಿಜ್ಞಾನ ನರ್ಸಿಂಗ್‌ನಲ್ಲಿ ನಮೃತಾ ಖಾಡ್ಕಾ, ಶ್ರುತಿ ಲಕ್ಷ್ಮಿ, ಬಿಎಸ್ಸಿ ನರ್ಸಿಂಗ್‌ನಲ್ಲಿ ಸಾಂಡ್ರಾ ಸಾಜು, ಶ್ರುತಿ ಎಸ್., ಬಿಪಿಟಿಯಲ್ಲಿ ಜುಬೈರಿಯಾ ಪಿ. ಸೇರಿದಂತೆ ಎಂಟು ಮಂದಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X