Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಈವರೆಗೆ 40 ಲಕ್ಷ ದನಗಳನ್ನು...

ಈವರೆಗೆ 40 ಲಕ್ಷ ದನಗಳನ್ನು ರಕ್ಷಿಸಿದ್ದೇವೆ: ಬಜರಂಗದಳದ ರಾಷ್ಟ್ರೀಯ ಸಂಯೋಜಕ

ವಾರ್ತಾಭಾರತಿವಾರ್ತಾಭಾರತಿ22 Oct 2016 8:00 PM IST
share
ಈವರೆಗೆ 40 ಲಕ್ಷ ದನಗಳನ್ನು ರಕ್ಷಿಸಿದ್ದೇವೆ: ಬಜರಂಗದಳದ ರಾಷ್ಟ್ರೀಯ ಸಂಯೋಜಕ

ಮಂಗಳೂರು,ಅ.22 :ದೇಶದಲ್ಲಿ ಗೋ ರಕ್ಷಣೆಗಾಗಿ ಬಜರಂಗದಳ ಪ್ರಾಮಾಣಿಕವಾಗಿ ಅಸಲಿ ಹೋರಾಟವನ್ನೇ ನಡೆಸುತ್ತಿದೆ. 1996ರಲ್ಲಿ ಪ್ರಯಾಗದಲ್ಲಿ ಗಾಯ್ ನಹೀಂ ಕಟ್‌ನೇ ದೇಂಗೆ, ದೇಶ್ ನಹೀಂ ಬಟ್ನೇ ದೇಂಗೆ ಎಂಬ ಸಂಕಲ್ಪ ಮಾಡಿದ್ದು, ಅಲ್ಲಿಂದ ಇಲ್ಲಿ ತನಕ ಸುಮಾರು 40 ಲಕ್ಷ ದನಗಳನ್ನು ರಕ್ಷಿಸಿದ್ದೇವೆ. ನಮ್ಮ ಕಾರ್ಯಕರ್ತರೆಲ್ಲ ಪ್ರಾಮಾಣಿಕರು, ಸಾಚಾಗಳು ಎಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕ್ ರಾಜೇಶ್ ಪಾಂಡೆ ಹೇಳಿದರು.

ಅವರು ನಗರದ ಸಂಘ ನಿಕೇತನದಲ್ಲಿ ಇಂದು ವಿಶ್ವ ಹಿಂದು ಪರಿಷತ್ ಕರ್ನಾಟಕ ದಕ್ಷಿಣ ವತಿಯಿಂದ ಆಯೋಜಿಸಿರುವ ಬಜರಂಗ ದಳದ ಪ್ರಾಂತ ಅಧಿವೇಶನ ಉದ್ಘಾಟಿಸಿ ಮಾತನಾಡಿದರು.

ದಾದ್ರಿ ಘಟನೆ ನಂತರ ಅಸಹಿಷ್ಣುತೆಯಿದೆ ಎಂದು ಬೊಬ್ಬೆ ಹೊಡೆದರು. ಕಾಶ್ಮೀರದಲ್ಲಿ ಹಿಂದು ಪಂಡಿತರ ಮೇಲೆ ದಬ್ಬಾಳಿಕೆ, ಬಂಗಾಳದಲ್ಲಿ ಹಿಂದುಗಳ ಹತ್ಯೆ ನಡೆದಾಗ ಅಸಹಿಷ್ಣುತೆ ಕಂಡಿಲ್ಲ. ಒಂದು ವೇಳೆ ದಾದ್ರಿ, ಸರ್ಜಿಕಲ್ ದಾಳಿಯಿಂದ ಅಸಹಿಷ್ಣುತೆ ಬಂತೆಂದಾದರೆ ಅದನ್ನು ಸ್ವಾಗತಿಸಲು ಸಿದ್ಧ ಎಂದರು.

ಬಹುತೇಕ ಮುಸ್ಲಿಮರು ಮೂಲತ: ಹಿಂದುಗಳೇ ಆಗಿದ್ದು, ಮಾನಪ್ರಾಣ ರಕ್ಷಣೆಗೆೆ ಹೆದರಿ ಬಲವಂತವಾಗಿ ಮತಾಂತರಗೊಂಡವರಾಗಿದ್ದು ಅಂತವರನ್ನು ಮನಪರಿವರ್ತಿಸುವ ಕಾರ್ಯವನ್ನು ಮಾಡಬೇಕು ಎಂದರು.

ಬಜರಂಗದಳದ ಮುಂದೆ ಹಲವಾರು ಸವಾಲುಗಳಿದ್ದು, ಎಲ್ಲವನ್ನೂ ಮೆಟ್ಟಿ ನಿಲ್ಲುತ್ತಿದ್ದೇವೆ. ಇನ್ನೆಂದೂ ದೇಶದಲ್ಲಿ ಲವ್ ಜಿಹಾದ್ ನಡೆಯಲು ಬಿಡುವುದಿಲ್ಲ ಎಂದು ಹೇಳಿದರು.

ಸಲ್ಮಾನ್, ಅಮೀರ್, ಶಾರುಕ್ ಖಾನ್‌ಗೆ ಭಾರತದಲ್ಲಿ ಅಸಹಿಷ್ಣುತೆ ಕಂಡರೆ ಪಾಕ್, ಬಾಂಗ್ಲಾ ಅಥವಾ ಅಫ್ಘಾನಿಸ್ಥಾನಕ್ಕೆ ಬೇಕಾದರೆ ಹೋಗಲಿ. ಇನ್ನು ಪಾಕಿಸ್ತಾನದ ಒಬ್ಬನೇ ಒಬ್ಬ ಕಲಾವಿದ ಭಾರತಕ್ಕೆ ಬರಕೂಡದು. ಯಾರಾದರೂ ಅವರನ್ನು ಸಮರ್ಥಿಸಿದರೆ ಅವರ ಸಿನೆಮಾಗಳನ್ನೂ ಬಹಿಷ್ಕರಿಸಲಾಗುವುದು ಎಂದು ರಾಜೇಶ್ ಪಾಂಡೆ ಹೇಳಿದರು.

ವಿಶ್ವ ಹಿಂದು ಪರಿಷತ್ ಪ್ರಾಂತ್ಯ ಕಾರ್ಯಾಧ್ಯಕ್ಷ ಎಂ.ಬಿ.ಪುರಾಣಿಕ್ ಮಾತನಾಡಿ, ಉಡುಪಿಯಲ್ಲಿ ದಲಿತರ ಹೆಸರಿನಲ್ಲಿ ಮಠಕ್ಕೆ ದಾಳಿ ಮಾಡಿದರೆ ಅದನ್ನು ಹಿಮ್ಮೆಟ್ಟಿಸಲು ಬಜರಂಗದಳದ 600 ಸಂಚಾಲರೂ, ಕಾರ್ಯಕರ್ತರೂ ಒಂದು ಗಂಟೆಯಲ್ಲಿ ಧಾವಿಸಿ ಬರಲಿದ್ದಾರೆ. ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ ಎಂದರು.

ಅಹಿಂದ ಹೆಸರಿನಲ್ಲಿ ದಲಿತ, ಹಿಂದುಳಿದವರ ಬಗ್ಗೆ ಮುಸ್ಲಿಮರು ಕಾಳಜಿ ವಹಿಸುವ ಅಗತ್ಯವಿಲ್ಲ. ಈ ಷಡ್ಯಂತ್ರ ವಿರುದ್ಧ ಜಾಗೃತರಾಗಿರಬೇಕು ಎಂದರು.
ಬಜರಂಗದಳ ಪ್ರಾಂತ ಸಂಯೋಜಕ ಶರಣ್ ಪಂಪ್‌ವೆಲ್ ಮಾತನಾಡಿ, ರಾಜ್ಯ ಸರಕಾರ ಟಿಪ್ಪು ಜಯಂತಿಗೆ ಅವಕಾಶ ಕೊಟ್ಟರೆ ಸುಮ್ಮನೆ ಕೂರುವುದಿಲ್ಲ. ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಎಂದರು.

ವಿಹಿಂಪ ಕ್ಷೇತ್ರೀಯ ಸಂಯೋಜಕ ಸೂರ್ಯನಾರಾಯಣ, ಪ್ರಾಂತ ಸಹಕಾರ್ಯದರ್ಶಿ ಕೃಷ್ಣಮೂರ್ತಿ, ಮಂಗಳೂರು ಜಿಲ್ಲಾ ಕಾರ್ಯದರ್ಶಿ ಗೋಪಾಲ್ ಕುತ್ತಾರ್, ಆರೆಸ್ಸೆಸ್ ಮಂಗಳೂರು ನಗರ ಸಂಘ ಸಂಚಾಲಕ ಸುನಿಲ್ ಆಚಾರ್, ಬಜರಂಗ ದಳ ವಿಭಾಗ ಸಹ ಸಂಚಾಲಕ ಸುನಿಲ್ ಕೆ.ಆರ್., ಬೆಂಗಳೂರು ಮಹಾನಗರ ಸಂಚಾಲಕ ಕೇಶವ ನಾಯ್ಕ ಉಪಸ್ಥಿತರಿದ್ದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X