Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಂಬೆ ನೂತನ ಅಣೆಕಟ್ಟಿನಲ್ಲಿ 5 ಮೀಟರ್...

ತುಂಬೆ ನೂತನ ಅಣೆಕಟ್ಟಿನಲ್ಲಿ 5 ಮೀಟರ್ ಎತ್ತರಕ್ಕೆ ಮಾತ್ರ ನೀರು ಸಂಗ್ರಹಿಸಿ:ಮುಖ್ಯ ಕಾರ್ಯದರ್ಶಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ22 Oct 2016 8:23 PM IST
share
ತುಂಬೆ ನೂತನ ಅಣೆಕಟ್ಟಿನಲ್ಲಿ 5 ಮೀಟರ್ ಎತ್ತರಕ್ಕೆ ಮಾತ್ರ ನೀರು ಸಂಗ್ರಹಿಸಿ:ಮುಖ್ಯ ಕಾರ್ಯದರ್ಶಿ ಸೂಚನೆ

ಮಂಗಳೂರು, ಅ.22: ಮಂಗಳೂರು ಮಹಾನಗರಪಾಲಿಕೆಗೆ ಕುಡಿಯುವ ನೀರು ಸರಬರಾಜು ಮಾಡಲು ತುಂಬೆಯಲ್ಲಿ ನೂತನವಾಗಿ ನಿರ್ಮಿಸಿರುವ ವೆಂಟೆಡ್ ಡ್ಯಾಂನಲ್ಲಿ ನೀರು ನಿಲ್ಲಿಕೆ ಪ್ರಮಾಣವನ್ನು ಸದ್ಯ 5 ಮೀಟರ್‌ವರೆಗೆ ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್‌ಚಂದ್ರ ಖುಂಟಿ ಸೂಚಿಸಿದ್ದಾರೆ.

ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೂತನ ವೆಂಟೆಡ್‌ಡ್ಯಾಂನಲ್ಲಿ 5 ಮೀಟರ್ ಎತ್ತರಕ್ಕೆ ನೀರು ನಿಲ್ಲಿಸಿದರೆ ಮುಳುಗಡೆಯಾಗಲಿರುವ ಜಮೀನಿನ ಭೂಸ್ವಾಧೀನಕ್ಕೆ ಅಗತ್ಯವಿರುವ ಜಮೀನಿಗೆ ಪರಿಹಾರಕ್ಕೆ ಕೂಡಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್, ನೂತನ ಅಣೆಕಟ್ಟು 7 ಮೀಟರ್ ಎತ್ತರಕ್ಕೇರಿಸುವ ಬಗ್ಗೆ ಮುಳುಗಡೆ ಪ್ರದೇಶ ಜಮೀನಿಗೆ ಪರಿಹಾರ ಪಾವತಿ ಸಂಬಂಧ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು.

ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್ ಮಾಹಿತಿ ನೀಡಿ, ಅಣೆಕಟ್ಟಿನಲ್ಲಿ 7 ಮೀಟರ್ ಎತ್ತರಕ್ಕೆ ನೀರು ನಿಲ್ಲಿಸಿದರೆ 450 ಎಕರೆ ಜಮೀನು ಮುಳುಗಡೆಯಾಗಲಿದೆ. ಹಾಲಿ ಅಣೆಕಟ್ಟಿನಲ್ಲಿ 4 ಮೀಟರ್‌ವರೆಗೆ ನೀರು ನಿಲ್ಲುತ್ತಿದೆ. ನೂತನ ಅಣೆಕಟ್ಟಿನಲ್ಲಿ 5 ಮೀಟರ್ ಎತ್ತರದವರೆಗೆ ನೀರು ನಿಲ್ಲಿಸಿದರೆ 56 ಎಕರೆ ಜಮೀನು ಮುಳುಗಡೆಯಾಗಲಿದೆ ಎಂದು ತಿಳಿಸಿದರು.

ಮುಖ್ಯ ಕಾರ್ಯದರ್ಶಿಗಳು ಮಾತನಾಡಿ, ಸದ್ಯ 5 ಮೀಟರ್‌ವರೆಗೆ ನೀರು ನಿಲ್ಲಿಸಿ, ಮುಂದೆ ಹಂತಹಂತವಾಗಿ ಅಣೆಕಟ್ಟಿನ ಎತ್ತರ ಏರಿಸುವಂತೆ ಸೂಚಿಸಿದರು. ಅಲ್ಲದೇ, 56 ಎಕರೆ ಜಮೀನಿಗೆ ವಿಶೇಷ ಪ್ರಕರಣ ಎಂದು ಪರಿಗಣಿಸಿ ಸರಕಾರ ಅನುದಾನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಅಪಘಾತ ನಡೆಯುವ ಪ್ರಮುಖ ಸ್ಥಳಗಳನ್ನು ಪೊಲೀಸ್ ಇಲಾಖೆಯೊಂದಿಗೆ ಸಮೀಕ್ಷೆ ನಡೆಸಿ ಗುರುತಿಸಿ, ಅಲ್ಲಿ ಅಪಘಾತ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅವರು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸೂಚಿಸಿದರು.

ರಾಜ್ಯ ಸರಕಾರದ ಎಲ್ಲಾ ಫಲಾನುಭವಿ ಆಧಾರಿತ ಯೋಜನೆಗಳಿಗೆ ಆಧಾರ್ ಲಿಂಕಿಂಗ್ ಮಾಡಿ ಜಾರಿಗೊಳಿಸಬೇಕು. ಆಧಾರ್ ಕಾರ್ಡ್ ನೀಡಿಕೆ ಪ್ರಕ್ರಿಯೆಯನ್ನು ವಿಶೇಷ ಅಭಿಯಾನ ನಡೆಸಿ ತ್ವರಿತಗೊಳಿಸಬೇಕು. ಸರಕಾರದ ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸುವಾಗ ಶೌಚಾಲಯ ನಿರ್ಮಾಣವನ್ನು ಕಡ್ಡಾಯಗೊಳಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಎಲ್ಲಾ ಹೆರಿಗೆಗಳನ್ನು ಆಸ್ಪತ್ರೆಯಲ್ಲಿ ಶೇಕಡಾ 100ರಷ್ಟು ಆಗುವಂತೆ ಗಮನಹರಿಸಬೇಕು. ಲೇಡಿಗೋಷನ್ ಆಸ್ಪತ್ರೆಯಲ್ಲಿ ನೂತನ ಕಟ್ಟಡಕ್ಕೆ ಬಾಕಿ ಉಳಿದಿರುವ ಕಾಮಗಾರಿಗೆ ಅಗತ್ಯವಿರುವ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು. ಎಂಡೋಸಲ್ಫಾನ್ ಸಂತ್ರಸ್ತ ಪ್ರದೇಶಗಳಲ್ಲಿ ಹುಟ್ಟುವ ನವಜಾತ ಶಿಶುಗಳಲ್ಲೂ ಕಂಡುಬರುವ ಎಂಡೋಸಲ್ಫಾನ್ ಅಂಶ ನಿಯಂತ್ರಿಸಲು ತಜ್ಞರಿಂದ ಅಧ್ಯಯನ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳು ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಏಕೋಪಾಧ್ಯಾಯ ಶಾಲೆಗಳಲ್ಲಿ ಇನ್ನೊಬ್ಬರು ಶಿಕ್ಷಕರನ್ನು ನೇಮಿಸಬೇಕು ಅಥವಾ ಅಲ್ಲಿನ ವಿದ್ಯಾರ್ಥಿಗಳಿಗೆ ಸಾರಿಗೆ ಭತ್ತೆ ನೀಡಿ ಸಮೀಪದ ಶಾಲೆಯಲ್ಲಿ ಆ ಶಾಲೆಯನ್ನು ವಿಲೀನಗೊಳಿಸಬೇಕು. ಶಾಲಾ ಮಕ್ಕಳಿಗೆ 2 ಜತೆ ಸಮವಸ್ತ್ರಗಳನ್ನು ಒಟ್ಟಿಗೆ ನೀಡಬೇಕು. ಶಾಲಾ ಶೌಚಾಲಯಗಳನ್ನು ಸ್ವಚ್ಛತೆಯಿಂದ ನಿರ್ವಹಿಸಲು ಗಮನಹರಿಸುವಂತೆ ಸುಭಾಶ್ ಚಂದ್ರ ಖುಂಟಿ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಬೇಕು ಎಂದು ಅವರು ಸೂಚಿಸಿದರು.

ಮಂಗಳೂರು ಹಳೇಬಂದರಿನಲ್ಲಿ 3ನೆ ಹಂತದ ಮೀನುಗಾರಿಕಾ ಬಂದರು ನಿರ್ಮಾಣದ ಪ್ರಸಕ್ತ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿಯವರು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು. 3ನೆ ಹಂತದಲ್ಲಿ ಆಂತರಿಕ ರಸ್ತೆ, ವಿದ್ಯುದ್ದೀಕರಣ, ನೀರು ಸರಬರಾಜು, 2 ಮತ್ತು 3ನೆ ಹಂತದ ಬಂದರು ನಡುವೆ ಸೇತುವೆ ಸೇರಿದಂತೆ ತುರ್ತು ಕಾಮಗಾರಿ ನಡೆಸಲು 2 ಕೋಟಿ ರೂ. ಅಗತ್ಯವಿದೆ. ಕೇಂದ್ರ ಸರಕಾರದಿಂದ 32 ಕೋಟಿ ರೂ. ಬಿಡುಗಡೆಯಾಗಬೇಕಿದೆ ಎಂದು ಅವರು ತಿಳಿಸಿದರು. ಅಳಿವೆ ಬಾಗಿಲಿನಲ್ಲಿ ಹೂಳೆತ್ತಲು ಡ್ರೆಜ್ಜಿಂಗ್ ಕಾಮಗಾರಿ ನಡೆಸಲು ರಾಜ್ಯ ಸರಕಾರದಿಂದ 1 ಕೋಟಿ ರೂ. ಬಿಡುಗಡೆಯಾಗಿದೆ. ಕಾಮಗಾರಿಯ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ನವೆಂಬರ್ ಅಂತ್ಯದೊಳಗೆ ಹೂಳೆತ್ತುವ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಬಂದರು ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್, ಕಮಿಷನರೇಟ್ ವ್ಯಾಪ್ತಿಯಲ್ಲಿ ಅಪರಾಧ ನಿಯಂತ್ರಿಸಲು 13 ಮಂದಿಯನ್ನು ಗೂಂಡಾ ಕಾಯ್ದೆಯಡಿ ಸೇರಿಸಲಾಗಿದೆ ಎಂದರು. ರಾಜ್ಯದ ಉಳಿದ ಕಮಿಷನರೇಟ್ ವ್ಯಾಪ್ತಿಗೆ ಹೋಲಿಸಿದರೆ, ಮಂಗಳೂರಿನಲ್ಲಿ ಪೊಲೀಸರ ಸಂಖ್ಯೆ ಕಡಿಮೆ ಇದ್ದು, ಇದನ್ನು ಹೆಚ್ಚಿಸಬೇಕಾಗಿದೆ ಎಂದು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ವೆಂಕಟೇಶ್, ಪೊಲೀಸ್ ಅಧೀಕ್ಷಕ ಭೂಷಣ್ ಗುಲಾಬ್‌ರಾವ್ ಬೊರಸೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X