ಅಂಗಾಂಗ ಶಾಶ್ವತ ಊನ ವ್ಯಕ್ತಿಗೆ 5 ಲಕ್ಷ ರೂ. ಪರಿಹಾರ ರಮಾನಾಥ ರೈ
ವನ್ಯ ಜೀವಿ ಮತ್ತು ಮಾನವ ಸಂಘರ್ಷ

ಬೆಂಗಳೂರು, ಅ. 22:ವನ್ಯ ಜೀವಿ ಮತ್ತು ಮಾನವ ಸಂಘರ್ಷದಲ್ಲಿ ಶಾಶ್ವತವಾಗಿ ಅಂಗಾಂಗಗಳು ಊನವಾಗಿರುವವರಿಗೆ ಐದು ಲಕ್ಷ ರೂಪಾಯಿಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಆರಣ್ಯ ಸಚಿವ ರಮಾನಾಥ ರೈ ತಿಳಿಸಿದ್ದಾರೆ.
ಶನಿವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವನ್ಯ ಜೀವಿ ಮತ್ತು ಮಾನವ ಸಂಘರ್ಷದಲ್ಲಿ ಗಾಯಗೊಂಡು ಶಾಶ್ವತವಾಗಿ ಊನರಾದವರಿಗೆ ಇದುವರೆಗೂ 50 ಸಾವಿರ ರೂ.ಗಳನ್ನು ನೀಡಲಾಗುತ್ತಿತ್ತು. ಈ ಮೊತ್ತವನ್ನು ಐದು ಲಕ್ಷಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಭಾಗಶಃ ಊನವಾದವರಿಗೆ 20 ಸಾವಿರದಿಂದ 2.50 ಲಕ್ಷಕ್ಕೆ ಏರಿಸಲಾಗಿದೆ ಎಂದು ತಿಳಿಸಿದರು.
ವನ್ಯ ಜೀವಿ ಮತ್ತು ಮಾನವ ಸಂಘರ್ಷಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ವನ್ಯ ಜೀವಿಗಳ ದಾಳಿಯಿಂದಾದ ಬೆಳೆ ನಷ್ಟ ಪರಿಹಾರದಲ್ಲೂ ಹೆಚ್ಚಳ ಮಾಡಲಾಗಿದೆ. ಹಾಗೆಯೇ ವನ್ಯಧಾಮದಲ್ಲಿ ಕಾರ್ಯ ನಿರ್ವಹಿಸುವವರ ಭತ್ತೆಯನ್ನು ಕನಿಷ್ಠ 2,500ರಂತೆ ಸೇವಾ ಹಿರಿತನದ ಆಧಾರದಲ್ಲಿ ವೇತನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದರು.ಾಡಿನ ಪ್ರದೇಶ ಒತ್ತುವರಿಯಿಂದಾಗಿ ಕಾಡು ಪ್ರಾಣಿಗಳು ನಾಡಿಗೆ ವಲಸೆ ಬರುತ್ತಿವೆ. ವನ್ಯ ಜೀವಿಗಳ ದಾಳಿಯನ್ನು ತಡೆಗಟ್ಟಲು ಅರಣ್ಯ ಪ್ರದೇಶದ ಸುತ್ತ ತಡೆಗೋಡೆಯನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಈಗಾಗಲೇ ಸರ್ವೇ ಕಾರ್ಯ ಆರಂಭಿಸಲಾಗಿದೆ. ವನ್ಯ ಜೀವಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕೆರೆ ಮತ್ತು ನೀರು ಗಾಲುವೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.







