ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪಬಿಬಿಎಂಪಿ ಜಂಟಿ ಆಯುಕ್ತರ ಮೇಲೆ ಹಲ್ಲೆ
ಬೆಂಗಳೂರು, ಅ.22: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಬಿಬಿಎಂಪಿ ಜಂಟಿ ಆಯುಕ್ತರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆಯು ಶನಿವಾರ ಸಂಜೆ 4:30ರ ಸುಮಾರಿಗೆ ಮಹದೇವಪುರ ಬಿಬಿಎಂಪಿ ಕಚೇರಿಯಲ್ಲಿ ನಡೆದಿದೆ.
ಮಹದೇವಪುರ ವಲಯ ಬಿಬಿಎಂಪಿ ಜಂಟಿ ಆಯುಕ್ತ ಮುನಿವೀರಪ್ಪ ಮೇಲೆ ಹಲ್ಲೆ ನಡೆಸಿದ ಪುಷ್ಪಾವತಿ, ಅವರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕೆಲಸದ ಸಂದರ್ಭದಲ್ಲಿ ಮುನಿವೀರಪ್ಪ ತನ್ನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ.
Next Story





