Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಂಜನಗೂಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ...

ನಂಜನಗೂಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ23 Oct 2016 2:29 PM IST
share
ನಂಜನಗೂಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಮೈಸೂರು, ಅ.23: ‘ನಂಜನಗೂಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯುತ್ತಿದೆ. ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಸಮಾವೇಶ ವಿಶೇಷ ಸನ್ನಿವೇಶದಲ್ಲಿ ಏರ್ಪಾಡಾಗಿದೆ. ಇದನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಶ್ರೀನಿವಾಸ ಪ್ರಸಾದ್ ಅವರು ನನ್ನ ವಿರುದ್ಧ ಏಕ ವಚನದಲ್ಲಿ ಮಾತನಾಡಿದ್ದಾರೆ. ನಾನು ಆ ರೀತಿ ಯಾವತ್ತೂ ಮಾತನಾಡಲಾರೆ. ರಾಜ್ಯದ ಜನರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ. ಎಲ್ಲರ ಬಗ್ಗೆ ನನಗೆ ಗೌರವ ಇದೆ. ಸಿದ್ದರಾಮಯ್ಯ ಅವರು ಕೀಳರಿಮೆಯಿಂದ ನನ್ನನ್ನು ಕೈ ಬಿಟ್ಟಿದ್ದಾರೆ ಸಂಪುಟದಿಂದ ಎಂದಿದ್ದಾರೆ. ಆ ರೀತಿ ಇದ್ದಿದ್ದರೆ ಸಂಪುಟಕ್ಕೆ ಸೇರಿಸಿಕೊಳ್ಳುತ್ತಲೇ ಇರಲಿಲ್ಲ. ಹಿರಿಯರು ಎಂಬ ಕಾರಣಕ್ಕೆ ನಾನೇ ಶಿಫಾರಸು ಮಾಡಿದ್ದು. ಯಾರೂ ಅವರ ಹೆಸರು ಹೇಳಲಿಲ್ಲ. ಪ್ರಸಾದ್ ಅವರ ಬಗ್ಗೆ ದ್ವೇಷ, ಅಸೂಯೆ ಇದ್ದಿದ್ದರೆ ಮಹತ್ವದ ಕಂದಾಯ ಖಾತೆ ಕೊಡುತ್ತಿರಲಿಲ್ಲ ಎಂದು ಹೇಳಿದರು. 

ನಮ್ಮಲ್ಲಿ 123 ಶಾಸಕರಿದ್ದಾರೆ.  ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. 34 ಮಂದಿಗೆ ಮಾತ್ರ ಅವಕಾಶ. ಪ್ರಸಾದ್ ಒಬ್ಬರಲ್ಲ 16 ಮಂದಿಯನ್ನು ಸಂಪುಟದಿಂದ ಕೈ ಬಿಡಲಾಗಿದೆ. ಕೈ ಬಿಡುವಾಗ ಹೇಳಲಿಲ್ಲ ಅಂತಾರೆ. ಆದರೆ ಮಂತ್ರಿ ಪರಿಷತ್ ಸಭೆಯಲ್ಲಿ ಹೇಳಿದ್ದೆ. ಅನಿವಾರ್ಯವಾಗಿ ಕೆಲವರನ್ನ ಸಂಪುಟದಿಂದ ಕೈ ಬಿಡಬೇಕಾಗುತ್ತದೆ ಎಂದು. ಗುತ್ತೇದಾರ್, ಮಾಲಕರಡ್ಡಿ, ಕೋಳಿವಾಡ, ಪಿರಿಯಾಪಟ್ಟಣ ವೆಂಕಟೇಶ್ ಅವರಿಗೆ ಮಂತ್ರಿ ಸ್ಥಾನ ಕೊಡಲಾಗಲಿಲ್ಲ. ಅವರು ರಾಜೀನಾಮೆ ಕೊಟ್ಟಿದ್ದಾರೆಯೇ ? ಪ್ರಸಾದ್ ಅವರು ಇದ್ದ ಮಂತ್ರಿ ಪರಿಷತ್ ಸಭೆಯಲ್ಲಿ ಕೆಲವರನ್ನು ಕೈ ಬಿಡಬೇಕಾಗುತ್ತದೆ ಎಂದಾಗ ಯಾರೂ ಮಾತನಾಡಲಿಲ್ಲ. ಇದಕ್ಕಿಂತ ಇನ್ನೇನು ಮಾಡಬೇಕು ಎಂದು ಸಿಎಂ ಪ್ರಶ್ನಿಸಿದರು. 

ಅಧಿಕಾರ ಇದ್ದರೆ ಪಕ್ಷ ಬೇಕು, ಇಲ್ಲದಿದ್ದರೆ ಬೇಡ. ನಮಗೆ ಅಧಿಕಾರ ಅದಾಗಿಯೇ ಬರಲಿಲ್ಲ. ಬಂದಿದ್ದು ಆರೂವರೆ ಕೋಟಿ ಜನರಿಂದ. 
ಪಕ್ಷ ನಮಗೆ ಅನಿವಾರ್ಯ, ನಾವು ಪಕ್ಷಕ್ಕೆ ಅನಿವಾರ್ಯ ಅಲ್ಲ. ಪಕ್ಷದ ಆಸ್ತಿ ಕಾರ್ಯಕರ್ತರು. ನಿಮಗೆ ನಾನು‌ ದ್ರೋಹ ಮಾಡಿದ್ದೇನಾ ? 
ಪ್ರಸಾದ್ ರಾಜಿನಾಮೆ ನೀಡಿದ್ದು ದುರದೃಷ್ಟಕರ. ಅಂತಿಮವಾಗಿ ತೀರ್ಮಾನ ಮಾಡುವುದು ಜನ. ನನ್ನನ್ನು ಅಥವಾ ಪ್ರಸಾದ್ ಅವರನ್ನು ಸೋಲಿಸುವುದು ಬಿಡುವುದು ಜನರ ತೀರ್ಮಾನ ಎಂದು ಸಿಎಂ ಸ್ಪಷ್ಟಪಡಿಸಿದರು.   

ಚಾಮುಂಡೇಶ್ವರಿ ಉಪ ಚುನಾವಣೆಗೂ ಮುನ್ನ ಐದು ಚುನಾವಣೆಗಳಲ್ಲಿ ನಾನು ಗೆದ್ದಾಗ ಪ್ರಸಾದ್ ಎಲ್ಲಿದ್ದರು? 85 ಲಕ್ಷದ ವಾಚ್ ಕಟ್ಟಿದ್ದಾರೆ ಸಿಎಂ ಎಂದರು ಪ್ರಸಾದ್. ಕಟ್ಟಿಕೊಂಡಾಗ ಯಾಕೆ ಹೇಳಲಿಲ್ಲ. ಆ ಬಗ್ಗೆ ತನಿಖೆ ಆಗಿ ಸರಕಾರಕ್ಕೆ ವಾಚ್ ಕೊಟ್ಟೆ. ಇದನ್ನೆಲ್ಲ ಕೇಳಿದರೆ ನೋವಾಗುತ್ತೆ. ಪ್ರಸಾದ್ ಅವರ ಬಗ್ಗೆ ಕೆಟ್ಟದಾಗಿ ಮಾತನಾಡುವುದಿಲ್ಲ. ಆರು ತಿಂಗಳ ಒಳಗೆ ಇಲ್ಲಿ ಮರು ಚುನಾವಣೆ ಬರಲಿದೆ. ನಮ್ಮ ಮನೆ ಸುಭದ್ರ ಮಾಡಬೇಕು. ಅದಕ್ಕಾಗಿ ಸಮಾವೇಶ ಆಯೋಜಿಸಲಾಗಿದೆ. ಯಾವುದೇ ಪ್ರತಿಷ್ಠೆಗೆ ಅಲ್ಲ. ಚುನಾವಣೆಯನ್ನು ಸವಾಲು ಎಂದು ಸ್ವೀಕಾರ ಮಾಡಿಲ್ಲ. ಮರು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಅದಕ್ಕೆ ತಯಾರಾಗಿ ಎಂದು ಮನವಿ ಮಾಡಲು ಈ ಸಮಾವೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಸಮಾವೇಶದಲ್ಲಿ ಕೆಪಿಸಿಸಿ‌ ಅಧ್ಯಕ್ಷ ಡಾ.ಜಿ ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಮಹದೇವಪ್ಪ, ಮಹದೇವಪ್ರಸಾದ್, ಸೇರಿದಂತೆ ಸಂಸದರು, ಶಾಸಕರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X