Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮ್ಮ ದೇಶಪ್ರೇಮವನ್ನು ಯಾರೂ ರುಜುವಾತು...

ತಮ್ಮ ದೇಶಪ್ರೇಮವನ್ನು ಯಾರೂ ರುಜುವಾತು ಪಡಿಸಬೇಕಿಲ್ಲ: ನಿಹಲಾನಿ

ವಾರ್ತಾಭಾರತಿವಾರ್ತಾಭಾರತಿ23 Oct 2016 10:49 PM IST
share

ಮುಂಬೈ,ಅ.23: ಯಾರದ್ದೇ ಆದರೂ ದೇಶಪ್ರೇಮಕ್ಕೆ ರುಜುವಾತು ಒದಗಿಸುವಂತೆ ಕೇಳುವುದು ತಪ್ಪಾಗುತ್ತದೆ ಎಂದು ಕೇಂದ್ರೀಯ ಚಲನಚಿತ್ರ ಸೆನ್ಸಾರ್ ಮಂಡಳಿಯ ಅಧ್ಯಕ್ಷ ಪಹ್ಲಾಜ್ ನಿಹಲಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರಣ್ ಜೋಹರ್ ಅವರ ‘ಎ ದಿಲ್ ಹೈ ಮುಷ್ಕಿಲ್’ ಚಿತ್ರದ ಬಿಡುಗಡೆ ಕುರಿತ ವಿವಾದದ ಹಿನ್ನೆಲೆಯಲ್ಲಿ ಅವರ ಈ ಅಭಿಪ್ರಾಯ ಹೊರಬಿದ್ದಿದೆ. ಪಾಕ್ ನಟ ಫವಾದ್ ಖಾನ್ ನಟಿಸಿದ್ದಾರೆಂಬ ಕಾರಣಕ್ಕೆ ತನ್ನ ಚಿತ್ರದ ಬಿಡುಗಡೆಯನ್ನು ವಿರೋಧಿಸುವವರಿಗೆ ವೀಡಿಯೊ ಮೂಲಕ ಇತ್ತೀಚೆಗೆ ವಿನಂತಿಸಿಕೊಂಡಿದ್ದ ಕರಣ್, ತಾನು ದೇಶಪ್ರೇಮಿ ಯಾಗಿದ್ದೇನೆ ಮತ್ತು ಭವಿಷ್ಯದಲ್ಲಿ ತನ್ನ ಚಿತ್ರಗಳಲ್ಲಿ ಪಾಕ್ ಕಲಾವಿದರನ್ನು ಬಳಸುವುದಿಲ್ಲ ಎಂದು ಭರವಸೆ ನೀಡಿದ್ದರು.
 ಪಾಕಿಸ್ತಾನಿ ಕಲಾವಿದರ ಮೇಲೆ ನಿಷೇಧ ಕುರಿತ ಸುದ್ದಿಗಾರರ ಪ್ರಶ್ನೆಗೆ ಕರಣ್ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ಉತ್ತರಿಸಿದ ನಿಹಲಾನಿ,ರಾಜಕೀಯ ಲಾಭಗಳಿಕೆಯ ಮೇಲೆ ಕಣ್ಣಿಟ್ಟಿರುವವರು ಈ ವಾತಾವರಣವನ್ನು ಸೃಷ್ಟಿಸಿದ್ದಾರೆ ಮತ್ತು ಯಾರೂ ತಮ್ಮ ದೇಶಪ್ರೇಮ ವನ್ನು ಪುನರುಚ್ಚರಿಸುವ ಅಗತ್ಯವಿಲ್ಲ ಎಂದು ಹೇಳಿದರು.
  ಪಾಕಿಸ್ತಾನಿ ಕಲಾವಿದರು ಮಾತ್ರವಲ್ಲ, ಆಮದು ಮತ್ತು ರಫ್ತನ್ನು ಕೂಡ ನಿಲ್ಲಿಸಬೇಕು. ನಮ್ಮ ಚಿತ್ರಗಳು ಅಲ್ಲಿಗೆ ದುಬೈ ಮೂಲಕ ಸೇರುತ್ತಿವೆ. ನಮ್ಮ ಚಿತ್ರಗಳನ್ನು ಅಲ್ಲಿಗೆ ಅಕ್ರಮವಾಗಿ ರಫ್ತು ಮಾಡಲಾಗುತ್ತಿದೆ ಎಂದು ಕುಟುಕಿದ ಅವರು, ಕೆಲವರು ತಮ್ಮ ರಾಜಕೀಯ ಲಾಭಕ್ಕಾಗಿ ಇಂತಹ ವಾತಾವರಣವನ್ನು ಸೃಷ್ಟಿಸಿದ್ದಾರೆ. ನಮ್ಮ ಚಿತ್ರ ನಿರ್ಮಾಪಕರ ಸಂಘ ಇಂಪಾದ ಸದಸ್ಯರೂ ತಾವು ಸ್ವತಃ ಚಿತ್ರವನ್ನು ನಿರ್ಮಿಸುತ್ತಿಲ್ಲವಾದರೂ ಪ್ರಚಾರ ಪಡೆಯಲು ‘ನಾವು ಪಾಕಿಸ್ತಾನಿ ಕಲಾವಿದರನ್ನು ನಿಷೇಧಿಸುತ್ತೇವೆ ಎಂದು ಹೇಳಿದ್ದಾರೆ. ಚಿತ್ರ ಪ್ರದರ್ಶಕರ ಸಂಘವು ಕೂಡ ನಿಷೇಧದ ಮಾತನ್ನಾಡಿದೆ. ಯಾರೇ ಆದರೂ ತಮ್ಮ ದೇಶಪ್ರೇಮದ ಪ್ರಮಾಣಪತ್ರ ನೀಡುವ ಅಗತ್ಯವಿದೆ ಎಂದು ನಾನು ಭಾವಿಸಿಲ್ಲ. ಅದನ್ನು ಕೇಳುವವರು ತಪ್ಪು ಮಾಡುತ್ತಿದ್ದಾರೆ ಎಂದರು.
ಟಿವಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ‘ಎ ದಿಲ್....’ ಮೇಲಿನ ನಿಷೇಧವು ಭಾರತೀಯರಿಗೆ ನಷ್ಟವನ್ನುಂಟು ಮಾಡುತ್ತಿತ್ತು ಅಷ್ಟೇ. ಕರಣ್ ನಷ್ಟ ಅನುಭವಿಸಬೇಕಾಗುತ್ತಿತ್ತು. ಪಾಕ್ ನಟ ಹಣವನ್ನು ಪಡೆದುಕೊಂಡಿದ್ದಾನೆ ಮತ್ತು ಕಲೆ ಮತ್ತು ಸಂಸ್ಕೃತಿಯ ಮೂಲಕ ಆತ ಉಭಯ ರಾಷ್ಟ್ರಗಳ ನಡುವಿನ ಬಿರುಕನ್ನು ಮುಚ್ಚುವಲ್ಲಿ ತನ್ನ ಕೊಡುಗೆಯನ್ನು ಸಲ್ಲಿಸಿದ್ದಾನೆ. ಆತ ತನ್ನ ಕರ್ತವ್ಯವನ್ನು ಮಾಡಿದ್ದಾನೆ. ನಷ್ಟವೇನಿದ್ದರೂ ನಮ್ಮದೇ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X