Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ:...

ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ: ಸಿಎಂ ಇಂದು ದಿಲ್ಲಿಗೆ

ವಾರ್ತಾಭಾರತಿವಾರ್ತಾಭಾರತಿ23 Oct 2016 11:56 PM IST
share
ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ: ಸಿಎಂ ಇಂದು ದಿಲ್ಲಿಗೆ

ಬೆಂಗಳೂರು, ಅ.23: ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಿ ಅನುಮತಿ ಪಡೆದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೋಮವಾರ ದಿಲ್ಲಿಗೆ ತೆರಳಲಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ  ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ನಿಗಮ ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ. ಆ ಬಳಿಕ ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರನ್ನು ನಿಯೋಜಿಸಲಾಗುತ್ತದೆ ಎಂದು ಗೊತ್ತಾಗಿದೆ.

ರಾಜ್ಯದಲ್ಲಿನ 95ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇಮಕ ಸಂಬಂಧ ಈಗಾಗಲೇ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅದನ್ನು ಅಂತಿಮ ಗೊಳಿಸಲು ಎಐಸಿಸಿ ಒಪ್ಪಿಗೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಆ ಹಿನ್ನೆಲೆಯಲ್ಲಿ ನಾಳೆ ವರಿಷ್ಠರ ಉಪಸ್ಥಿತಿಯಲ್ಲಿ ಮಹತ್ವದ ಸಭೆ ದಿಲ್ಲಿಯಲ್ಲಿ ನಡೆಯಲಿದೆ.

ಸಚಿವಸ್ಥಾನ ವಂಚಿತ ಕೆಲ ಶಾಸಕರನ್ನು ಪ್ರಮುಖ ನಿಗಮ ಮಂಡಳಿಗಳಿಗೆ ನೇಮಕ ಮಾಡಲು ಉದ್ದೇಶಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಸೇರಿದಂತೆ ಕೆಲವರಿಗೆ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನದ ಮಣೆ ಹಾಕುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಆದರೆ, ಶಾಸಕರಾಗಿ ಆಯ್ಕೆಯಾಗಿರುವವರಿಗೆ ಪುನಃ ಅಧಿಕಾರ ನೀಡುವುದು ಸರಿಯಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಹಾಗೂ ಶೋಷಿತ ಸಮುದಾಯಗಳ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ರಾಹುಲ್ ಗಾಂಧಿ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಮಾರ್ಗದರ್ಶನದಂತೆ ಸಾಮಾಜಿಕ ನ್ಯಾಯ, ಜಾತಿ ಸಮೀಕರಣ, ಪ್ರಾದೇಶಿಕತೆ, ಪಕ್ಷ ನಿಷ್ಠೆ ಸೇರಿದಂತೆ ಮುಂಬರಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕೆ ಲಾಭ ಮಾಡಿಕೊಳ್ಳುವ ‘ಲೆಕ್ಕಾಚಾರ’ದಲ್ಲಿ ಪಟ್ಟಿ ಸಿದ್ಧಪಡಿಸಿದ್ದು, ಅದಕ್ಕೆ ಕೆಲ ಸಣ್ಣ-ಪುಟ್ಟ ಬದಲಾವಣೆಗಳೊಂದಿಗೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ.

ದೀಪಾವಳಿ ಉಡುಗೊರೆ

ನಿರೀಕ್ಷೆಯಂತೆ ಹೈಕಮಾಂಡ್ ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಕ್ಕೆ ಒಪ್ಪಿಗೆ ನೀಡಿದರೆ ದೀಪಾವಳಿ ವೇಳೆಗೆ ರಾಜ್ಯದ 95ಕ್ಕೂ ಹೆಚ್ಚು ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ಆಗಲಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ಭಾಗ್ಯ ದೊರೆಯಲಿದೆ.

ಅಲ್ಲದೆ, ವಿಧಾನ ಪರಿಷತ್‌ನಲ್ಲಿ ಖಾಲಿಯಿರುವ ಮೂರು ನಾಮ ನಿರ್ದೇಶನ ಸದಸ್ಯರನ್ನು ನೇಮಕ ಮಾಡುವ ಸಂಬಂಧವೂ ವರಿಷ್ಠರೊಂದಿಗೆ ಸಿದ್ದರಾಮಯ್ಯ ಸಮಾಲೋಚನೆ ನಡೆಸಲಿದ್ದಾರೆ. ಆ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಹೊಸದಿಲ್ಲಿಯಲ್ಲಿ ಲಾಬಿ ಆರಂಭಿಸಿದ್ದಾರೆ.

ಅಧ್ಯಕ್ಷರ ಬದಲಾವಣೆ

ಡಾ.ಜಿ.ಪರಮೇಶ್ವರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಅ.29ಕ್ಕೆ ಆರು ವರ್ಷ ಪೂರ್ಣಗೊಳ್ಳಲಿದೆ. ಹೀಗಾಗಿ ನೂತನ ಅಧ್ಯಕ್ಷರ ನೇಮಕ ಅಥವಾ ಪರಮೇಶ್ವರ್ ಅವರನ್ನೇ ಆ ಸ್ಥಾನದಲ್ಲಿ ಮುಂದುವರಿಸುವ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸುವ ಸಾಧ್ಯತೆಗಳಿವೆ.

ಈಗಾಗಲೇ ದಿನೇಶ್ ಗುಂಡೂರಾವ್‌ರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯಲು ಇಚ್ಛಿಸಿದ್ದಾರೆ. ಈ ಮಧ್ಯೆ ದಲಿತ ಸಮುದಾಯದ ಹಿರಿಯ ಮುಖಂಡ ವಿ.ಶ್ರೀನಿವಾಸ ಪ್ರಸಾದ್ ರಾಜೀನಾಮೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಸಾಧ್ಯತೆ ಕಡಿಮೆ ಎಂದು ಗೊತ್ತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X