Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಯೋಧರ ಬಗ್ಗೆ ಬ್ರಿಟಿಷ್ ಕಮಾಂಡರ್...

ಭಾರತೀಯ ಯೋಧರ ಬಗ್ಗೆ ಬ್ರಿಟಿಷ್ ಕಮಾಂಡರ್ ನ ಅಭಿಪ್ರಾಯ ಕೇಳಿದರೆ ನಮಗೆ ಹೆಮ್ಮೆಯಾಗುವುದು ಖಚಿತ

ಎರಡನೇ ಜಾಗತಿಕ ಯುದ್ಧದಲ್ಲಿ ಭಾರತೀಯರ ನೇತೃತ್ವ ವಹಿಸಿದ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ24 Oct 2016 1:48 PM IST
share
ಭಾರತೀಯ ಯೋಧರ ಬಗ್ಗೆ ಬ್ರಿಟಿಷ್ ಕಮಾಂಡರ್ ನ ಅಭಿಪ್ರಾಯ ಕೇಳಿದರೆ ನಮಗೆ ಹೆಮ್ಮೆಯಾಗುವುದು ಖಚಿತ

ಅಮೃತಸರ್, ಅ.24: ‘‘ಭಾರತೀಯ ಯೋಧರು ಶೂರರಲ್ಲಿ ಶೂರರು. ಅವರ ನೇತೃತ್ವ ವಹಿಸುವುದು ಒಂದು ಗೌರವದ ಕಾರ್ಯ.’’ ಹೀಗೆಂದು ಹೇಳಿದವರು ನಿವೃತ್ತ ಮೇಜರ್ ಟಾಮ್ ಕಾನ್‌ವೇ (98). ಭಾರತೀಯ ಯೋಧರ ಕಮಾಂಡರ್ ಆಗಿ ಕಾರ್ಯ ನಿರ್ವಹಿಸಿದ್ದ ಹಾಗೂ ಈಗ ಬದುಕುಳಿದಿರುವ ಏಕೈಕ ಬ್ರಿಟಿಷ್ ಕಮಾಂಡರ್ ಅವರಾಗಿದ್ದಾರೆ.

ರವಿವಾರ ಅಮೃತಸರದಲ್ಲಿ ಯುದ್ಧ ಸ್ಮಾರಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಮೇಜರ್ ಕಾನ್ ವೇ ಸುಮಾರು 80 ವರ್ಷಗಳ ನಂತರ ಉತ್ತರ ಭಾರತಕ್ಕೆ ಭೇಟಿ ನೀಡಿದ್ದರು.

ಎರಡನೆ ಮಹಾಯುದ್ಧದಲ್ಲೂ ಭಾಗಿಯಾಗಿದ್ದ ಮೇಜರ್ ಟಾಮ್ ಕಾನ್ ವೇ ಅಲಮೇನ್ ಯುದ್ಧದ ಹೀರೋಗಳಲ್ಲೊಬ್ಬರಾಗಿದ್ದರಲ್ಲದೆ ಡೋಗ್ರಾ, ಸಿಕ್ಖರು ಹಾಗೂ ಪಠಾಣರನ್ನೊಳಗೊಂಡ ಸೇನೆಗೆ ಕಮಾಂಡರ್ ಆಗಿದ್ದವರು.

1940ರ ಎಪ್ರಿಲ್ ನಲ್ಲಿ ಬ್ರಿಟಿಷ್ ಸೇನೆಗೆ ಸೇರಿದ್ದ ಅವರು ತಾನು ಅದಾಗಲೇ ಭಾರತೀಯ ಯೋಧರ ಶೌರ್ಯಗಾಥೆಗಳನ್ನು ಕೇಳಿದ್ದಾಗಿ ಹೇಳಿಕೊಂಡಿದ್ದಾರೆ.

ಅವರು ಗೈಡ್ಸ್ ಕ್ಯಾವಲ್ರಿ ಸೇರಿದ್ದರು. ಮಧ್ಯರಾತ್ರಿಯಾಗಿ ಹತ್ತು ನಿಮಿಷದ ನಂತರ ಸಂಚರಿಸುತ್ತಿದ್ದ ಪಠಾಣ್ ಕೋಟ್ ನಿಂದ ಕುಲು ಕಣಿವೆಯ ತನಕದ ರೈಲಿನಲ್ಲಿ ತಾನು ಯಾವಾಗಲೂ ಪ್ರಯಾಣಿಸುತ್ತಿದ್ದೆ, ಎಂದು ಅವರು ನೆನಪಿಸಿಕೊಳ್ಳುತ್ತಾರಲ್ಲದೆ, ತಾವು ಡೋಗ್ರಾ ಸೈನಿಕರನ್ನು ಚೆನ್ನಾಗಿ ಅರಿಯಲು ಅವರ ಕುಟುಂಬ ಸದಸ್ಯರನ್ನೂ ಭೇಟಿಯಾಗುತ್ತಿದ್ದೆ ಎಂದರು.

ಅವರು ನಂತರ ಸುಡಾನ್ ನಲ್ಲೂ ಕಾರ್ಯನಿರ್ವಹಿಸಿದ್ದರಲ್ಲದೆ 1942 ರಲ್ಲಿ ನಡೆದ ಅಲಮೇನ್ ಯುದ್ಧದಲ್ಲಿ ಸಾಹಸ ಪ್ರದರ್ಶಿಸಿ ಪದಕ ವಿಜೇತರೂ ಆಗಿದ್ದರು.1944 ರಲ್ಲಿ ಸ್ವದೇಶಕ್ಕೆ ಮರಳಿದ ಅವರು ನಂತರ ಲಂಡನ್ನಿನಲ್ಲಿದ್ದ ಭಾರತೀಯ ಸೇನಾ ಪಡೆಯ ಕಮಾಂಡರ್ ಆಗಿದ್ದರಲ್ಲದೆ 1946 ರಲ್ಲಿ ನಡೆದ ವಿಕ್ಟರಿ ಪೆರೇಡ್ ನಂತರ ನಿವೃತ್ತಿ ಹೊಂದಿದ್ದರು.

ಕುಲು ಕಣಿವೆಗೆ ಮತ್ತೊಮ್ಮೆ ಹೋಗಲು ತನಗೆ ಆಸೆಯಾಗಿದೆ ಎಂದು ಅವರು ಹೇಳುತ್ತಾರಾದರೂ ಅದು ಈ ವಯಸ್ಸಿನಲ್ಲಿ ತಮಗೆ ಸಾಧ್ಯವೇ ಎಂಬುದು ಅವರಿಗೆ ತಿಳಿದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X