Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನುಭವ, ಬದ್ಧತೆ, ಪರಿಸರ ಕಲಾವಿದನ...

ಅನುಭವ, ಬದ್ಧತೆ, ಪರಿಸರ ಕಲಾವಿದನ ಕಲಾಕೃತಿಗೆ ಸ್ಫೂರ್ತಿ: ಬಾಲನ್ ನಂಬಿಯಾರ್

ಬೀಡ್ಸ್‌ನಲ್ಲಿ ಬೇಸಿಕ್ ಡಿಸೈನ್ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ24 Oct 2016 5:52 PM IST
share
ಅನುಭವ, ಬದ್ಧತೆ, ಪರಿಸರ ಕಲಾವಿದನ ಕಲಾಕೃತಿಗೆ ಸ್ಫೂರ್ತಿ: ಬಾಲನ್ ನಂಬಿಯಾರ್

ಮಂಗಳೂರು, ಅ.24: ಕಲಾವಿದನ ಕಲೆಗೆ ಆತ ಬದುಕಿದ ಪರಿಸರವೇ ಸ್ಫೂರ್ತಿ ನೀಡಬಹುದು. ಅನುಭವ ಮತ್ತು ಬದ್ಧತೆ ಆತನಿಂದ ಶ್ರೇಷ್ಠ ಕಲಾಕೃತಿಯನ್ನು ನಿರ್ಮಿಸುವಂತೆ ಮಾಡಬಹುದು ಎಂದು ದೇಶದ ಖ್ಯಾತ ಕಲಾವಿದ, ದಿಲ್ಲಿಯ ಲಲಿತ ಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಬಾಲನ್ ನಂಬಿಯಾರ್ ತಿಳಿಸಿದರು.

ಇನೋಳಿ ಬಿಐಟಿ ಆವರಣದಲ್ಲಿರುವ ಬೀಡ್ಸ್ (ಬ್ಯಾರೀಸ್ ಎನ್ವಿರೋ ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್)ನಲ್ಲಿ ಸೋಮವಾರದಿಂದ ಬುಧವಾರದವರೆಗೆ ನಡೆಯಲಿರುವ ಬೇಸಿಕ್ ಡಿಸೈನ್ ಕಾರ್ಯಾಗಾರಕ್ಕೆ ಅವರು ಚಾಲನೆ ನೀಡಿ ಮಾತನಾಡುತ್ತಿದ್ದರು.

ಕೇರಳದ ಉತ್ತರ ಭಾಗದಿಂದ ಉಡುಪಿಯ ಕುಂದಾಪುರ ನಡುವಿನ ಪ್ರದೇಶದಲ್ಲಿ ಅತ್ಯಂತ ಸಮೃದ್ಧವಾದ ಜನಪದ ಸಂಸ್ಕೃತಿಯ ಬಗ್ಗೆ ಸಂಶೋಧನೆ ನಡೆಸಿದ ಆಶ್ಚರ್ಯಕರವಾದ ವಿಶಿಷ್ಟವಾದ ಪ್ರದರ್ಶನ ಜನಪದ ಕಲಾ ಪ್ರಕಾರಗಳಲ್ಲಿ ಕಲಾವಿದನಿಗೆ ಬೇಕಾದ ವಸ್ತುಗಳಿವೆ. ಕರಾವಳಿಯ ಭೂತಕೋಲ, ಕೇರಳದ ತೈಯಂ ಕಲಾ ಪ್ರಕಾರಗಳ ವರ್ಣ ಸಂಯೋಜನೆ, ವೇಷ ಭೂಷಣಗಳು, ವಿನ್ಯಾಸ, ಸೃಜನ ಶೀಲ ಕಲಾವಿದನ ತಿಳುವಳಿಕೆಯನ್ನು ವೃದ್ಧಿಸುತ್ತವೆ ಎನ್ನುವುದು ನನ್ನ ಅನುಭವ. ನಿಸರ್ಗದಲ್ಲಿರುವ ಹೂ, ಗಿಡ, ಮರ, ಬಳ್ಳಿ ನನ್ನ ಕಲಾವಿನ್ಯಾಸದ ಮರು ಸೃಷ್ಟಿಗೆ ಕಾರಣವಾಗಿದೆ. ಕಲೆ ಸಂಕೇತವಾಗಿ ಜನರ ಮುಂದಿರುತ್ತವೆ ಹೊರತು ಕಥೆಯಂತೆ ಎಲ್ಲಾ ವಿವರಗಳ ಚಿತ್ರಣವನ್ನು ನೀಡುವುದಿಲ್ಲ. ಒಂದು ಕಲಾಕೃತಿಯಲ್ಲಿ ಕೆಲವು ಗಣಿತದ ಸೂತ್ರಗಳು, ವಿನ್ಯಾಸಗಳು, ಸಂಕೇತಗಳು, ವರ್ಣ ಸಂಯೋಜನೆಗಳು, ನಿಸರ್ಗದತ್ತವಾದ ಸೂತ್ರಗಳು ಸತತ ಪರಿಶ್ರಮದೊಂದಿಗೆ ಸೃಜನಶೀಲ ಯೋಚನೆಯೊಂದಿಗೆ ಸಂಯೋಜನೆಗೊಂಡಾಗ ಒಂದು ಉತ್ತಮ ಕಲಾಕೃತಿ ಮೂಡಿಬರಬಹುದು ಎಂದು ಕಲಾವಿದ ಬಾಲನ್ ನಂಬಿಯಾರ್ ತಿಳಿಸಿದರು.

ನಾನು ನನ್ನ ಬಾಲ್ಯದಲ್ಲಿ ನೋಡಿದ ಘಟನೆಗಳು, ನನ್ನ ಬಾಲ್ಯದ ನೆನಪುಗಳು, ವಾತಾವರಣ ನನ್ನ ಕಲಾಕೃತಿಗೆ ಸ್ಫೂರ್ತಿ ನೀಡಿದೆ. ನಮ್ಮ ಸುತ್ತ ಮುತ್ತಲಿನ ವಸ್ತುಗಳ ಕಲಾ ವಿನ್ಯಾಸವನ್ನು ನಮಗೆ ಗುರುತಿಸಲು ಸಾಧ್ಯವಾದರೆ ಅದನ್ನು ಮರು ಸೃಷ್ಟಿಸುವುದು ಕಲಾವಿದನ ಸವಾಲಾಗಿದೆ. ನಾನು ಇಂತಹ ಮರು ಸೃಷ್ಟಿಗೆ ಹೆಚ್ಚಿನ ಗಮನ ಹರಿಸಿದ್ದೇನೆ ಹೊರತು ಅನುಕರಣೆ ಮಾಡಿಲ್ಲ. ಲೋಹದ (ಸ್ಟೀಲ್) ಕಲಾಕೃತಿಯ ರಚನೆಗೆ ಹೆಚ್ಚಿನ ಗಮನಹರಿಸಿದ್ದೇನೆ. ಈ ಕೃತಿಗಳು ದೀರ್ಘಕಾಲ ಬಾಳಿಕೆ ಬರುವ ಕಲಾಕೃತಿಗಳಾಗಿವೆ ಎಂದು ಬಾಲನ್ ನಂಬಿಯಾರ್ ತಿಳಿಸಿದರು.

ಉತ್ತಮ ಕಲಾವಿದನಾಗಲು ಬಳಸುವ ಸಾಮಗ್ರಿಗಳ ಮೇಲಿನ ಹಿಡಿತ, ಕಲೆಯ ಮೂಲಕ ಜನರನ್ನು ಸಮರ್ಥವಾಗಿ ತಲುಪುವುದು, ಹೊಸತರ ಸೃಷ್ಟಿಯ ವಿಚಾರಗಳಲ್ಲಿ ಕಲಾವಿದ ತನ್ನನ್ನು ಹೆಚ್ಚು ತೆರೆದುಕೊಂಡಾಗ ಉತ್ತಮ ಕಲಾವಿದ, ವಿನ್ಯಾಸಕಾರನಾಗಲು ಸಾಧ್ಯ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾರೀಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಮಾತನಾಡುತ್ತಾ, ಹಿರಿಯ ಕಲಾವಿದ ಬಾಲನ್ ನಂಬಿಯಾರ್‌ರ ಅನುಭವಗಳು ಯುವ ಪ್ರತಿಭೆಗಳಿಗೆ ಸ್ಫೂರ್ತಿಯಾಗಲಿ ಎಂದು ಶುಭ ಹಾರೈಸಿದರು.

ಕಲಿಕೆಯಲ್ಲಿ ಕಣ್ಣಿನಿಂದ ನೋಡುವುದರಿಂದ ಮತ್ತು ಕೃತಿಯನ್ನು ಮಾಡುವುದರಿಂದ ಹೆಚ್ಚು ಕಲಿತುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಕಾರ್ಯಾಗಾರ ಹೆಚ್ಚು ಸಹಕಾರಿ ಎಂದು ಬೀಡ್ಸ್‌ನ ಪ್ರಾಂಶುಪಾಲ ಭವೇಶ್ ಮೆಹ್ತಾ ತಿಳಿಸಿದರು.

ಕಲಾವಿದೆ ಅವೆಲಿನಾ, ಡಾ.ಅಖ್ತರ್ ಹುಸೈನ್ ಹಾಗೂ ಬೀಡ್ಸ್‌ನ ಉಪನ್ಯಾಸಕರಾದ ಕರೀಂ, ಅಝೀಝ್ ಮುಸ್ತಫ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಡೀನ್ ಮುಹಮ್ಮದ್ ನಿಸಾರ್ ವಂದಿಸಿದರು. ಅಫ್ರಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X