ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಕಾಸರಗೋಡು, ಅ.24: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಮೃತಪಟ್ಟವರನ್ನು ಬದಿಯಡ್ಕ ಅಗಲ್ಪಾಡಿಯ ಬಾಲಕೃಷ್ಣ ಕುರುಪ್ (68) ಎಂದು ಗುರುತಿಸಲಾಗಿದೆ.
ಬಾಲಕೃಷ್ಣ ಬದಿಯಡ್ಕ ಮೇಲಿನ ಪೇಟೆಯ ಗ್ಯಾರೇಜ್ವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ರವಿವಾರ ರಾತ್ರಿ ರಸ್ತೆ ದಾಟುತ್ತಿದ್ದಾಗ ಬೈಕೊಂದು ಢಿಕ್ಕಿ ಹೊಡೆದಿದ್ದು ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬಾಲಕೃಷ್ಣರಿಗೆ ಢಿಕ್ಕಿ ಹೊಡೆದ ಬೈಕ್ ಮಗುಚಿ ಬಿದ್ದಿದ್ದು ಸವಾರ ಬೀಜಂತಡ್ಕದ ಮನೋಹರ ಆಚಾರ್ಯ ಎಂಬವರೂ (55) ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬದಿಯಡ್ಕ ಠಾಣಾ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Next Story





