Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರಥಮ ಟೆಸ್ಟ್: ಇಂಗ್ಲೆಂಡ್‌ಗೆ ರೋಚಕ...

ಪ್ರಥಮ ಟೆಸ್ಟ್: ಇಂಗ್ಲೆಂಡ್‌ಗೆ ರೋಚಕ ಗೆಲುವು ತಂದುಕೊಟ್ಟ ಸ್ಟೋಕ್ಸ್

ವಾರ್ತಾಭಾರತಿವಾರ್ತಾಭಾರತಿ24 Oct 2016 11:06 PM IST
share
ಪ್ರಥಮ ಟೆಸ್ಟ್: ಇಂಗ್ಲೆಂಡ್‌ಗೆ ರೋಚಕ ಗೆಲುವು ತಂದುಕೊಟ್ಟ ಸ್ಟೋಕ್ಸ್

ಚಿತ್ತಗಾಂಗ್, ಅ.24: ಕೇವಲ ಮೂರೇ ಎಸೆತಗಳಲ್ಲಿ ಬಾಂಗ್ಲಾದೇಶದ ಕೊನೆಯ ಎರಡು ವಿಕೆಟ್‌ಗಳನ್ನು ಉರುಳಿಸಿದ ಬೆನ್ ಸ್ಟೋಕ್ಸ್ ಇಂಗ್ಲೆಂಡ್‌ಗೆ ಮೊದಲ ಟೆಸ್ಟ್ ಪಂದ್ಯದಲ್ಲಿ 22 ರನ್‌ಗಳ ರೋಚಕ ಗೆಲುವು ತಂದುಕೊಟ್ಟಿದ್ದಾರೆ.

ಸೋಮವಾರ 8 ವಿಕೆಟ್‌ಗಳ ನಷ್ಟಕ್ಕೆ 253 ರನ್‌ನಿಂದ ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶಕ್ಕೆ ಪಂದ್ಯವನ್ನು ಗೆಲ್ಲಲು ಅಂತಿಮ ಎರಡು ವಿಕೆಟ್ ನೆರವಿನಿಂದ 33 ರನ್ ಗಳಿಸಬೇಕಾಗಿತ್ತು. ಬೆಳಗ್ಗೆ ಮೊದಲ 3 ಓವರ್‌ಗಳಲ್ಲಿ 10 ರನ್ ಗಳಿಸಿದ ಬಾಂಗ್ಲಾದೇಶ ಗೆಲುವಿನ ಸನಿಹ ತಲುಪಿತ್ತು.

ನಾಲ್ಕನೆ ಓವರ್‌ನ ಮೊದಲ ಎಸೆತದಲ್ಲಿ ತೈಜುಲ್ ಇಸ್ಲಾಮ್‌ರನ್ನು ಎಲ್‌ಬಿಡಬ್ಲು ಬಲೆಗೆ ಬೀಳಿಸಿದ ಸ್ಟೋಕ್ಸ್ ಇಂಗ್ಲೆಂಡ್‌ಗೆ ಮೇಲುಗೈ ಒದಗಿಸಿದರು. ಕೊನೆಯ ಬ್ಯಾಟ್ಸ್‌ಮನ್ ಶಫಿವುಲ್ ಇಸ್ಲಾಮ್ ಕೇವಲ 2 ಎಸೆತಗಳನ್ನು ಎದುರಿಸಿ ಸ್ಟೋಕ್ಸ್‌ಗೆ ವಿಕೆಟ್ ಒಪ್ಪಿಸಿದಾಗ 263 ರನ್‌ಗೆ ಬಾಂಗ್ಲಾದೇಶ ಗಂಟುಮೂಟೆ ಕಟ್ಟಿತು. ಏಕಾಂಗಿ ಹೋರಾಟ ನೀಡಿದ ಶಬ್ಬೀರ್ರಹ್ಮಾನ್(ಔಟಾಗದೆ 64) ನಿರಾಸೆಯಿಂದ ಪೆವಿಲಿಯನ್ ಹಾದಿ ಹಿಡಿದರು.

ಇಂಗ್ಲೆಂಡ್‌ನ ಎರಡನೆ ಇನಿಂಗ್ಸ್‌ನಲ್ಲಿ ನಿರ್ಣಾಯಕ 85 ರನ್ ಗಳಿಸಿದ್ದ ಸ್ಟೋಕ್ಸ್ ಬಾಂಗ್ಲಾದೇಶಕ್ಕೆ ಕಠಿಣ ಸವಾಲು ನೀಡಲು ಕಾರಣರಾದರು. ಬೌಲಿಂಗ್‌ನಲ್ಲೂ ಮಿಂಚುವ ಮೂಲಕ ಬಾಂಗ್ಲಾಕ್ಕೆ ಗೆಲುವನ್ನು ನಿರಾಕರಿಸಿದರು.

‘‘30 ರನ್ ಹಾಗೂ ಎರಡು ವಿಕೆಟ್‌ಗಳ ನಡುವೆ ಭಾರೀ ಅಂತರವಿದೆ. ಆದಾಗ್ಯೂ ನಾವು ಗೆಲುವಿನ ಸನಿಹದಲ್ಲಿ ಎಡವಿದೆವು. ನಾವು ಈ ಪಂದ್ಯವನ್ನು ಗೆಲ್ಲುತ್ತಿದ್ದರೆ, ಅದೊಂದು ಅದ್ಭುತ ಟೆಸ್ಟ್ ಪಂದ್ಯವಾಗುತ್ತಿತ್ತು’’ ಎಂದು ಬಾಂಗ್ಲಾದೇಶದ ನಾಯಕ ಮುಶ್ಫಿಕುರ್ರಹೀಂ ತಿಳಿಸಿದ್ದಾರೆ.

ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ 293 ರನ್ ಗಳಿಸಿತ್ತು. ಬಾಂಗ್ಲಾದೇಶವನ್ನು ಮೊದಲ ಇನಿಂಗ್ಸ್‌ನಲ್ಲಿ 248 ರನ್‌ಗೆ ಆಲೌಟ್ ಮಾಡಿ 45 ರನ್ ಮುನ್ನಡೆ ಸಂಪಾದಿಸಿತ್ತು.

ಎಕ್ಸ್‌ಟ್ರಾ ಇನಿಂಗ್ಸ್

1: ಬಾಂಗ್ಲಾದೇಶ ಇದೇ ಮೊದಲ ಬಾರಿ ಕೇವಲ 22 ರನ್ ಅಂತರದಿಂದ ಟೆಸ್ಟ್ ಪಂದ್ಯವನ್ನು ಸೋತಿದೆ. 2012-13ರಲ್ಲಿ ಢಾಕಾದಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ 77 ರನ್‌ಗಳ ಅಂತರದಿಂದ ಸೋತಿತ್ತು. 9: ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ 9ನೆ ಬಾರಿ ಅತ್ಯಂತ ಕಡಿಮೆ ಅಂತರದ ಜಯ ಸಾಧಿಸಿದೆ. ಆಸ್ಟ್ರೇಲಿಯ ವಿರುದ್ಧ ಹೆಚ್ಚಿನ ಬಾರಿ ಕಡಿಮೆ ಅಂತರದ ಜಯ ಸಾಧಿಸಿರುವ ಇಂಗ್ಲೆಂಡ್ ಈ ಹಿಂದೆ 1998ರಲ್ಲಿ ದಕ್ಷಿಣ ಆಫ್ರಿಕದ ವಿರುದ್ಧ 23 ರನ್‌ಗಳ ಜಯ ಸಾಧಿಸಿತ್ತು.

1980: ಏಷ್ಯಾದಲ್ಲಿ 1979-80ರಲ್ಲಿ ಇಂಗ್ಲೆಂಡ್‌ನ ಆಟಗಾರನೊಬ್ಬ ಟೆಸ್ಟ್ ಪಂದ್ಯದಲ್ಲಿ 100ಕ್ಕೂ ಅಧಿಕ ರನ್ ಹಾಗೂ 5ಕ್ಕೂ ಅಧಿಕ ವಿಕೆಟ್ ಪಡೆದಿದ್ದರು. ಇದೀಗ ಬೆನ್ ಸ್ಟೋಕ್ಸ್ ಆ ಸಾಧನೆಯನ್ನು ಪುನರಾವರ್ತಿಸಿದ್ದಾರೆ. ಸ್ಟೋಕ್ಸ್ ಬ್ಯಾಟಿಂಗ್‌ನಲ್ಲಿ 18 ಹಾಗೂ 85 ರನ್ ಗಳಿಸಿದ್ದರು. ಬೌಲಿಂಗ್‌ನಲ್ಲಿ 26 ರನ್‌ಗೆ 4 ಹಾಗೂ 20 ರನ್‌ಗೆ 2 ವಿಕೆಟ್‌ಗಳನ್ನು ಉರುಳಿಸಿದ್ದಾರೆ.

3: ಬೆನ್ ಸ್ಟೋಕ್ಸ್ ಟೆಸ್ಟ್‌ನಲ್ಲಿ ಮೂರನೆ ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. 2015ರ ಋತುವಿನ ಬಳಿಕ ಎಲ್ಲ ಮೂರು ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.

1: ಬಾಂಗ್ಲಾದೇಶ ಇದೇ ಮೊದಲ ಬಾರಿ ಇಂಗ್ಲೆಂಡ್ ವಿರುದ್ಧ ಟೆಸ್ಟ್‌ನಲ್ಲಿ ಎಲ್ಲ 20 ವಿಕೆಟ್‌ಗಳನ್ನು ಉರುಳಿಸಿದೆ. ಈ ಹಿಂದೆ ಝಿಂಬಾಬ್ವೆ ಹಾಗೂ ವೆಸ್ಟ್‌ಇಂಡೀಸ್ ವಿರುದ್ಧ ಮಾತ್ರ ಈ ಸಾಧನೆ ಮಾಡಿತ್ತು.

1: ಶಬ್ಬೀರ್ರಹ್ಮಾನ್ ಚೊಚ್ಚಲ ಪಂದ್ಯದಲ್ಲಿ ಅರ್ಧಶತಕ ಶತಕ ಬಾರಿಸಿದ ಬಾಂಗ್ಲಾದೇಶದ ಮೊದಲ ಬ್ಯಾಟ್ಸ್‌ಮನ್. ಶಬ್ಬೀರ್ರಹ್ಮಾನ್ 7ನೆ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಔಟಾಗದೆ 64 ರನ್ ಗಳಿಸಿದ ವಿಶ್ವದ 9ನೆ ಬ್ಯಾಟ್ಸ್‌ಮನ್.

ಸಂಕ್ಷಿಪ್ತ ಸ್ಕೋರ್

ಇಂಗ್ಲೆಂಡ್ ಪ್ರಥಮ ಇನಿಂಗ್ಸ್: 293

ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್: 240

ಬಾಂಗ್ಲಾದೇಶ ಪ್ರಥಮ ಇನಿಂಗ್ಸ್: 248

ಬಾಂಗ್ಲಾದೇಶ ಎರಡನೆ ಇನಿಂಗ್ಸ್: 263

(ಶಬ್ಬೀರ್ರಹ್ಮಾನ್ ಅಜೇಯ 64, ಇಮ್ರಾನ್ ಕಯೆಸ್ 43, ಬ್ಯಾಟಿ 3-65, ಅಲಿ 2-60, ಬ್ರಾಡ್ 2-31, ಸ್ಟೋಕ್ಸ್ 2-20)

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X