ಲೋಕಾಯುಕ್ತರಿಂದ ದೂರು ಸ್ವೀಕಾರ
ಉಡುಪಿ, ಅ.24: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ಹಿನ್ನೆಲೆಯಲ್ಲಿ ದೂರು ಅರ್ಜಿಗಳ ಪ್ರಪತ್ರಗಳನ್ನು ಈ ಕೆಳಕಂಡ ಸ್ಥಳಗಳಲ್ಲಿ ಸ್ವೀಕರಿಸಲಾಗುವುದು.
ಅ.26ರಂದು ಬೆಳಗ್ಗೆ 11:30ರಿಂದ ಅಪರಾಹ್ನ 1ರವರೆಗೆ ಉಡುಪಿ ಪ್ರವಾಸಿ ಮಂದಿರ, ಅಪರಾಹ್ನ 3ರಿಂದ 4:30ರವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಅ.27ರಂದು ಬೆಳಗ್ಗೆ 11:30ರಿಂದ 1ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ನಿಗದಿತ ದೂರು ಅರ್ಜಿಗಳಾದ ಪ್ರಪತ್ರ 1 ಮತ್ತು 2ನ್ನು ಪಡೆದು ಅಫಿದಾವಿತ್ ಮಾಡಿಸಿ ಸಂಬಂಧಪಟ್ಟ ದಾಖಲೆ ಪ್ರತಿಗಳೊಂದಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸಾರ್ವಜನಿಕರು ತಮ್ಮ ಸರಕಾರಿ ಕಾರ್ಯಗಳಲ್ಲಿ ಯಾವುದೇ ತೊಂದರೆಗಳಾದಲ್ಲಿ ಪೋಲಿಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ. ದೂ.ಸಂ.: 0820-2527770ರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.





