ನಾಳೆ ಗೃಹರಕ್ಷಕರ ತರಬೇತಿ ಸಮಾರೋಪ
ಉಡುಪಿ, ಅ.24: ಜಿಲ್ಲಾ ಗೃಹರಕ್ಷಕ ದಳದಲ್ಲಿ 2016-17ನೆ ಸಾಲಿನಲ್ಲಿ ನೂತನವಾಗಿ ನೋಂದಾಯಿಸಲ್ಪಟ್ಟ ಗೃಹರಕ್ಷಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಅ.26ರ ಸಂಜೆ 4:00 ಗಂಟೆಗೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ. ಬಾಲಕೃಷ್ಣ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಡಾ.ಪ್ರಶಾಂತ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





