ಎಲ್ಲಪರೀಕ್ಷಾಕೇಂದ್ರಗಳಲ್ಲಿಸಿಸಿಟಿವಿ
ದ್ವಿತೀಯ ಪಿಯುಸಿ ಪರೀಕ್ಷೆ
ಬೆಂಗಳೂರು, ಅ. 24: ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಿಯುಸಿ ಪರೀಕ್ಷಾ ಮಂಡಳಿ ಮೊದಲ ಹಂತದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ದ್ವೀತಿಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲು ತೀರ್ಮಾನಿಸಿದೆ.
ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸುವ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಸೂಚನೆ ಹೊರಡಿಸಿದ್ದು, 2017ರ ಮಾರ್ಚ್, ಎಪ್ರಿಲ್‌ನಲ್ಲಿ ನಡೆಯಲಿರುವ ಪರೀಕ್ಷೆ ವೇಳೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ಕಡ್ಡಾಯವಾಗಿ ಸಿಸಿಟಿವಿ ಅಡಳವಡಿಸಲು ಸೂಚಿಸಿದೆ.
ರಾಜ್ಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ಅಳವಡಿಸಲೇಬೇಕು. ಇದಕ್ಕೆ ಅಗತ್ಯ ಸಂಪನ್ಮೂಲಗಳನ್ನು ಆಯಾ ಕಾಲೇಜುಗಳೇ ಕ್ರೋಢೀಕರಿಸಿಕೊಳ್ಳು ವಂತೆ ಕಾಲೇಜುಗಳಿಗೆ ಶಿಕ್ಷಣ ಇಲಾಖೆ ನಿರ್ದೇಶಿಸಿದೆ.ರ್ನಾಟಕ ಪರೀಕ್ಷಾ ಪ್ರಾಕಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಕಾರಿಗಳು ವಲಯಮಟ್ಟದ ಕಾಲೇಜು ಆಡಳಿತ ಮಂಡಳಿ ಜೊತೆ ಸಮಾಲೋಚನೆ ನಡೆಸಿದ್ದು, ನಕಲು ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.
ಸಿಸಿಟಿವಿ ಕ್ಯಾಮರಾಗಳನ್ನು ಖಾಸಗಿ ಕಂಪೆನಿಗಳಿಂದ ಖರೀದಿಸಲು ಸೂಚಿಸಿದ್ದು, ಪರೀಕ್ಷಾ ಕೇಂದ್ರ ಒಂದು ಕಿ.ಮೀ. ವ್ಯಾಪ್ತಿಯವರೆಗೂ ಪ್ರತಿಯೊಂದು ಚಟುವಟಿಕೆಗಳು ಇದರಲ್ಲಿ ಸೆರೆಯಾಗುವಂತಿರ ಬೇಕು ಎಂದು ಸೂಚಿಸಲಾಗಿದೆ. ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿವಿಟಿ ಕ್ಯಾಮರಾ ಆಳವಡಿಸಲಾಗುತ್ತಿದೆ. ಳೆದ ಮಾರ್ಚ್-ಎಪ್ರಿಲ್‌ನಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆ ವೇಳೆ ರಸಾಯನ ಶಾಸ, ಭೌತಶಾಸ, ಗಣಿತ, ಜೀವಶಾಸ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ರಾಜ್ಯದಲ್ಲಿ ಭಾರೀ ವಿವಾದವನ್ನೇ ಸೃಷ್ಟಿಸಿತ್ತು. ಈ ಸಂಬಂಧ ಸಿಐಡಿ ತನಿಖೆ ಪ್ರಗತಿಯಲ್ಲಿದೆ. ಈ ಮಧ್ಯೆಯೇ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿ ಅವ ವಿಸ್ತರಣೆ
ಬೆಂಗಳೂರು, ಅ.24: 2017ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿ ಪರೀಕ್ಷಾ ಶುಲ್ಕ ಸಂದಾಯ ಮಾಡಲು ನ.5ರವರೆಗೆ ಅವ ವಿಸ್ತರಿಸಲಾಗಿದೆ.
ಪರೀಕ್ಷಾ ಶುಲ್ಕ ಮತ್ತು ಹಿಂದಿನ ದಂಡ ಶುಲ್ಕ 500ರೂ.ರ ಜೊತೆಗೆ ಹೆಚ್ಚುವರಿ ದಂಡ ಶುಲ್ಕ 300 ರೂ.(ಒಟ್ಟು ದಂಡ ಶುಲ್ಕ 800 ರೂ.) ಪಡೆದುಕೊಳ್ಳುವುದು. ಇನ್ನು ಮುಂದೆ ಯಾವುದೇ ಕಾರಣಕ್ಕೂ ಪರೀಕ್ಷಾ ಶುಲ್ಕ ಸಂದಾಯದ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ.ಶಿಖಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







