Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಕ್ಕಿಕಾಳಿನಲ್ಲೂ ದಾಖಲೆ ಸೃಷ್ಟಿಸುವ...

ಅಕ್ಕಿಕಾಳಿನಲ್ಲೂ ದಾಖಲೆ ಸೃಷ್ಟಿಸುವ ವಿಶೇಷ ಕಲಾವಿದರಿವರು!

ನ.12 ರಂದು ಮೈಕ್ರೋ ಆರ್ಟ್ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ25 Oct 2016 5:37 PM IST
share
ಅಕ್ಕಿಕಾಳಿನಲ್ಲೂ ದಾಖಲೆ ಸೃಷ್ಟಿಸುವ ವಿಶೇಷ ಕಲಾವಿದರಿವರು!

ಮಂಗಳೂರು, ಅ.25: ಅಕ್ಕಿ ಕಾಳಿನಲ್ಲಿ ಬರೆಯುವ ಪುರಾತನ ಕಲೆಯನ್ನು ಸಿದ್ದಿಸಿಕೊಂಡಿರುವ ಅಕ್ಕಿಕಾಳು ವೆಂಕಟೇಶ್ ಅವರು ನ. 12 ರಂದು ನಗರದ ಫೋರಂ ಫಿಝಾ ಮಾಲ್‌ನಲ್ಲಿ ಸುಮಾರು 10,000 ಜನರ ಸಮಕ್ಷಮದಲ್ಲಿ ಅಕ್ಕಿ ಕಾಳಿನಲ್ಲಿ ಬರೆಯುವ ಕಾರ್ಯಾಗಾರ ನಡೆಸುವ ಮೂಲಕ ತಮ್ಮದೇ ಹಳೆಯ ದಾಖಲೆಯನ್ನು ಮುರಿಯಲು ಮುಂದಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ವೆಂಕಟೇಶ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಗಿನ್ನೆಸ್ ಸಂಸ್ಥೆಗಳ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಈ ಕಾರ್ಯಕ್ರಮ ದಾಖಲಾಗಲಿದೆ ಎಂದು ಹೇಳಿದರು.

ಸುಮಾರು 2200 ವರ್ಷಗಳ ಇತಿಹಾಸ ಹೊಂದಿರುವ ಈ ಕಲಾ ಬರವಣಿಗೆಯನ್ನು ಹಿಂದಿನ ಕಾಲದಲ್ಲಿ ರಹಸ್ಯ ಸಂದೇಶ ಕಳುಹಿಸಲು ಬಳಸಲಾಗುತ್ತಿತ್ತು. ಪುರಾತನ ಮೈಕ್ರೋ ಆರ್ಟ್‌ಗೆ ಪುನಶ್ಚೇತನ ನೀಡುವುದು ಹಾಗೂ ಅದರ ಶೈಕ್ಷಣಿಕ ವೌಲ್ಯಗಳನ್ನು ತಿಳಿಸುವುದು ಕಾರ್ಯಾಗಾರದ ಮುಖ್ಯ ಉದ್ದೇಶ. ಮಕ್ಕಳ ದಿನಾಚರಣೆ ಸಂದರ್ಭ ಸಂಘಟಿಸಲಾಗುವ ಈ ಕಾರ್ಯಕ್ರಮದ ಪ್ರಯೋಜನವನ್ನು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಬೇಕು ಎನ್ನುವುದು ನಮ್ಮ ಇಚ್ಚೆ ಎಂದವರು ನುಡಿದರು.

ಈಗಾಗಲೇ ಈ ರಿತಿ ವಿಶ್ವ ದಾಖಲೆ ನಿರ್ಮಿಸಿರುವ ವಿಶ್ವ ವಿಖ್ಯಾತಿಯ ಅಕ್ಕಿಕಾಳು ವೆಂಕಟೇಶ್ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಬೃಹತ್ ಎಲ್‌ಇಡಿ ಟಿವಿ ಪರದೆಯ ಮೂಲಕ ಪ್ರಾತ್ಯಕ್ಷಿಕೆ ನೀಡಿ ಈ ಮೈಕ್ರೋ ಆರ್ಟ್‌ನ ಕೌಶಲ ತಿಳಿಸಿ ಕೊಡಲಾಗುವುದು. ನಾಲ್ಕು ವರ್ಷ ಮೇಲ್ಪಟ್ಟ ಯಾರು ಬೇಕಾದರೂ ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಯಾವುದೇ ಕಲಾ ನೈಪುಣ್ಯತೆ ವಶ್ಯಕತೆ ಇರುವುದಿಲ್ಲ. ಭಾಗವಹಿಸಿದ ಎಲ್ಲಾ ಪ್ರತಿನಿಧಿಗಳಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆಯ ಅಧಿಕೃತ ಪ್ರಮಾಣಪತ್ರ ನೀಡಲಾಗುವುದು ಎಂದು ಸಂಘಟಕಿ ದೀಪ್ತಿ ತಿಳಿಸಿದರು.

ಕಾರ್ಯಕ್ರಮದ ರಾಯಭಾರಿ ಚಲನಚಿತ್ರ ನಟ ಅವಿನಾಶ್ ಶೆಟ್ಟಿ, ತುಷಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X