ಪ್ರಾಂಶುಪಾಲರಿಗೆ ಹಲ್ಲೆಗೈದ ಆರೋಪಿ ವಿದ್ಯಾರ್ಥಿಗೆ ನ್ಯಾಯಾಂಗ ಬಂಧನ

ಮಂಗಳೂರು, ಅ.25: ನಗರದ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿರುವ ಅದೇ ಕಾಲೇಜಿನ ವಿದ್ಯಾರ್ಥಿ ಮುಹಮ್ಮದ್ ಶಾಹ್‌ನವಾಝ್ (20) ಗೆ ನ್ಯಾಯಾಲಯವು 14ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ತಲೆಮರೆಸಿಕೊಂಡಿದ್ದ ಆರೋಪಿ ಕೇರಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಬಂದರು ಠಾಣಾ ಇನ್ಸ್‌ಪೆಕ್ಟರ್ ಶಾಂತರಾಂ ಮತ್ತು ಸಿಬ್ಬಂದಿ ಸೋಮವಾರ ಪಂಪ್‌ವೆಲ್ ಬಳಿಯಿಂದ ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
Next Story





