Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬ್ರೆಝಿಲ್‌ನ ಮಾಜಿ ಶ್ರೇಷ್ಠ ಫುಟ್ಬಾಲ್...

ಬ್ರೆಝಿಲ್‌ನ ಮಾಜಿ ಶ್ರೇಷ್ಠ ಫುಟ್ಬಾಲ್ ನಾಯಕ ಆಲ್ಬರ್ಟೊ ನಿಧನ

ವಾರ್ತಾಭಾರತಿವಾರ್ತಾಭಾರತಿ26 Oct 2016 10:44 AM IST
share
ಬ್ರೆಝಿಲ್‌ನ ಮಾಜಿ ಶ್ರೇಷ್ಠ ಫುಟ್ಬಾಲ್ ನಾಯಕ ಆಲ್ಬರ್ಟೊ ನಿಧನ

ರಿಯೋ ಡಿ ಜನೈರೊ, ಅ.26: ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರರ ಪೈಕಿ ಓರ್ವರಾಗಿರುವ ಬ್ರೆಝಿಲ್‌ನ ಮಾಜಿ ನಾಯಕ ಕಾರ್ಲೊಸ್ ಆಲ್ಬರ್ಟೊ(72 ವರ್ಷ) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

1970ರ ವಿಶ್ವಕಪ್ ಟ್ರೋಫಿ ವಿಜೇತ ಬ್ರೆಝಿಲ್ ತಂಡದ ನಾಯಕರಾಗಿದ್ದ ಆಲ್ಬರ್ಟೊ 1970ರ ವಿಶ್ವಕಪ್ ಫೈನಲ್‌ನಲ್ಲಿ ಇಟಲಿ ತಂಡವನ್ನು 4-1 ಗೋಲುಗಳ ಅಂತರದಿಂದ ಮಣಿಸುವಲ್ಲಿ ತಂಡಕ್ಕೆ ಮಾರ್ಗದರ್ಶನ ನೀಡಿದ್ದರು. ಆಲ್ಬರ್ಟೊಗೆ ಪೀಲೆ, ಟಾಸ್ತಾವೊ, ಜೈರ್ಝಿನೊಹೊ ಸಾಥ್ ನೀಡಿದ್ದರು.

‘‘ನನ್ನ ಓರ್ವ ಆತ್ಮೀಯ ಗೆಳೆಯ ಹಾಗೂ ಸಹೋದರ ಆಲ್ಬರ್ಟೊ ನಿಧನದಿಂದ ನನಗೆ ತುಂಬಾ ಬೇಸರವಾಗಿದೆ. ಓ ದೇವರೆ, ನಮ್ಮ ನಾಯಕನನ್ನು ಶಾಂತಿಯ ಸ್ವರ್ಗದಲ್ಲಿ ಚೆನ್ನಾಗಿ ಕಾಪಾಡು’’ ಎಂದು ಬ್ರೆಝಿಲ್ ಫುಟ್ಬಾಲ್ ದಂತಕತೆ ಪೀಲೆ ಟ್ವಿಟ್ ಮಾಡಿದ್ದಾರೆ.

‘‘ಆಲ್ಬರ್ಟೊ ಮೈದಾನದ ಹೊರಗೆ ಹಾಗೂ ಒಳಗೆ ಮಾದರಿ ನಾಯಕನಾಗಿದ್ದರು. ನನ್ನ ಉತ್ತಮ ಗೆಳೆಯನಾಗಿದ್ದರು. ಅವರು ನನ್ನನ್ನು ಯಾವಾಗಲೂ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು’’ ಎಂದು 2002ರ ವಿಶ್ವಕಪ್ ವಿಜೇತ ತಂಡದ ಸದಸ್ಯ, ಬ್ರೆಝಿಲ್‌ನ ಮಾಜಿ ಸ್ಟಾರ್ ಆಟಗಾರ ರೊನಾಲ್ಡಿನೊ ಹೇಳಿದ್ದಾರೆ.

1944ರಲ್ಲಿ ಕ್ಯಾಪಿಟಾವೊದಲ್ಲಿ ಜನಿಸಿರುವ ಆಲ್ಬರ್ಟೊ 1996 ರಿಂದ 1974ರ ತನಕ ಪೀಲೆ ಅವರೊಂದಿಗೆ ಸ್ಯಾಂಟೊಸ್ ತಂಡದಲ್ಲಿ ಆಡಿದ್ದರು. 1977 ರಿಂದ 1980ರ ತನಕ ನ್ಯೂಯಾರ್ಕ್ ಕಾಸ್ಮೊಸ್ ತಂಡವನ್ನು ಪ್ರತಿನಿಧಿಸಿದ್ದರು.

 ಬ್ರೆಝಿಲ್‌ನ ಪರ 50ಕ್ಕೂ ಅಧಿಕ ಪಂದ್ಯಗಳನ್ನು ಆಡಿರುವ ಆಲ್ಬರ್ಟೊ ಗಾಯದ ಸಮಸ್ಯೆಯಿಂದಾಗಿ 1974ರ ವಿಶ್ವಕಪ್‌ನಿಂದ ವಂಚಿತರಾಗಿದ್ದರು. 2004ರಲ್ಲಿ ಫಿಫಾ ಬಿಡುಗಡೆ ಮಾಡಿರುವ ಶ್ರೇಷ್ಠ 100 ಆಟಗಾರರ ಪಟ್ಟಿಯಲ್ಲಿ ಆಲ್ಬರ್ಟೊ ಸ್ಥಾನ ಪಡೆದಿದ್ದರು. 1982ರಲ್ಲಿ ಫುಟ್ಬಾಲ್‌ನಿಂದ ನಿವೃತ್ತಿಯಾಗಿದ್ದ ಆಲ್ಬರ್ಟೊ ರಿಯೋದ ಫ್ಲೆಮೆಂಗೊ, ಅಮೆರಿಕ, ಕೊಲಂಬಿಯಾ, ಮೆಕ್ಸಿಕೊ, ಒಮನ್ ಹಾಗೂ ಅಝರ್‌ಬೈಜಾನ್ ತಂಡದಲ್ಲಿ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಸ್ಪೋರ್ಟ್ ಟಿವಿಯಲ್ಲಿ ಟೆಲಿವಿಜನ್ ಪಂಡಿತ್ ಆಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X