ನ.10ರಂದು ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರಕಾರ ನಿರ್ಧಾರ

ಬೆಂಗಳೂರು , ಅ.26: ಬಿಜೆಪಿಯ ವಿರೋಧದ ನಡುವೆಯೂ ನ.10ರಂದು ಹಜ್ರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಟಿಪ್ಪು ಜಯಂತಿ ಆಚರಣೆಗೆ ಇಂದು ಅಧಿಕೃತ ಆದೇಶ ಹೊರಡಿಸಿದ್ದಾರೆ.ನ.10ರಂದು ಬೆಳಗ್ಗೆ 11 ಗಂಟೆಗೆ ವಿಧಾನ ಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಟಿಪ್ಪು ಜಯಂತಿ ಆಚರಣೆ ನಡೆಯಲಿದೆ. ಅ.28ರಂದು ಟಿಪ್ಪು ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ನೇತೃತ್ವದಲ್ಲಿ ನಿಗದಿಯಾಗಿದೆ ಎಂದು ತಿಳಿದು ಬಂದಿದೆ.
Next Story





