Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯಲ್ಲೂ...

ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಪ್ರತಿಭೆ ಅಮೂರ್ತವಾಗಿ ಇರುತ್ತದೆ: ಬಾಲನ್ ನಂಬಿಯಾರ್

ಬೀಡ್ಸ್‌ನಲ್ಲಿ ಬೇಸಿಕ್ ಡಿಸೈನ್ ಕಾರ್ಯಾಗಾರ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ26 Oct 2016 6:35 PM IST
share
ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಪ್ರತಿಭೆ ಅಮೂರ್ತವಾಗಿ ಇರುತ್ತದೆ: ಬಾಲನ್ ನಂಬಿಯಾರ್

ಮಂಗಳೂರು,ಅ.26: ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಪ್ರತಿಭೆ ಅಮೂರ್ತವಾಗಿ ಇರುತ್ತದೆ. ತನಗೆ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡಾಗ ಆತ ಒಬ್ಬ ಕಲಾವಿದ, ಸಂಗೀತಕಾರ, ನೃತ್ಯ ಪಟು, ವಿನ್ಯಾಸಕಾರ ಆಗಬಹುದು ಎಂದು ಖ್ಯಾತ ಕಲಾವಿದ, ದಿಲ್ಲಿಯ ಲಲಿತ ಕಲಾ ಅಕಾಡಮಿಯ ಮಾಜಿ ಅಧ್ಯಕ್ಷ ಬಾಲನ್ ನಂಬಿಯಾರ್ ತಿಳಿಸಿದ್ದಾರೆ.

ಇನೋಳಿ ಬಿಐಟಿ ಆವರಣದಲ್ಲಿರುವ ಬೀಡ್ಸ್ (ಬ್ಯಾರೀಸ್ ಎನ್ವಿರೋ ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್)ನಲ್ಲಿ ಸೋಮವಾರದಿಂದ ಬುಧವಾರದವರೆಗೆ ನಡೆದ ಬೇಸಿಕ್ ಡಿಸೈನ್ ಕಾರ್ಯಾಗಾರದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಬಾಲ್ಯದಲ್ಲಿ ಮನೆ, ಕುಟುಂಬದ ವಾತಾವರಣ, ಶಾಲೆ, ಶಿಕ್ಷಕರು, ಸವಲತ್ತುಗಳು ಹಾಗೂ ದೊರೆತ ಅವಕಾಶಗಳು ಪ್ರತಿಭೆಯ ಸೃಜನಶೀಲ ಅಭಿವ್ಯಕ್ತಿಗೆ ಸಹಾಯವಾಗುತ್ತದೆ. ವ್ಯಕ್ತಿ ಪ್ರತಿಕೂಲ ವಾತಾವರಣದಲ್ಲಿ ಬೆಳೆದರೆ ಆತನ ಪ್ರತಿಭೆಯ ಪ್ರದರ್ಶನಕ್ಕೆ ಅಡ್ಡಿಯಾಗುವ ಸಾಧ್ಯತೆಯೂ ಇದೆ ಎಂದು ಕಲಾವಿದ ಬಾಲನ್ ನಾಯರ್ ತಿಳಿಸಿದರು.

ಒಂದು ಉತ್ತಮ ಕಲಾಕೃತಿ ಮೂಡಿಬರಬೇಕಾದರೆ ಕಲಾವಿದನೊಬ್ಬ ಪರಿಶ್ರಮಪಡಬೇಕು. ಅದರ ನೀಲನಕಾಶೆ ತಯಾರಿಸಲು ಹೆಚ್ಚು ಪರಿಶ್ರಮ ಪಟ್ಟಷ್ಟು ಉತ್ತಮ ಕೃತಿ ಮೂಡಿ ಬರಬಹುದು. ಕಲಾವಿದನೊಬ್ಬ ತನಗೆ ದೊರೆತ ಕನಿಷ್ಠ ಸೌಲಭ್ಯಗಳಲ್ಲಿಯೂ ತನ್ನ ಪ್ರತಿಭೆ, ಕೌಶಲ್ಯ ಮತ್ತು ಅನುಭವದಿಂದ ಉತ್ತಮ ಕೃತಿ ರಚಿಸಲು ಸಾಧ್ಯ. ಬೀಡ್ಸ್‌ನ ಕಾರ್ಯಾಗಾರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಉತ್ಸಾಹ ಕಂಡು ಸಂತಸವಾಗಿದೆ ಎಂದು ಕಲಾವಿದ ಬಾಲನ್ ನಾಯರ್ ತಿಳಿಸಿದರು.

ಬೀಡ್ಸ್‌ನ ಪ್ರಾಂಶುಪಾಲ ಭವೇಶ್ ಮೆಹ್ತಾ, ಕಲಾವಿದೆ ಅವೆಲಿನಾ, ಡಾ.ಅಖ್ತರ್ ಹುಸೈನ್ ಹಾಗೂ ಬೀಡ್ಸ್‌ನ ಉಪನ್ಯಾಸಕ ಕರೀಂ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಯಾರಿಸಿದ ಮಾದರಿಗಳನ್ನು ಪ್ರದರ್ಶಿಸಿದರು. ಕೊನೆಯಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X