Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಿಂಗ ಸಮಾನತೆಯಲ್ಲಿ ಭಾರತಕ್ಕೆ 87ನೆ...

ಲಿಂಗ ಸಮಾನತೆಯಲ್ಲಿ ಭಾರತಕ್ಕೆ 87ನೆ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ26 Oct 2016 6:36 PM IST
share
ಲಿಂಗ ಸಮಾನತೆಯಲ್ಲಿ ಭಾರತಕ್ಕೆ 87ನೆ ಸ್ಥಾನ

ಜಿನಿವಾ/ಹೊಸದಿಲ್ಲಿ, ಅ.26: ಲಿಂಗ ಸಮಾನತೆಯ ವಿಚಾರದಲ್ಲಿ ಭಾರತವು ಕಳೆದ ವರ್ಷಕ್ಕಿಂತ 21 ಸ್ಥಾನ ಮೇಲೆ ನೆಗೆದಿದೆ. ಶಿಕ್ಷಣ ರಂಗದಲ್ಲಾಗಿರುವ ಪ್ರಗತಿ ಇದಕ್ಕೆ ಕಾರಣವಾಗಿದೆ. ಆದಾಗ್ಯೂ, ಜಾಗತಿಕವಾಗಿ ಭಾರತ 87ನೆ ಸ್ಥಾನದಲ್ಲಿದೆ. ಐಸ್‌ಲ್ಯಾಂಡ್ ಲಿಂಗಸಮಾನತೆಯಲ್ಲಿ ಮೊದಲ ಸ್ಥಾನದಲ್ಲಿದೆ.

ಜಿನಿವಾ ಮೂಲದ ಜಾಗತಿಕ ಆರ್ಥಿಕ ವೇದಿಕೆ ರಚಿಸಿದ್ದ ವಾರ್ಷಿಕ ಜಾಗತಿಕ ಲಿಂಗ ಅಂತರ ಸೂಚಿಯಲ್ಲಿ ಭಾರತ 108ನೆ ಸ್ಥಾನದಲ್ಲಿತ್ತು. ಅದು ಒಂದು ವರ್ಷದಲ್ಲಿ ಈ ಅಂತರವನ್ನು ಶೇ.2ರಷ್ಟು ತಗ್ಗಿಸಿದ್ದು, ಆರ್ಥಿಕತೆ, ಶಿಕ್ಷಣ, ಆರೋಗ್ಯ ಹಾಗೂ ರಾಜಕೀಯ ಪ್ರಾತಿನಿಧ್ಯಗಳೆಂಬ ಡಬ್ಲುಇಎಫ್ ಅಳಗೆಯ 4 ಸ್ತಂಭಗಳಲ್ಲಿ ಈ ಅಂತರವು ಶೇ.68ರಲ್ಲಿ ನಿಂತಿದೆ.

ಈ ಮಹತ್ತ್ವದ ಸುಧಾರಣೆಗೆ ಶಿಕ್ಷಣ ಕಾರಣವಾಗಿದ್ದು, ಭಾರತವು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದಲ್ಲಿ ಈ ಅಂತರವನ್ನು ಸಂಪೂರ್ಣವಾಗಿ ಮುಚ್ಚಲು ಸಮರ್ಥವಾಗಿದೆ. ಆರ್ಥಿಕ ವಲಯದಲ್ಲಿ ಹೆಚ್ಚಿನ ಕೆಲಸ ಮಾಡಲು ಬಾಕಿಯಿದೆ. 144 ದೇಶಗಳೊಳಗೆ ಭಾರತವು ಈ ಸ್ತಂಭದಲ್ಲಿ 136ನೆ ಸ್ಥಾನದಲ್ಲಿದೆಯೆಂದು ಡಬ್ಲುಇಎಫ್ ಹೇಳಿದೆ.

ಶೈಕ್ಷಣಿಕ ಸಾಧನೆಯಲ್ಲಿ ಭಾರತ 113ನೆ ಸ್ಥಾನದಲ್ಲಿದೆ.ಆರೋಗ್ಯ ಹಾಗೂ ಬದುಕುವಿಕೆಯಲ್ಲಿ ಅದು 142 ರಷ್ಟು ಕೆಳಗಿನ ಸ್ಥಾನದಲ್ಲಿದ್ದರೆ, ರಾಜಕೀಯ ಸಬಲೀಕರಣದಲ್ಲಿ ಅಗ್ರ 10 ರಾಷ್ಟ್ರಗಳಲ್ಲಿ ಸ್ಥಾನ ಪಡೆದಿದೆ.

ಡಬ್ಲುಇಎಫ್‌ನ ಜಾಗತಿಕ ಲಿಂಗ ಅಂತರ ವರದಿ-2016ರನ್ವಯ ಜಾಗತಿಕ ಕೆಲಸದ ಸ್ಥಳದಲ್ಲಿ ಲಿಂಗ ತಾರತಮ್ಯ ಮತ್ತಷ್ಟು ಕುಸಿದಿದೆ. ಲಿಂಗಗಳ ನಡುವೆ ಆರ್ಥಿಕ ಸಮಾನತೆ 170 ವರ್ಷಗಳ ಬಳಿಕ ಪ್ರಗತಿಯಲ್ಲಿ ನಾಟಕೀಯ ಕುಸಿತ ಕಂಡಿದೆ.

ಜಾಗತಿಕವಾಗಿ ಲಿಂಗ ಸಮಾನತೆಯಲ್ಲಿ ನಾಲ್ಕು ಸ್ಕಾಂಡಿನೇವಿಯನ್ ರಾಷ್ಟ್ರಗಳಾದ ಐಸ್‌ಲ್ಯಾಂಡ್, ಫಿನ್ಲೆಂಡ್, ನಾರ್ವೆ ಹಾಗೂ ಸ್ವೀಡನ್ ಅಗ್ರ ಸ್ಥಾನಗಳಲ್ಲಿ ಮುಂದುವರಿದಿವೆ. ರ್ವಾಂಡಾ 5, ಐರ್ಲೆಂಡ್ 6, ಫಿಲಿಪ್ಪೀನ್ಸ್ 7, ಸ್ಲೊವೇನಿಯ 8, ನ್ಯೂಝಿಲೆಂಡ್ 9 ಹಾಗೂ ನಿಕರಾಗುವ 10ನೆ ಸ್ಥಾನಗಳಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X