Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ.5 ರಿಂದ ಲಾರಿ ಮಾಲಕರ ಅನಿರ್ದಿಷ್ಟಾವಧಿ...

ನ.5 ರಿಂದ ಲಾರಿ ಮಾಲಕರ ಅನಿರ್ದಿಷ್ಟಾವಧಿ ಮುಷ್ಕರ

ಬಾಕಿ ಸಾಗಾಣಿಕಾ ವೆಚ್ಚದ ಅನುದಾನ ಬಿಡುಗಡೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 Oct 2016 7:42 PM IST
share
ನ.5 ರಿಂದ ಲಾರಿ ಮಾಲಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು, ಅ.26: ಆಹಾರ ನಿಗಮದ ಗೋದಾಮುಗಳಿಂದ ಅನ್ನಭಾಗ್ಯ ಯೋಜನೆ, ಬಿಸಿಯೂಟ ಯೋಜನೆ, ಹಾಸ್ಟೆಲ್‌ಗಳು ಸೇರಿದಂತೆ ರಾಜ್ಯದ ಹಲವಾರು ಯೋಜನೆಗಳಿಗೆ ಆಹಾರ ಸಾಗಣೆ ಮಾಡುವ ವಾಹನಗಳಿಗೆ ಬಾಕಿ ಉಳಿಸಿಕೊಂಡಿರುವ ಸಾಗಣೆ ವೆಚ್ಚ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಲಾರಿ ಮಾಲಕರ ಹಾಗೂ ಏಜೆಂಟರ ಅಸೋಸಿಯೇಷನ್ ನ.5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ, ಕೇಂದ್ರದ ಆಹಾರ ನಿಗಮದಿಂದ ಸುಮಾರು ಎಂಟು ಸಾವಿರಕ್ಕೂ ಅಧಿಕ ಲಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಅಕ್ಕಿ, ರಾಗಿ, ಜೋಳ, ಸಕ್ಕರೆ ಹಾಗೂ ಇನ್ನಿತರೆ ವಸ್ತುಗಳನ್ನು ಸಾಗಿಸುತ್ತವೆ. ಅದಕ್ಕಾಗಿ ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಹಣವನ್ನು ನೀಡುತ್ತಿದೆಯಾದರೂ ರಾಜ್ಯ ಸರಕಾರ ಕಳೆದ 11 ತಿಂಗಳಿನಿಂದ ನಮಗೆ ಸುಮಾರು 180 ಕೋಟಿ ಹಣ ನೀಡಿಲ್ಲ ಎಂದು ಕಿಡಿಕಾರಿದರು.

ಕೇಂದ್ರದಿಂದ ಪ್ರತಿ ಟನ್‌ಗೆ ಟ್ರಾನ್ಸ್‌ಪೋರ್ಟ್ ಶುಲ್ಕವನ್ನಾಗಿ ಮಾತ್ರ 75 ರೂ.ಗಳನ್ನು ರಾಜ್ಯ ಸರಕಾರಕ್ಕೆ ನೀಡುತ್ತಿದೆ. ಆದರೆ, ರಾಜ್ಯ ಸರಕಾರ ಅದರಲ್ಲಿಯೂ ಕಡಿತಗೊಳಿಸಿ ಕೇವಲ 35 ರೂ.ಗಳನ್ನು ಮಾತ್ರ ನೀಡುತ್ತಿದೆ. ಆದರೆ, ಪ್ರತ್ಯೇಕವಾಗಿ ಯಾವುದೇ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಶುಲ್ಕ, ಟೋಲ್ ಶುಲ್ಕ ನೀಡದೇ ಇರುವುದರಿಂದ ಲಾರಿ ಮಾಲಕರು ಕೈಯಿಂದ ಭರಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಹಾರ ದಾಸ್ತಾನು ಕೇಂದ್ರದಿಂದ 50 ಕಿ.ಮೀ. ದೂರಕ್ಕೆ ಮಾತ್ರ ಸರಬರಾಜು ಮಾಡಬೇಕು ಎಂದು ಟೆಂಡರ್‌ನಲ್ಲಿ ಸ್ಪಷ್ಟವಾಗಿ ನಮೂದಿಸಿದೆ. ಆದರೂ, ಅನಗತ್ಯವಾಗಿ300-400 ಕಿ.ಮೀ ನಷ್ಟು ದೂರದ ಜಿಲ್ಲೆಗಳಿಗೆ ನಾವೇ ಕೊಡಬೇಕು ಎಂದು ಆದೇಶ ನೀಡುತ್ತಿದ್ದಾರೆ. ಇದಕ್ಕೆ ಹೆಚ್ಚಿನ ವೆಚ್ಚವನ್ನು ನೀಡದೇ ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು. 2012-13 ರಲ್ಲಿ ಹೈ ಕೋರ್ಟ್‌ನಿಂದ ಯಾವುದೇ ಬಾಕಿಯಿಲ್ಲದೆ ಎಲ್ಲ ಸಾಗಣೆ ವೆಚ್ಚವನ್ನು ಕಡ್ಡಾಯವಾಗಿ ಬಿಡುಗಡೆ ಮಾಡಬೇಕು ಎಂದು ಆದೇಶ ನೀಡಿದ್ದರೂ, ಸರಕಾರ ಇದನ್ನು ಕಡೆಗಣಿಸಿದೆ ಎಂದು ಹೇಳಿದರು.

ಸಾಗಾಣಿಕೆ ಗುತ್ತಿಗೆಯ ಅವಧಿಯು ಮಾ.1, 2017ಕ್ಕೆ ಕೊನೆಗೊಳ್ಳಲಿದ್ದು, ಶೇ.60 ರಷ್ಟು ಎಲ್ಲ ಶುಲ್ಕಗಳನ್ನು ಹೆಚ್ಚಿಸಿ ಮಾ.2 ರಿಂದಲೇ ಜಾರಿಗೆ ಬರುವಂತೆ ಆದೇಶ ನೀಡಬೇಕು. ಟೆಂಡರ್ ಅವಧಿ ಮುಗಿದ ನಂತರ ಅದನ್ನೇ ಮುಂದುವರಿಸುವುದು ಸರಿಯಾದ ಕ್ರಮವಲ್ಲ. ಹೀಗಾಗಿ ಮರು ಟೆಂಡರ್ ಕರೆಯಬೇಕು ಎಂದು ಅವರು ಒತ್ತಾಯಿಸಿದರು. ಬಾಕಿ ಉಳಿಸಿಕೊಂಡಿರುವ 180 ಕೋಟಿ ರೂ. ಸಾಗಾಣಿಕೆ ವೆಚ್ಚವನ್ನು ಬಿಡುಗಡೆ ಮಾಡುವ ಕುರಿತು ಅ.4 ರೊಳಗೆ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದರೆ, ಅ.4 ರ ಮಧ್ಯರಾತ್ರಿಯಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ 8 ಸಾವಿರ ಲಾರಿಗಳು, 40 ಸಾವಿರ ಚಾಲಕರು ಮತ್ತು ಕ್ಲೀನರ್‌ಗಳು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ. ಇದರಿಂದಾಗಿ ಸರಕಾರ ಹಲವು ಯೋಜನೆಗಳಿಗೆ ಸರಬರಾಜಾಗುವ ವಸ್ತುಗಳು ಸ್ಥಗಿತಗೊಳ್ಳಲಿವೆ ಎಂದು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X