‘ಸರಕಾರದ ನಿರ್ಧಾರಕ್ಕೆ ಜಿಲ್ಲಾ ಕಾಂಗ್ರೆಸ್ ಬದ್ಧ: ಟಿ.ಪಿ. ರಮೇಶ್
ಟಿಪ್ಪು ಜಯಂತಿ

ಮಡಿಕೆೇರಿ, ಅ.26: ಟಿಪ್ಪು ಜಯಂತಿ ಆಚರಣೆ ಕುರಿತು ರಾಜ್ಯ ಕಾಂಗ್ರೆಸ್ ಸರಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಬದ್ಧರಾಗಿದ್ದು, ಜಿಲ್ಲೆಯಲ್ಲಿ ಶಾಂತಿ ಕದಡದಂತೆ ಜಯಂತಿಯನ್ನು ಆಚರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಪ್ರಭಾರ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ತಿಳಿಸಿದ್ದಾರೆ.
ಈ ಕುರಿತು ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ತೀರ್ಮಾನಿ ಸಲಾಗಿದ್ದು, ಜಿಲ್ಲಾಡಳಿತ ಕಾರ್ಯಕ್ರಮ ರೂಪಿಸುವಾಗ ಕಳೆದ ವರ್ಷ ನಡೆದ ಕಹಿ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕೆಂದು ಜಿಲ್ಲಾಡಳಿ ತವನ್ನು ಒತ್ತಾಯಿಸಲಾಗುತ್ತಿದೆ ಎಂದರು. ಪರ ಮತ್ತು ವಿರೋಧ ಅಭಿಪ್ರಾಯಗಳು ಪ್ರಜಾತಂತ್ರ ವ್ಯವಸ್ಥೆಯ ಅಡಿಗಲ್ಲಾಗಿದ್ದು, ಅದನ್ನು ಶಾಂತ ಚಿತ್ತತೆಯಿಂದ ಎಲ್ಲರೂ ಸೇರಿ ಅನುಸರಿಸಿದರೆ ಜಿಲ್ಲೆಯಲ್ಲಿ ಯಾವುದೇ ಕಹಿ ಘಟನೆಗಳು ನಡೆಯಲು ಸಾಧ್ಯವಿಲ್ಲ. ಸಂಘರ್ಷದಿಂದ ಉತ್ತಮ ಫಲಿತಾಂಶ ನಿರೀಕ್ಷಿಸುವುದು ತಪ್ಪೆಂದು ಅಭಿಪ್ರಾಯಪಟ್ಟ ಟಿ.ಪಿ. ರಮೇಶ್, ರಾಜಕೀಯ ಕಾರಣಕ್ಕಾಗಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ಜನರ ಬದುಕಿಗೆ ಸಂಚಕಾರ ಉಂಟು ಮಾಡುವ ಯಾವುದೇ ರಾಜಕೀಯ ಪಕ್ಷಗಳಿಗೆ ಅಥವಾ ಸಂಘಟನೆಗಳಿಗೆ ಮೆರವಣಿಗೆ ನಡೆಸಲು ಅವಕಾಶ ನೀಡಬಾರದೆಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಲಿದೆ ಎಂದರು.





