ಪ್ರಚೋದನಕಾರಿ ಭಾಷಣ: ಹಿಂದೂ ಐಕ್ಯವೇದಿ ರಾಜ್ಯಾಧ್ಯಕ್ಷೆ ಶಶಿಕಲಾ ವಿರುದ್ಧ ಪ್ರಕರಣ
ಕಾಸರಗೋಡು, ಅ.27: ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಪಟ್ಟಂತೆ ಸಲ್ಲಿಕೆಯಾದ ದೂರಿನಂತೆ ಹಿಂದೂ ಅಕ್ಯವೇದಿ ರಾಜ್ಯಾಧ್ಯಕ್ಷೆ ಶಶಿಕಲಾ ವಿರುದ್ಧ ಹೊಸದುರ್ಗ ಪೊಲೀಸರು ಜಾಮೀನು ರಹಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಶುಕೂರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ.
ಫೇಸ್‌ಬುಕ್, ಯುಟ್ಯೂಬ್, ವಾಟ್ಸ್‌ಆಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಲ್ಪಸಂಖ್ಯಾತರ ಬಗ್ಗೆ ಪ್ರಚೋದನಕಾರಿ ಭಾಷಣಗಳನ್ನು ಪ್ರಸಾರ ಮಾಡಲಾಗಿತ್ತು. ಕಾಂಗ್ರೆಸ್, ಸಿಪಿಎಂ, ಮುಸ್ಲಿಂ ಲೀಗ್ ಪಕ್ಷದ ವಿರುದ್ಧವೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಕೇಸು ದಾಖಲಿಸಲಾಗಿದೆ.
ಹೊಸದುರ್ಗ ಠಾಣಾ ಸರ್ಕಲ್ ಇನ್‌ಸ್ಪೆಕ್ಟರ್ ಸಿ.ಕೆ.ಸುನೀಲ್ ಕುಮಾರ್ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Next Story





