ಸೌಹಾರ್ದಕ್ಕಾಗಿ ಬಿಜೆಪಿಯನ್ನುದೂರವಿಡಿ: ಪರಮೇಶ್ವರ್

ಬೆಂಗಳೂರು, ಅ.27: ರಾಜ್ಯದಲ್ಲಿ ಎಲ್ಲ ಧರ್ಮ, ಜಾತಿಯ ಜನತೆ ಸೌಹಾರ್ದತೆ, ಸಾಮರಸ್ಯದಿಂದ ಜೀವನ ಸಾಗಿಸಬೇ ಕಾದರೆ ಬಿಜೆಪಿಯನ್ನು ಅಕಾರದಿಂದ ದೂರವಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಜನತೆಯಲ್ಲಿ ಮನವಿ ಮಾಡಿದ್ದಾರೆ.
ನಗರದ ಆರಮನೆ ಮೈದಾನದಲ್ಲಿ ಆಯೋಜಿಸಿದ್ದ ಸುರಾಜ್ಯ ಸಮಾವೇಶದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾ ಡಿದ ಅವರು, ಬಿಜೆಪಿ ಜನತೆಯ ಮೂಲಭೂತ ಅವಶ್ಯಕತೆ ಯನ್ನು ಪೂರೈಸಿಕೊಳ್ಳುವುದಕ್ಕಿಂತ, ಧರ್ಮ ಹಾಗೂ ಜಾತಿಯ ನಡುವೆ ದ್ವೇಷವನ್ನು ಬಿತ್ತುವಂತಹ ಕೆಲಸ ಮಾಡುವುದಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಾರೆ ಎಂದು ತಿಳಿಸಿದರು.
ಬಿಜೆಪಿ ನಾಯಕರು 150 ಸ್ಥಾನಗಳನ್ನು ಗೆಲ್ಲುತ್ತೇವೆಂಬ ಭ್ರಮೆಯಲ್ಲಿದ್ದಾರೆ. ಇವರಿಗೆ ಈ ಭ್ರಮೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಸುಳ್ಳಾಗಿಸಬೇಕು. ಸಿದ್ದರಾಮಯ್ಯ ನೇತೃತ್ವದ ಸರಕಾರ ಜಾರಿ ಮಾಡಿರುವ ಜನಪ್ರಿಯ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದರು.
ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿ ಕಾರ್ಜುನ ಖರ್ಗೆ ಮಾತನಾಡಿ, ನಮ್ಮ ಸರಕಾರ ಜನಪ್ರಿಯ ಕಾರ್ಯಕ್ರಮಗಳ ಕುರಿತು ಪಕ್ಷದ ಕಾರ್ಯಕರ್ತರಿಗೆ ಸರಿ ಯಾಗಿ ತಿಳಿದಿರುವುದಿಲ್ಲ. ಹೀಗಾಗಿ ಕಾರ್ಯಕರ್ತರಿಗೆ ಕಾರ್ಯಾಗಾರಗಳನ್ನು ಮಾಡುವ ಮೂಲಕ ನಮ್ಮ ಕಾರ್ಯ ಕ್ರಮಗಳ ಕುರಿತು ಅರಿವು ಮೂಡಿಸಬೇಕು ಎಂದರು.ಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷ ಯಾವುದೆ ನಿಲುವನ್ನು ತೆಗೆದುಕೊಂಡರೂ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ಆರೋಪ ಮಾಡುವವರಿಗೆ ಗೊಂದಲವಿಲ್ಲದೆ ಸ್ಪಷ್ಟವಾಗಿ ಸಂದೇಶ ನೀಡುವಂತಿರಬೇಕು ಎಂದು ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಾತನಾಡಿ, ಈ ಹಿಂದೆಯೂ ಹಲವು ಬಾರಿ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ದಾಳಿಗಳು ನಡೆದಿವೆ. ಆದರೆ, ಅದನ್ನು ಬಿಜೆಪಿ ರೀತಿಯಲ್ಲಿ ರಾಜಕೀಯಕ್ಕೆ ಬಳಸಿಕೊಂಡಿಲ್ಲ. ಮೋದಿ ಸರಕಾರ ಸೈನಿಕರ ಮಧ್ಯೆದಲ್ಲಿಯೂ ರಾಜಕೀಯ ಮಾಡಲು ಹೊರಟಿರುವುದು ದುರದೃಷ್ಟಕರ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಾಕ್ಷಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯದ ತೀರ್ಪಿನಿಂದ ಖುಲಾಸೆಗೊಂಡಿರಬಹುದು. ಆದರೆ, ಪ್ರೇರಣಾ ಟ್ರಸ್ಟ್‌ನಿಂದ ಕೋಟ್ಯಂತರ ರೂ. ಪಡೆದಿರುವುದು ಸತ್ಯ ಎಂಬುದು ಜನತೆಗೆ ಗೊತ್ತಿದೆ. ಜನತೆಯ ದೃಷ್ಟಿಯಲ್ಲಿ ಅವರು ಇಂದಿಗೂ ತಪ್ಪಿತಸ್ಥರೇ.
-ಡಾ.ಜಿ.ಪರಮೇಶ್ವರ್, ಅಧ್ಯಕ್ಷ ಕೆಪಿಸಿಸಿ







