ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಪರಿಶೀಲಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು, ಅ.27: ಪ್ರಸ್ತುತ ಸಾಲಿನ ರಾಜ್ಯೋ ತ್ಸವ ಪ್ರಶಸ್ತಿಗೆ ಶಿಾರಸುಗೊಂಡಿರುವ ಸಾಧಕರ ಪಟ್ಟಿಯನ್ನು ರಾಜ್ಯ ಸರಕಾರವು ಬುಧವಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿ ಸಿದ ಬೆನ್ನಲ್ಲೇ ಗುರುವಾರ ಅರ್ಜಿದಾರರ ಪರ ವಕೀಲ ಶಂಕ್ರಪ್ಪ ಅವರಿಗೆ ನ್ಯಾಯ ಪೀಠವು ಅಭಿನಂದನೆಯನ್ನು ಸಲ್ಲಿಸಿ, ನ್ಯಾ.ನಾಗ ಮೋಹನ್ದಾಸ್ ನೇತೃತ್ವದ ಸಮಿತಿ ರಚಿಸಿ ರುವ ಮಾರ್ಗಸೂಚಿಗಳನ್ನು ಸರಕಾರ ಆದಷ್ಟು ಶೀಘ್ರವಾಗಿ ಅನುಷ್ಠಾನಕ್ಕೆ ತರುವಂತೆ ಸೂಚಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಹೈಕೋರ್ಟ್ ಸೂಚನೆ ಹಾಗೂ ಅರ್ಹತೆ ಇದ್ದರೂ ಸರಕಾರ ತಮಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿಲ್ಲ ಎಂದು ಆರೋಪಿಸಿ ಸಾಹಿತಿ ಬಿ.ವಿ.ಸತ್ಯನಾರಾಯಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಅಬ್ದುಲ್ ನಜೀರ್ ಅವರಿದ್ದ ನ್ಯಾಯಪೀಠ ರಾಜ್ಯೋತ್ಸವ ಪ್ರಶಸ್ತಿ ವಿತರಣೆಗೆ ಸಂಬಂಧಪಟ್ಟಂತೆ ನ್ಯಾ.ನಾಗಮೋಹನ್ದಾಸ್ ನೇತೃತ್ವದ ಸಮಿತಿ ರಚಿಸಿರುವ ಮಾರ್ಗಸೂಚಿಗಳನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರುವಂತೆ ಸೂಚಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಪ್ರಸ್ತುತ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೂರು ಜನರಿಗೆ ಏನಾದರೂ ಕೊಡಲಾಗುತ್ತಿದೆಯಾ ಎಂದು ಅರ್ಜಿದಾರರ ಪರ ವಕೀಲರಿಗೆ ನ್ಯಾಯಮೂರ್ತಿಗಳು ಹಾಸ್ಯ ಚಟಾಕಿ ಹಾರಿಸುತ್ತಿದ್ದಂತೆಯೇ ಪ್ರತಿಕ್ರಿಯಿಸಿದ ವಕೀಲರು ಅಷ್ಟೊಂದು ಜನರಿಗೆ ಪ್ರಶಸ್ತಿಯನ್ನು ನೀಡುವುದಿಲ್ಲ ಎಂದು ತಿಳಿಸಿದರು. ಪ್ರಸ್ತುತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತಿ ಬಿ.ವಿ.ಸತ್ಯ ನಾರಾಯಣ ಅವರನ್ನು ಆಯ್ಕೆ ಮಾಡಲು ಸಂಬಂಧಪಟ್ಟ ಇಲಾಖೆಗೆ ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ ಎಂದು ನ್ಯಾಯಪೀಠವು ತಿಳಿಸಿತು. ಅರ್ಜಿದಾರರ ಪರ ವಕೀಲ ಶಂಕ್ರಪ್ಪ ಅವರು ರಾಜ್ಯೋತ್ಸವ ಪ್ರಶಸ್ತಿ ವಿತರಣೆಗೆ ಸಂಬಂಧಪಟ್ಟಂತೆ ವಾದವನ್ನು ಮಂಡಿಸಿ ಉತ್ತಮ ಕೆಲಸವನ್ನು ಮಾಡಿದ್ದಾರೆ ಎಂದು ಅಭಿನಂದನೆಯನ್ನು ವ್ಯಕ್ತಪಡಿಸಿತು.