ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಬರಹ: ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲು
ಮಂಗಳೂರು, ಅ.28: ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲ ತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ಹಾಕಿದ್ದಾನೆಂದು ಆರೋಪಿಸಿ ಕಾಲೇಜಿನ ವಿದ್ಯಾರ್ಥಿಯೋರ್ವನ ಮೇಲೆ ಬಂದರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅತಾವುಲ್ಲಾ ಪೂಂಜಾಲಕಟ್ಟೆ ನಗರ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ಕ್ಯಾಂಪಸ್ ಫ್ರಂಟ್‌ನ ಜಿಲ್ಲಾ ನಾಯಕರಾಗಿದ್ದಾನೆ. ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಹಾಜರಾತಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯೊಂದನ್ನು ಹಾಕಿ ಇತರ ವಿದ್ಯಾರ್ಥಿಗಳಿಗೆ ಪ್ರಚೋದಿಸಿದ್ದಾನೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ ಎಂದು ಬಂದರು ಠಾಣಾ ಪೊಲೀಸರು ತಿಳಿಸಿದ್ದಾರೆ.
Next Story





