Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಚ್ಚಾಟಿತ ಶಾಸಕರ ಮರು ಸೇರ್ಪಡೆ ಅಸಾಧ್ಯ:...

ಉಚ್ಚಾಟಿತ ಶಾಸಕರ ಮರು ಸೇರ್ಪಡೆ ಅಸಾಧ್ಯ: ದೇವೇಗೌಡ

ಸುದ್ದಿಗೋಷ್ಠಿ,

ವಾರ್ತಾಭಾರತಿವಾರ್ತಾಭಾರತಿ28 Oct 2016 10:17 PM IST
share
ಉಚ್ಚಾಟಿತ ಶಾಸಕರ ಮರು ಸೇರ್ಪಡೆ ಅಸಾಧ್ಯ: ದೇವೇಗೌಡ

ಶಿವಮೊಗ್ಗ, ಅ. 28: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಮೇರೆಗೆ ಉಚ್ಚಾಟಿಸಲಾಗಿರುವ 9 ಶಾಸಕರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಇದು ಮುಗಿದ ಅಧ್ಯಾಯ ಎಂದು ಜೆಡಿಎಸ್ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಪಕ್ಷವನ್ನು ನಿರ್ನಾಮ ಮಾಡಬೇಕೆಂದು ಹೊರಟವರಿಗೆ ಸರಿಯಾದ ಪಾಠ ಕಲಿಸಲಾಗಿದೆ. ಪಕ್ಷದ ಸಂಘಟನೆಯ ಹೆಸರಿನಲ್ಲಿ ಮತ್ತೆ ಅವರನ್ನು ಕರೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಪಕ್ಷ ಸಂಘಟಿಸಲು ಉತ್ತಮ ಕಾರ್ಯಕರ್ತರು ಸಾಕು ಎಂದು ತಿಳಿಸಿದ್ದಾರೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪಕ್ಷ ಬಲಿಷ್ಠವಾಗಿಲ್ಲ. ಇಲ್ಲಿ ಪಕ್ಷವನ್ನು ಕಟ್ಟಲು ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸತತವಾಗಿ ರಾಜ್ಯ ಪ್ರವಾಸ ಮಾಡುವ ಮೂಲಕ ಎಲ್ಲ ಜಿಲ್ಲೆಯಲ್ಲಿ ಪಕ್ಷ ತನ್ನ ಅಸ್ತಿತ್ವವನ್ನು ಕಂಡುಕೊಳ್ಳುವಂತೆ ಮಾಡಲಾಗುವುದು ಎಂದರು.

ಕೇಂದ್ರದಲ್ಲಿರುವ ಸರಕಾರಗಳು ಸಿಬಿಐಯನ್ನು ಬಹು ಹಿಂದಿನಿಂದಲೂ ದುರುಪಯೋಗ ಪಡಿಸಿಕೊಳ್ಳುತ್ತಲೇ ಬರುತ್ತಿವೆ.

ಆ ಸಂಸ್ಥೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಇದರಿಂದ ಭ್ರಷ್ಟಾಚಾರದ ಆರೋಪ ಹೊತ್ತ ರಾಜಕಾರಣಿಗಳು ಸುಲಲಿತವಾಗಿ ಹೊರಬರುತ್ತಿದ್ದಾರೆ. ಭ್ರಷ್ಟರಿಗೆ ಸಿಬಿಐ ಹೆದರಿಕೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿಯೇ ಪ್ರತಿ ಘಟನೆಯನ್ನು ಸಿಬಿಐಗೆ ವಹಿಸಿ ಎಂಬ ಕೂಗು ಹಾಕಲಾಗುತ್ತಿದೆ ಎಂದರು.

ನ್ಯಾಯಾಲಯದ ಇತ್ತೀಚಿನ ಕೆಲವು ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸರಿಯಾದ ತೀರ್ಪು ಕೊಡುವವರಿಲ್ಲ. ಇದರಿಂದ ನ್ಯಾಯಾಂಗವನ್ನು ಸಹ ಸಾರ್ವತ್ರಿಕವಾಗಿ ಟೀಕಿಸುವ ಸಂದರ್ಭ ಎದುರಾಗಿದೆ. ಇದಕ್ಕೆ ಯಾರೊಬ್ಬರನ್ನೂ ದೂಷಿಸಲು ಸಾಧ್ಯವಿಲ್ಲ. ಇಡೀ ವ್ಯವಸ್ಥೆಯನ್ನು ಸುಧಾರಿಸಬೇಕಾದ ಕೆಲಸವಾಗಬೇಕು ಎಂದು ತಿಳಿಸಿದರು.

ರಾಜ್ಯದ ಹಿತರಕ್ಷಣೆಯನ್ನು ಕಾಪಾಡಲು ಪ್ರಾದೇಶಿಕ ಪಕ್ಷಗಳು ಆವಶ್ಯಕವಾಗಿವೆ. ರಾಷ್ಟ್ರೀಯ ಪಕ್ಷಗಳು ಹೈಕಮಾಂಡ್ ಹೆಸರಿನಲ್ಲಿ ನಿಯಂತ್ರಿಸಲ್ಪಡುತ್ತ, ರಾಷ್ಟ್ರೀಯ ಹಿತವನ್ನು ಗಮನಿಸುತ್ತಿದೆ.

ಇದರಿಂದ ಎಲ್ಲ ರಾಜ್ಯಗಳೂ ನ್ಯಾಯ ಸಿಗದೆ ಪರದಾಡುವಂತಾಗಿದೆ. ಕಾವೇರಿ ವಿಚಾರ, ಮಹಾದಾಯಿ ಸಮಸ್ಯೆ ಇವುಗಳ ಪರಿಹಾರಕ್ಕೆ ಪ್ರಾದೇಶಿಕ ಪಕ್ಷಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಗೋಷ್ಠಿಯಲ್ಲಿ ಶಾಸಕರಾದ ಮಧು ಬಂಗಾರಪ್ಪ, ಶಾರದಾ ಪೂರ್ಯನಾಯ್ಕಿ, ಎಂ.ಶ್ರೀಕಾಂತ್, ಮಾದಪ್ಪಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X