ಬೈಂದೂರು ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸ
![ಬೈಂದೂರು ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸ ಬೈಂದೂರು ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸ](https://www.varthabharati.in/sites/default/files/images/articles/2016/10/28/UD-O28-Byndoor.jpg)
ಉಡುಪಿ, ಅ.28: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿನ ಇತಿಹಾಸ ವಿಭಾಗದ ವತಿಯಿಂದ ಸ್ವಾತಂತ್ರ್ಯದ ನೆನಪುಗಳು ಎಂಬ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ನಾವುಂದ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಗಣೇಶ್ ಉಪನ್ಯಾಸ ನೀಡಿದರು. ಪ್ರಾಂಶುಪಾಲರಾದ ಪ್ರೊ.ಬಿ.ಎ ಮೇಳಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಉಮೇಶ್ ಮಯ್ಯ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕರಾದ ಶರಾವತಿ ಸ್ವಾಗತಿಸಿದರು. ಉಪನ್ಯಾಸಕ ವಿಘ್ನೇಶ್ವರ ವಂದಿಸಿದರು. ವಿದ್ಯಾರ್ಥಿನಿ ಪಿ.ಜಿ ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
Next Story