ಬಾಲಕಿಯೊಂದಿಗೆ ಅಸಭ್ಯ ವರ್ತನೆ: ಆರೋಪಿ ಸೆರೆ
ವೇಣೂರು, ಅ. 28: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದಾಡಿ ಎಂಬಲ್ಲಿ 10ರ ಹರೆಯದ ಬಾಲಕಿಯೊಂದಿಗೆ 52ರ ಹರೆಯದ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿ ಪೊಲೀಸರಿಂದ ಬಂಧಿತನಾಗಿದ್ದಾನೆ.
ಮುದ್ದಾಡಿ ನಿವಾಸಿ ಕೇಶವ ಮೊಯ್ಲಿ ಬಂಧಿತ ಆರೋಪಿ. ಅ.27ರ ಸಂಜೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ತಡೆದು ಅಸಭ್ಯವಾಗಿ ವರ್ತಿಸಿ ಅಶ್ಲೀಲವಾಗಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿ ಮನೆಗೆ ತೆರಳಿ ವಿಷಯ ತಿಳಿಸಿ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Next Story





