ಬಿಡಿಎ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ರಾಮಚಂದ್ರಾಪುರ ಮಠದಿಂದ ಜಮೀನು ಒತ್ತುವರಿ ವಿಚಾರ
ಬೆಂಗಳೂರು, ಅ.28: ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಲು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಬಿಡಿಎ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ ಎಂ.ಪವನ್ ಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಬೂದಿಹಾಳ ಅವರಿದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡತುರ್.ದಾರರ ಪರ ವಕೀಲ ಶಮಂತ್ ನಾಯಕ್ ವಾದಿಸಿ,ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದವರು ಗಿರಿನಗರದಲ್ಲಿ ಸಾರ್ವಜನಿಕರಿಗೆ ನಿವೇಶನಗಳ ನಿರ್ಮಾಣಕ್ಕೆ ಮೀಸಲಿಟ್ಟಿದ್ದ ಜಾಗವನ್ನು ರಾಮಚಂದ್ರಾಪುರ ಮಠದವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಬಿಡಿಎ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿದೆ.
Next Story





