Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಾಮಾಣಿಕತೆ-ನಿಷ್ಠೆ ಬ್ಯಾರಿ ಸಮಾಜದ...

ಪ್ರಾಮಾಣಿಕತೆ-ನಿಷ್ಠೆ ಬ್ಯಾರಿ ಸಮಾಜದ ಹೆಗ್ಗಳಿಕೆ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ29 Oct 2016 7:03 PM IST
share
ಪ್ರಾಮಾಣಿಕತೆ-ನಿಷ್ಠೆ ಬ್ಯಾರಿ ಸಮಾಜದ ಹೆಗ್ಗಳಿಕೆ: ಎಚ್.ಡಿ.ದೇವೇಗೌಡ

ಬೆಂಗಳೂರು, ಅ.29: ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಬ್ಯಾರಿ ಮುಸ್ಲಿಮ್ ಸಮಾಜವು ಪ್ರಾಮಾಣಿಕತೆ ಹಾಗೂ ನಿಷ್ಠೆಗೆ ಪ್ರಸಿದ್ಧಿಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದ ಅರಮನೆ ಮೈದಾನದಲ್ಲಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇ ಷನ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ವರ್ಷದ ಬ್ಯಾರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗ್ಗೊಂಡು ಅವರು ಮಾತನಾಡಿದರು.

ಬ್ಯಾರಿ ಮುಸ್ಲಿಮರು ಶಿಕ್ಷಣ, ವ್ಯಾಪಾರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮದೆ ಆದ ಛಾಪನ್ನು ಮೂಡಿಸಿದ್ದಾರೆ. ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣೆಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಸ್ವಾಗತಾರ್ಹ ಎಂದು ದೇವೇಗೌಡ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಗ್ರಾಮದಲ್ಲಿ ಫೌಝಿಯಾ ಹಾಗೂ ಸಮೀರಾ ಎಂಬ ಹೆಣ್ಣುಮಕ್ಕಳು ಪದವಿ ಕಾಲೇಜು ಪ್ರಾರಂಭ ಮಾಡಿರುವ ಸಾಧನೆಯು ಅಪ್ರತಿಮವಾದದ್ದು. ನನ್ನ ಸಂಸದರ ನಿಧಿಯಿಂದ ಈ ಹೆಣ್ಣುಮಕ್ಕಳು ಸ್ಥಾಪನೆ ಮಾಡಿರುವ ಕಾಲೇಜಿಗೆ ನೆರವು ನೀಡುವ ಬಗ್ಗೆ ಪರಿಶೀಲನೆ  ನಡೆಸುವುದಾಗಿ ಅವರು ಭರವಸೆ ನೀಡಿದರು.

“ಬಹುಸಂಸ್ಕೃತಿಗಳನ್ನು ಒಳಗೊಂಡಿರುವ ನಮ್ಮ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ. ಯಾವುದೆ ಕಾರಣಕ್ಕೂ ತಾನು ಇದಕ್ಕೆ ಅವಕಾಶ ನೀಡುವುದಿಲ್ಲ. ಈಗಾಗಲೆ ನನ್ನ ನಿಲುವನ್ನು ನಾನು ಸ್ಪಷ್ಪಡಿಸಿದ್ದೇನೆ ಎಂದು ದೇವೇಗೌಡ ಹೇಳಿದರು.

ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಂ.ಫಾರೂಕ್, ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಕಾರಣಾಂತರಗಳಿಂದ ಅವರು ಪರಾಭವಗೊಂಡರು. ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ, ಸೋಲಿನ ನಂತರವು ನಿಷ್ಠೆಯನ್ನು ಕಾಯ್ದುಕೊಳ್ಳುವುದು ಉತ್ತಮವಾದ ಗುಣ ಎಂದು ಅವರು ಹೇಳಿದರು.

ನಿಷ್ಠೆ ಹಾಗೂ ಪ್ರಾಮಾಣಿಕತೆ ಬ್ಯಾರಿ ಸಮಾಜದ ಪ್ರತಿಯೊಬ್ಬರಲ್ಲೂ ಇದೇ ಎನ್ನುವುದಕ್ಕೆ ಫಾರೂಕ್ ಉದಾಹರಣೆ. ಮುಂದಿನ ಚುನಾವಣೆಯವರೆಗೆ ನಾನು ಜೀವಂತವಾಗಿದ್ದರೆ ಈಗ ಸಚಿವ ಯು.ಟಿ.ಖಾದರ್ ಕೂತಿರುವ ಸ್ಥಾನದಲ್ಲಿ ಅವರನ್ನು ಕೂರಿಸುತ್ತೇನೆ ಎಂದು ದೇವೇಗೌಡ ಹೇಳಿದರು.

ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಬಿ.ಎ. ಮೊಹಿಯುದ್ದೀನ್ ಬಾವ, ಜೆಡಿಎಸ್ ಮುಖಂಡ ಶಫೀವುಲ್ಲಾ ಸೇರಿದಂತೆ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಗ್ರಾಮದಲ್ಲಿ ಪದವಿ ಕಾಲೇಜು ಪ್ರಾರಂಭಿಸಿರುವ ಫೌಝಿಯಾ ಹಾಗೂ ಸಮೀರಾರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

 ಮಾಜಿ ಶಿಕ್ಷಣ ಸಚಿವ ಬಿ.ಎ.ಮೊಯ್ದೀನ್‌ರಿಗೆ ‘ವರ್ಷದ ಬ್ಯಾರಿ ಪುರಸ್ಕಾರ’ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಪ್ರದಾನ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X