ಅ.30ರಂದು ಜಿಲ್ಲಾ ಅಲ್ಪಸಂಖ್ಯಾತರ ಭವನ ಉದ್ಘಾಟನೆ
ಮಂಗಳೂರು, ಅ. 29: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪಾಂಡೇಶ್ವರದ ಓಲ್ಡ್‌ಕೆಂಟ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾ ಅಲ್ಪಸಂಖ್ಯಾತರ ಭವನದ ಉದ್ಘಾಟನಾ ಸಮಾರಂಭವು ಅ.30ರಂದು ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್ ಭವನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಜೆ.ಆರ್.ಲೋಬೊ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಶಾಸಕರಾದ ಅಭಯಚಂದ್ರ ಜೈನ್, ವಸಂತ ಬಂಗೇರ, ಎಸ್.ಅಂಗಾರ, ಮೊಹಿಯುದ್ದೀನ್ ಬಾವ, ಶಕುಂತಲಾ ಶೆಟ್ಟಿ, ಐವನ್ ಡಿಸೋಜ, ಕ್ಯಾ.ಗಣೇಶ್ ಕಾರ್ಣಿಕ್, ಕೋಟ ಶ್ರೀನಿವಾಸ ಪೂಜಾರಿ, ಕೆ.ಪ್ರತಾಪ್‌ಚಂದ್ರ ಶೆಟ್ಟಿ, ಮೇಯರ್ ಹರಿನಾಥ್, ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್, ಪೊಲೀಸ್ ಮಿಷನರ್ ಎಂ.ಚಂದ್ರಶೇಖರ್, ಎಸ್ಪಿ ಭೂಷಣ್ ಗುಲಾಬ್‌ರಾವ್ ಬೊರಸೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕ ಅಕ್ರಮ್ ಪಾಶ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಡಾ.ಕೃಪಾ ಅಮರ್ ಆಳ್ವ, ದಿವ್ಯಪ್ರಭಾ ಗೌಡ, ಬಿ.ಎ.ಮುಹಮ್ಮದ್ ಹನೀಫ್, ರಾಯ್ ಕ್ಯಾಸ್ತಲಿನೊ, ಜಾನಕಿ ಎಂ.ಬ್ರಹ್ಮಾವರ, ಮುಹಮ್ಮದ್ ಮೋನು, ಮುಹಮ್ಮದ್ ಮೊಹ್ಸಿನ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.





