ಮಾಣಿ: ಅಪಘಾತದ ಗಾಯಾಳು ಮೃತ್ಯು
ಬಂಟ್ವಾಳ, ಅ. 30: ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಮಾಣಿ ಬಾಲ ವಿಕಾಸ ಶಾಲೆಯ ಬಸ್ ಚಾಲಕ ವಲ್ಟಿ ಎಂಬವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
15 ದಿವಸದ ಹಿಂದೆ ಮಾಣಿ ಸಮೀಪ ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಅವರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಶಾಲೆಯಿಂದ ಬೈಕ್ ನಲ್ಲಿ ಮನೆಗೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿತ್ತು.
ಮಾಣಿ ಸುಲ್ತಾನ್ ಪೆಟ್ರೋಲ್ ಬಂಕ್ ಬಳಿಯ ನಿವಾಸಿಯಾಗಿದ್ದ ವಲ್ಟಿಯವರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ..
Next Story





