Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಜಯಂತಿ ಸರಕಾರದ ಕಾರ್ಯಕ್ರಮ

ಟಿಪ್ಪು ಜಯಂತಿ ಸರಕಾರದ ಕಾರ್ಯಕ್ರಮ

ಟಿಪ್ಪು ಅಭಿಮಾನಿ ವೇದಿಕೆ

ವಾರ್ತಾಭಾರತಿವಾರ್ತಾಭಾರತಿ30 Oct 2016 10:02 PM IST
share
ಟಿಪ್ಪು ಜಯಂತಿ ಸರಕಾರದ ಕಾರ್ಯಕ್ರಮ

ಮಡಿಕೆೇರಿ, ಅ.30: ಟಿಪ್ಪುಸುಲ್ತಾನ್ ಕೆೇವಲ ಮುಸಲ್ಮಾನರಿಗೆ ಸೀಮಿತವಾದ ವ್ಯಕ್ತಿಯಲ್ಲವೆಂದು ಅಭಿಪ್ರಾಯಪಟ್ಟಿರುವ ಟಿಪ್ಪುಅಭಿಮಾನಿ ವೇದಿಕೆ, ಟಿಪ್ಪುಜಯಂತಿಯನ್ನು ಘೋಷಿಸಿರುವ ಸರಕಾರವೇ ಜಯಂತಿ ಆಚರಣೆಯನ್ನು ಶಾಂತಿಯುತವಾಗಿ ಮಾಡಲಿ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಹಾಕ್ ಖಾನ್ ಮಾತನಾಡಿ, ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಕೊಡಗು ಜಿಲ್ಲೆಯಲ್ಲಿ ಟಿಪ್ಪುಜಯಂತಿ ಶಾಂತಿಯುತವಾಗಿ ನಡೆಯಬೇಕೆನ್ನುವುದೇ ನಮ್ಮ ಉದ್ದೇಶವೆಂದರು. ಟಿಪ್ಪುಸುಲ್ತಾನ್ ಮುಸ್ಲಿಮ್ ಎನ್ನುವ ಹೆಮ್ಮೆಯನ್ನು ನಾವು ಹೊಂದಿದ್ದೇವೆಯೇ ಹೊರತು ಟಿಪ್ಪುಒಂದು ಸಮುದಾಯಕ್ಕೆ ಸೇರಿದವರಲ್ಲವೆಂದು ತಿಳಿಸಿದರು.

 ಮುಸಲ್ಮಾನರು ಜಯಂತಿ ಆಚರಿಸಿ ಎಂದು ಕೇಳಿ ಕೊಂಡಿರಲಿಲ್ಲ. ಆದರೆ ಸರಕಾರ ಟಿಪ್ಪು ನಡೆಸಿದ ಉತ್ತಮ ಆಡಳಿತವನ್ನು ನೋಡಿಯೇ ಜಯಂತಿ ಆಚರಣೆಯ ನಿರ್ಧಾರಕ್ಕೆ ಬಂದಿದೆ. ಕಳೆದ ಬಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ನಡೆದ ಕಾರಣ ಗಲಭೆ ನಡೆದಿರಬಹುದೆಂದು ಅಭಿಪ್ರಾಯಪಟ್ಟ ಇಸ್ಹಾಕ್ ಖಾನ್ ಈ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆಯುವ ಟಿಪ್ಪುಜಯಂತಿ ಸರಕಾರಿ ಜಯಂತಿಯಾಗಿಯೇ ಶಾಂತಿಯುತವಾಗಿ ನಡೆಯಲಿ ಎಂದರು.

ಟಿಪ್ಪುವಿನ ವಿಚಾರದಲ್ಲಿ ವಿವಾದ ಸೃಷ್ಟಿಸಿರುವುದು ದುರಂತವೆಂದು ಅಭಿಪ್ರಾಯಪಟ್ಟ ಅವರು , ಕೊಡಗು ಜಿಲ್ಲೆಯಲ್ಲಿ ಕೋಮು ಗಲಭೆ ನಡೆಯಲು ಟಿಪ್ಪು ವಿಚಾರವೊಂದೇ ಕಾರಣವಲ್ಲ ಎಂದರು. ಕೊಡವರು ಹಾಗೂ ಕೊಡಗಿನ ಮೇಲೆ ಮುಸಲ್ಮಾನರಿಗೆ ಅಪಾರ ಅಭಿಮಾನವಿದೆ. ಆದರೆ, ಕೆಲವರು ಕೋಮುವಾದವನ್ನು ಬಂಡವಾಳ ಮಾಡಿಕೊಂಡು ಹಿಂದೂ ಹಾಗೂ ಮುಸ್ಲಿಮರ ನಡುವೆ ಬಿರುಕು ಮೂಡಿಸಿ ಲಾಭ ಪಡೆಯುವ ಕುತಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಇಸ್ಲಾಮಿನಲ್ಲಿ ವ್ಯಕ್ತಿಪೂಜೆ ಇಲ್ಲ, ಆದರೆ, ಟಿಪ್ಪುವನ್ನು ವಿರೋಧಿಸುವವರೇ ಟಿಪ್ಪು ಜಯಂತಿ ಆಚರಿಸುವ ಅನಿವಾರ್ಯತೆಯನ್ನು ಸೃಷ್ಟಿಸಿದರು ಎಂದು ಅವರು ಅಭಿಪ್ರಾಯಪಟ್ಟರು. ಜಿಲ್ಲೆಯಲ್ಲಿ ಶಾಂತಿ ಕಾಪಾಡುವುದು ಮುಸಲ್ಮಾನರು ಮಾತ್ರವಲ್ಲ ಉಭಯ ಕಡೆಗಳಿಂದಲೂ ಶಾಂತಿಗಾಗಿ ಸಹಕಾರ ದೊರೆಯಬೇಕಾಗಿದೆ. ಇತ್ತೀಚೆಗೆ ದಕ್ಷಿಣ ಕೊಡಗಿನಲ್ಲಿ ಇಬ್ರಾಹೀಂ ಎಂಬವರು ನೀಡಿದ ಹೇಳಿಕೆ ಅರ್ಥಹೀನವಾಗಿದ್ದು, ಅವರು ಒತ್ತಡದಿಂದ ಜೀವನ ಸಾಗಿಸುವ ಅಗತ್ಯವಿಲ್ಲ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮಗಿಷ್ಟ ಬಂದಲ್ಲಿ ಇದ್ದುಕೊಂಡು ಜೀವನ ಸಾಗಿಸಲಿ ಎಂದರು.

ಟಿಪ್ಪು ಜಯಂತಿಯನ್ನು ಮುಸಲ್ಮಾನರು ದೊಡ್ಡ ವಿಷಯವೆಂದು ತಿಳಿದುಕೊಳ್ಳಬಾರದು. ಸರಕಾರಿ ಕಾರ್ಯಕ್ರಮವಾಗಿರುವುದರಿಂದ ಸರಕಾರವೇ ಇದನ್ನು ನಿಭಾಯಿಸಿ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲಿ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಸದಸ್ಯರಾದ ಜಬ್ಬಾರ್, ನಿಸಾರ್ ಹಾಗೂ ರಝಾಕ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X