ಜಮ್ಮು -ಕಾಶ್ಮೀರದ ಸರಕಾರಿ ಶಾಲೆಗಳಿಗೆ ರಕ್ಷಣೆ ನೀಡಲು ಹೈಕೋರ್ಟ್ ಹುಕುಂ

ಜಮ್ಮು, ಅ.31: ಜಮ್ಮು ಮತ್ತು ಕಾಶ್ಮೀರದಲ್ಲಿ ಸರಕಾರಿ ಶಾಲೆಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟ್ ಶಾಲೆಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಸರಕಾರಕ್ಕೆ ಆದೇಶ ನೀಡಿದೆ.
ಶಾಲೆಗಳ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಹೈಕೋರ್ಟ್ ಶಾಲೆಗಳಿಗೆ ರಕ್ಷಣೆ ನೀಡಿ ಶಿಕ್ಷಣ ವಿರೋಧಿಗಳನ್ನು ಮಟ್ಟ ಹಾಕುವಂತೆ ಖಡಕ್ ಎಚ್ಚರಿಕೆ ನೀಡಿದೆ. ಪ್ರಕರಣದ ವಿಚಾರಣೆಯನ್ನು ನ.7ಕ್ಕೆ ಮುಂದೂಡಿದೆ.
ಕಳೆದ ಮೂರು ತಿಂಗಳಲ್ಲಿ 25ಕ್ಕೂ ಅಧಿಕ ಶಾಲೆಗಳ ಮೇಲೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.
Next Story





