ಹೊಂಡಕ್ಕೆ ಬಿದ್ದು ಜಿಂಕೆ ಸಾವು
ಕೋಲಾರ, ಅ.31: ಕೃಷಿ ಹೊಂಡದಲ್ಲಿ ಬಿದ್ದು ಜಿಂಕೆಯೊಂದು ಸಾವನ್ನಪ್ಪಿದ ಘಟನೆ ತಾಲೂಕಿನ ಬೈರಾಂಡಹಳ್ಳಿ ಗ್ರಾಮದ ಬಳಿ ನಡೆದಿದೆ.
ಇಲ್ಲಿನ ರೈತ ಮಂಜುನಾಥ್ ಎಂಬುವರಿಗೆ ಸೇರಿದ ಕೃಷಿ ಹೊಂಡಕ್ಕೆ ನೀರು ಕುಡಿಯಲು ಬಂದ ಜಿಂಕೆ ಕಾಲುಜಾರಿ ಬಿದ್ದು ನೀರಿನಲ್ಲಿ ಮುಳುಗಿ ಅಸುನೀಗಿದೆ.
ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೇಮಗಲ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
Next Story





