ದಿಲ್ಲಿ : ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ
.jpg)
ಹೊಸದಿಲ್ಲಿ,ಅ.31: ದಿಲ್ಲಿ ಪೊಲೀಸ್‌ನ ವಿಶೇಷ ಘಟಕದ ಹೆಡ್ ಕಾನ್‌ಸ್ಟೇಬಲ್ ಓರ್ವರು ಇಲ್ಲಿಯ ಬ್ರಹ್ಮಪುರಿ ಪ್ರದೇಶದಲ್ಲಿ ತನ್ನ ಪತ್ನಿಯ ಕಣ್ಣೆದುರಿಗೇ ತನ್ನ ಸರ್ವಿಸ್ ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜ್ಞಾನೇಂದ್ರ ರಥಿ(38) ಅವರು ಅ.30ರಂದು ನಸುಕಿನ ಒಂದು ಗಂಟೆಯ ಸುಮಾರಿಗೆ ಪತ್ನಿಯೊಂದಿಗೆ ಜಗಳವಾಡಿದ ಬಳಿಕ ಈ ಕೃತ್ಯವನ್ನೆಸಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಸೋಮವಾರ ತಿಳಿಸಿದರು.
ರಥಿ ಮದ್ಯ ಸೇವಿಸಿ ಆಗಾಗ್ಗೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದರು. ಶನಿವಾರವೂ ತಡರಾತ್ರಿ ಆಹಾರ ತಯಾರಿಸುವ ಬಗ್ಗೆ ಪತಿ-ಪತ್ನಿ ನಡುವೆ ಜಗಳವಾಗಿತ್ತು. ಈ ಜಗಳದ ಬಳಿಕ ತನ್ನ ಸ್ಥಿಮಿತವನ್ನು ಕಳೆದುಕೊಂಡ ಜ್ಞಾನೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು. 12 ವರ್ಷಗಳ ಹಿಂದೆ ರಥಿ ವಿವಾಹವಾಗಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ.
Next Story





