ನ.3ಕ್ಕೆ ಕರಾವಳಿ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸಭೆ
ಉಡುಪಿ, ಅ.31: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಇರುವ ಹಲವು ಸಮಸ್ಯೆಗಳ ಕುರಿತು ವ್ಯಾಪಕವಾಗಿ ಚರ್ಚಿಸಲು ಮುಖ್ಯಮಂತ್ರಿಗಳು ನ.3ರಂದು ಬೆಳಗ್ಗೆ 11:15ಕ್ಕೆ ವಿದಾನಸೌಧದ 3ನೇ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ (ನಂ.313)ರಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಕರೆದಿದ್ದಾರೆ.
ಈ ಸಭೆಯಲ್ಲಿ ಗಣಿ ಇಲಾಖೆಗೆ ಸಂಬಂಧಿಸಿದಂತೆ ಮರಳು ಸಮಸ್ಯೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸಂಬಂಧಿಸಿದ ಬಿಳಿ ಸೀಮೆ ಎಣ್ಣೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ 9/11 ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಪದನಿಮಿತ್ತ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
Next Story





