ಬಿಜೆಪಿಯಿಂದ ರಾಜಕೀಯಕ್ಕಾಗಿ ಸೈನಿಕರ ಬಳಕೆ: ಮಲ್ಲಿಕಾರ್ಜುನ ಖರ್ಗೆ
ಮಾಜಿ ಪ್ರಧಾನಿ ಇಂದಿರಾಗಾಂಧಿ ಹುತಾತ್ಮ ದಿನ

ಬೆಂಗಳೂರು, ಅ.31: ದೇಶದ ಹಿತಕ್ಕಾಗಿ ಶ್ರಮಿಸುವ ಸೈನಿಕರನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳು ತ್ತಿದೆ ಎಂದು ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ನಗರದ ಕೆಪಿಸಿಸಿ ಕಚೇರಿ ಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 32ನೆ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೇಶ ಕಾಯುವ ಸೈನಿಕರನ್ನು ಭಾಗ ಮಾಡಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಹೊರಟಿದೆ. ಅಲ್ಲದೆ, ಇಷ್ಟು ದಿನ ಅವರಿಗೆ ಸೈನಿಕರು ನೆನಪಾಗಲಿಲ್ಲವೇಕೆ ಎಂದು ಪ್ರಶ್ನಿಸಿದ ಅವರು, ಸೈನಿಕರನ್ನು ಪಕ್ಷಕ್ಕೆ ಸೀಮಿತಗೊಳಿಸುವ ಕೆಲಸ ಮಾಡುತ್ತಿರುವುದು ಖಂಡನೀಯ. ಇತ್ತೀಚೆಗೆ ನಡೆದ ಸೀಮಿತ ದಾಳಿ ಸೈನಿಕರ ಯಶಸ್ಸು. ಅದನ್ನು ಅವರಿಗೆ ಬಿಡುವುದನ್ನು ಬಿಟ್ಟು, ಉತ್ತರಪ್ರದೇಶದ ಚುನಾವಣೆಗೆ ಬಿಜೆಪಿ ರಾಜಕೀ ಯಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು. ತ್ತೀಚೆಗೆ ನಡೆದ ಸರ್ಜಿಕಲ್ ದಾಳಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿ ರುವುದು ಸರಿಯಲ್ಲ. ಸೈನಿಕರು ದೇಶದ ಹೆಮ್ಮೆ. ಅವರು ಮಾಡಿದ ಕೆಲಸವನ್ನು ಎಲ್ಲರೂ ಗೌರವಿಸಬೇಕು. ಅದನ್ನು ಬಿಟ್ಟು ನಮ್ಮದು ಎಂದು ಬಿಂಬಿಸಿಕೊಳ್ಳುವುದು ಸರಿಯಲ್ಲ. ಅದು ಅಲ್ಲದೆ, ಸೈನಿಕರು ಸರ್ಜಿಕಲ್ ದಾಳಿ ನಡೆಸಿರುವುದು ಇದೇ ಮೊದಲಲ್ಲ. ಇಂದಿರಾಗಾಂಧಿ ಮತ್ತು ಕಾಂಗ್ರೆಸ್ ಸರಕಾರ ಇದ್ದಾಗಲೂ ಸರ್ಜಿಕಲ್ ದಾಳಿ ನಡೆದಿದೆ. ಆಗ ಕಾಂಗ್ರೆಸ್ ಪಕ್ಷ ಸೈನಿಕರ ಯಶಸ್ಸನ್ನು ತಮ್ಮದೆಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.ಂದಿರಾ ಕೊಡುಗೆ ಅಪಾರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶ ಮತ್ತು ಪಕ್ಷಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಪಕ್ಷದ ಅಭಿವೃದ್ಧಿಗಾಗಿ ಹಲವು ಕಷ್ಟಗಳನ್ನು ಅನುಭವಿಸಿದ್ದಾರೆ. ಬಡತನ ನಿರ್ಮೂಲನೆಗೆ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ, ಯಶಸ್ವಿಗೊಳಿಸಿದ್ದಾರೆ. ಇಂತಹ ವ್ಯಕ್ತಿತ್ವದ ನಾಯಕಿಯನ್ನು ಪ್ರಪಂಚವೇ ನೆನಪು ಮಾಡಿಕೊಳ್ಳುತ್ತಿದೆ ಎಂದು ಖರ್ಗೆ ಹೇಳಿದರು.
ಬಿಜೆಪಿ ಅಂದು ದುರ್ಗೆ ಎನ್ನುತ್ತಿತ್ತು: ಇಂದಿರಾಗಾಂಧಿಯ ಆಡಳಿತ ವೈಖರಿ ಕಂಡು ಅಂದಿನ ಜನಸಂಘ ಮತ್ತು ಆರೆಸ್ಸೆಸ್ ನಾಯಕರು ಇಂದಿರಾರನ್ನು ‘ದುರ್ಗೆ’ ಎಂದು ಹೇಳುತ್ತಿತ್ತು. ಆದರೆ, ಇದೀಗ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, ಮಾಜಿ ಶಾಸಕ ನಝೀರ್ ಅಹ್ಮದ್ ಮೊದಲಾದವರು ಉಪಸ್ಥಿತರಿದ್ದರು.





